ಅತ್ಯಾಚಾರ ಪ್ರಕರಣ: BJP ಶಾಸಕ ಮುನಿರತ್ನಗೆ ಕೊನೆಗೂ ಜಾಮೀನು
ರಾಮನಗರದ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಮುನಿರತ್ನಗೆ ಕೋರ್ಟ್ ಜಾಮೀನು ನೀಡಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುನಿರತ್ನ ಅವರಿಗೆ ಜಾಮೀನು ನೀಡಿದೆ.

ಬೆಂಗಳೂರು: ದಲಿತ ಸಮುದಾಯದ ಗುತ್ತಿಗೆದಾರನಿಗೆ ಬೆದರಿಕೆ, ಜಾತಿನಿಂದನೆ ಪ್ರಕರಣದಲ್ಲಿ ಜೈಲು ಸೇರಿ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ ಇದೀಗ ಅತ್ಯಾಚಾರ ಪ್ರಕರಣದಲ್ಲೂ ಬಿಗ್ ರಿಲೀಫ್ ಸಿಕ್ಕಿದೆ.
ರಾಮನಗರದ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುನಿರತ್ನ ಅವರಿಗೆ ಜಾಮೀನು ನೀಡಿದೆ.
ಮಂಗಳವಾರ ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಿದ ಬೆಂಗಳೂರು ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಮುನಿರತ್ನಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿದ್ದಾರೆ.
ಪೊಲೀಸರ ತನಿಖೆಗೆ ಸಹಕಾರ ನೀಡುವುದು, ಸಾಕ್ಷಿಗಳನ್ನು ನಾಶಪಡಿಸದಿರುವುದು, ಸಾಕ್ಷ್ಯಾಧಾರರ ಮೇಲೆ ಪ್ರಭಾವ ಬೀರದಿರುವುದು ಮತ್ತು ಇಬ್ಬರ ಶ್ಯೂರಿಟಿ ಮೇಲೆ ಜಾಮೀನು ನೀಡಿದ್ದಾರೆ.
ಅಂದಹಾಗೆ ರಾಮನಗರ ಜಿಲ್ಲೆಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರಿನ ಆಧಾರದ ಮೇಲೆ ಎಸ್‌ಐಟಿ ಅಧಿಕಾರಿಗಳು ಮುನಿರತ್ನ ಅವರನ್ನು ಬಂಧಿಸಿದ್ದರು. ಮುನಿರತ್ನ ಅವರು ಅಧಿಕಾರ ದುರುಪಯೋಗಪಡಿಸಿಕೊಂಡು ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತ ಮಹಿಳೆಯೊಬ್ಬರು ದೂರು ನೀಡಿದ್ದರು.
ಈ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌ಐಟಿಗೆ ವಹಿಸಿತ್ತು. ಬಿಬಿಎಂಪಿ ಗುತ್ತಿಗೆದಾರರೊಬ್ಬರಿಗೆ ಜಾತಿ ನಿಂದನೆ, ಪ್ರಾಣ ಬೆದರಿಕೆ ಹಾಕಿದ ಹಿನ್ನಲೆಯಲ್ಲಿ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದರು. ನಂತರ ನ್ಯಾಯಾಲಯ ಅವರಿಗೆ ಜಾಮೀನು ನೀಡಿತ್ತು. ಆದರೆ ಮಹಿಳೆ ನೀಡಿದ ದೂರಿನನ್ವಯ ಎಸ್‌ಐಟಿ ಪೊಲೀಸರು ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬರುತ್ತಿದ್ದಂತೆ ಮುನಿರತ್ನ ಅವರನ್ನು ಬಂಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


