ಹೃದಯವಿದ್ರಾವಕ ಘಟನೆ: ಜಮೀನಿಗೆ ತೆರಳಿದ್ದಾಗ ಉರುಳಿಬಿದ್ದ ಬಂಡೆ, ಮಕ್ಕಳಿಬ್ಬರು ಸೇರಿ ಮೂವರು ಸಾವು!
ದಸರಾ ರಜೆ ಹಿನ್ನೆಲೆಯಲ್ಲಿ ಮಕ್ಕಳು ಪೋಷಕರ ಜೊತೆಗೆ ಜಮೀನಿಗೆ ಹೋಗಿದ್ದರು. ಇದೇ ವೇಳೆ ಜಮೀನಿನ ಬದುವಿನಲ್ಲಿ ಹಾಕಲಾಗಿದ್ದ ಕಲ್ಲು ಬಂಡೆಗಳ ಸುತ್ತಮುತ್ತ ಮಕ್ಕಳು ಆಟವಾಡುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ರಾಯಚೂರು: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಡೂರು ತಾಂಡಾದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಹೊಲದ ಬದುವಿಗೆ ಹಾಕಿದ್ದ ಬೃಹತ್ ಗಾತ್ರದ ಬಂಡೆಯೊಂದು ಉರುಳಿಬಿದ್ದು ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಮೃತರನ್ನು 8 ವರ್ಷದ ವೈಶಾಲಿ, 9 ವರ್ಷದ ಮಂಜುನಾಥ್ ಎಂದು ಗುರುತಿಸಲಾಗಿದೆ. ಮತ್ತೋರ್ವನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ರಘು ಎಂಬಾತ ಮೃತಪಟ್ಟಿದ್ದಾನೆ.
ದಸರಾ ರಜೆ ಹಿನ್ನೆಲೆಯಲ್ಲಿ ಮಕ್ಕಳು ಪೋಷಕರ ಜೊತೆಗೆ ಜಮೀನಿಗೆ ಹೋಗಿದ್ದರು. ಇದೇ ವೇಳೆ ಜಮೀನಿನ ಬದುವಿನಲ್ಲಿ ಹಾಕಲಾಗಿದ್ದ ಕಲ್ಲು ಬಂಡೆಗಳ ಸುತ್ತಮುತ್ತ ಮಕ್ಕಳು ಆಟವಾಡುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



