ರಾಜ್ಯ

ದಾವಣಗೆರೆ: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ; 48 ಆರೋಪಿಗಳಿಗೆ ಜಾಮೀನು!

ಕಲ್ಲು ತೂರಾಟದ ಬಳಿಕ ಗಲಭೆಗೆ ಸಂಬಂಧ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಹಿಂದೂ ಜಾಗರಣಾ ವೇದಿಕೆಯ ಸಂಚಾಲಕ ಸತೀಶ್ ಪೂಜಾರಿಗೆ ಜಾಮೀನು ಸಿಕ್ಕಿದ್ದು ಅದ್ಧೂರಿ ಸ್ವಾಗತ ದೊರೆತಿದೆ.

ದಾವಣಗೆರೆ: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ; 48 ಆರೋಪಿಗಳಿಗೆ ಜಾಮೀನು!
ಗಣೇಶ ಮೆರವಣಿಗೆ
Published On :

ದಾವಣಗೆರೆ: ದಾವಣಗೆರೆಯಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 48 ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ.

ಸೆಪ್ಟೆಂಬರ್ 19ರಂದು ದಾವಣಗೆರೆಯ ಅರಳಿಮರ ಸರ್ಕಲ್​ ಬಳಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿತ್ತು. ಅಜಾದ್ ನಗರ ಮುಖ್ಯ ರಸ್ತೆಯಿಂದ ಮೊದಲು ಕಲ್ಲು ತೂರಿದ್ದು ಇಬ್ಬರು ಪೊಲೀಸರು ಗಾಯಗೊಂಡಿದ್ದರು. ಈ ವೇಳೆ ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ-ಮುಸ್ಲಿಂ ಸೇರಿ 48 ಆರೋಪಿಗಳಿಗೆ ಕೋರ್ಟ್​ ಜಾಮೀನು ನೀಡಿದೆ.

ಕಲ್ಲು ತೂರಾಟದ ಬಳಿಕ ಗಲಭೆಗೆ ಸಂಬಂಧ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಹಿಂದೂ ಜಾಗರಣಾ ವೇದಿಕೆಯ ಸಂಚಾಲಕ ಸತೀಶ್ ಪೂಜಾರಿಗೆ ಜಾಮೀನು ಸಿಕ್ಕಿದ್ದು ಅದ್ಧೂರಿ ಸ್ವಾಗತ ದೊರೆತಿದೆ. ಸತೀಶ್ ಪೂಜಾರಿ ಮನೆಯ ಸುತ್ತಮುತ್ತ ನೆರೆದಿದ್ದ ಹಿಂದೂ ಯುವಕರು ಜೈಕಾರ ಹಾಕಿ ಬರ ಮಾಡಿಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.