ರಾಜ್ಯ

MUDA Scam ಮತ್ತೊಂದು ತಲೆದಂಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ಕೆ ಮರಿಗೌಡ ರಾಜೀನಾಮೆ

ಸಿಎಂ ಸೂಚನೆ ಹಿನ್ನೆಲೆ ವಿಕಾಸಸೌಧದಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್​ಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಕೆ.ಮರಿಗೌಡ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

MUDA Scam ಮತ್ತೊಂದು ತಲೆದಂಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ಕೆ ಮರಿಗೌಡ ರಾಜೀನಾಮೆ
ಕೆ ಮರಿಗೌಡ
Published On :

ಮೈಸೂರು: ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರನ್ನು ಇನ್ನಿಲ್ಲದಂತೆ ಕಾಡುತ್ತಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಹಗರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ತಲೆದಂಡವಾಗಿದ್ದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ಕೆ ಮರಿಗೌಡ ರಾಜೀನಾಮೆ ನೀಡಿದ್ದಾರೆ.

ಸಿಎಂ ಸೂಚನೆ ಹಿನ್ನೆಲೆ ವಿಕಾಸಸೌಧದಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್​ಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಕೆ.ಮರಿಗೌಡ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಜಿನಾಮೆಗೂ ಮುನ್ನ ಸಿಎಂ ಭೇಟಿ ಮಾಡಿದ್ದ ಮರಿಗೌಡ

ಇನ್ನು ರಾಜೀನಾಮೆ ವಿಚಾರವಾಗಿ ಇಂದು ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಮುಡಾ ಅಧ್ಯಕ್ಷ ಕೆ.ಮರಿಗೌಡ‌ ಭೇಟಿ ಮಾಡಿದ್ದರು. ಆ ಮೂಲಕ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ ಕೋಡುವುದು ಖಚಿತ ಎನ್ನಲಾಗಿತ್ತು. ಕೆಲ ಕಾಲ ಸಿದ್ದರಾಮಯ್ಯ ಜೊತೆ ಮಾತನಾಡಿರುವ ಮರಿಗೌಡ, ಸಿಎಂ ಸೂಚಿನೆ ಮೇರೆಗೆ ರಾಜೀನಾಮೆ ನೀಡಿದ್ದು, ಇಂದು ಅಧಿಕಾರಿಗಳಿಗೆ ರಾಜೀನಾಮೆ ಪತ್ರ ನೀಡಿದ್ದಾರೆ ಎನ್ನಲಾಗಿದೆ.

ಸಿಎಂ ರಾಜಿನಾಮೆಗೆ ನಿರಂತರ ಒತ್ತಡ

ಅಂತೆಯೇ ಮುಡಾ ಪ್ರಕರಣದಿಂದ ಸರ್ಕಾರ ತೀವ್ರ ಮುಜುಗರಕ್ಕೆ ಸಿಲುಕಿದೆ. ಪ್ರಕರಣದ ತನಿಖೆ ಕೂಡ ತೀವ್ರಗೊಂಡಿದ್ದು, ವಿರೋಧ ಪಕ್ಷಗಳು ಸಿಎಂ ಸಿದ್ದರಾಮಯ್ಯ ರಾಜೀನಾಮಗೆ ಆಗ್ರಹಿಸುತ್ತಲೇ ಇದ್ದಾರೆ. ನಿನ್ನೆ ಕೂಡ ಸಿಎಂ ಸಿದ್ದರಾಮಯ್ಯ ರಾಜಿನಾಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.