ರಾಜ್ಯ

Namma Metro: ನೇರಳೆ ಮಾರ್ಗದಲ್ಲಿ ಹಳಿ ಮೇಲೆ ಮರ ಬಿದ್ದು ರೈಲು ಸಂಚಾರದಲ್ಲಿ ವ್ಯತ್ಯಯ!

ನೇರಳೆ ಮಾರ್ಗದ ಬೈಯಪ್ಪನಹಳ್ಳಿಯಿಂದ ವೈಟ್ ಫೀಲ್ಡ್‌ ಮತ್ತು ಎಂ ಜಿ ರಸ್ತೆಯಿಂದ ಚಲ್ಲಘಟ್ಟ ನಡುವೆ ಮಾತ್ರ ರೈಲುಗಳು ಸಂಚಾರ ಮಾಡುತ್ತಿವೆ. ಮರ ತೆರವು ಕಾರ್ಯಾಚರಣೆ ಮುಂದುವರಿದಿದೆ.

Namma Metro: ನೇರಳೆ ಮಾರ್ಗದಲ್ಲಿ ಹಳಿ ಮೇಲೆ ಮರ ಬಿದ್ದು ರೈಲು ಸಂಚಾರದಲ್ಲಿ ವ್ಯತ್ಯಯ!
ಹಳಿ ಮೇಲೆ ಬಿದ್ದ ಮರವನ್ನು ತೆರವುಗೊಳಿಸುತ್ತಿರುವ ಸಿಬ್ಬಂದಿ
Published On :

ಬೆಂಗಳೂರು: ನಗರದಲ್ಲಿ ಮೆಟ್ರೋ ಹಳಿ ಮೇಲೆ ಮರ ಬಿದ್ದ ಹಿನ್ನೆಲೆಯಲ್ಲಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿದೆ. ಬೆಳಿಗ್ಗೆ 6.15 ರ ಸುಮಾರಿಗೆ ನೇರಳೆ ಮಾರ್ಗದ ಎಸ್‌ವಿ ರಸ್ತೆ ಮತ್ತು ಇಂದಿರಾನಗರ ನಡುವೆ ಹಳಿಯ ಮೇಲೆ ಒಂದು ಮರ ಬಿದ್ದಿದೆ. ಪರಿಣಾಮವಾಗಿ ಮೆಟ್ರೋ ಸಂಚಾರಕ್ಕೆ ತಾತ್ಕಾಲಿಕವಾಗಿ ಅಡ್ಡಿಯಾಗಿದೆ.

ಸದ್ಯ ನೇರಳೆ ಮಾರ್ಗದ ಬೈಯಪ್ಪನಹಳ್ಳಿಯಿಂದ ವೈಟ್ ಫೀಲ್ಡ್‌ ಮತ್ತು ಎಂ ಜಿ ರಸ್ತೆಯಿಂದ ಚಲ್ಲಘಟ್ಟ ನಡುವೆ ಮಾತ್ರ ರೈಲುಗಳು ಸಂಚಾರ ಮಾಡುತ್ತಿವೆ. ಮರ ತೆರವು ಕಾರ್ಯಾಚರಣೆ ಮುಂದುವರಿದಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಬಿಎಂಆರ್​ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕ ಆಧಿಕಾರಿ, ಇಂದು ಬೆಳಿಗ್ಗೆ 6.15 ಗಂಟೆ ಸುಮಾರಿಗೆ ನೇರಳೆ ಮಾರ್ಗದಲ್ಲಿನ ಎಸ್‌ವಿ ರಸ್ತೆ ಮತ್ತು ಇಂದಿರಾನಗರ ನಡುವೆ ಹಳಿಯ ಮೇಲೆ ಒಂದು ಮರ ಬಿದ್ದ ಕಾರಣ ಕಾರ್ಯಾಚರಣೆ ತಾತ್ಕಾಲಿಕವಾಗಿ ಅಡ್ಡಿಯಾಗಿದೆ ಎಂದು ತಿಳಿಸಿದ್ದಾರೆ.

ಈ ಸಮಯದಲ್ಲಿ ನೇರಳೆ ಮಾರ್ಗದ ಬೈಯಪ್ಪನಹಳ್ಳಿ ಮತ್ತು ವೈಟ್ ಫೀಲ್ಡ್ ಹಾಗೂ ಎಂ ಜಿ ರಸ್ತೆ ಮತ್ತು ಚಲ್ಲಘಟ್ಟ ನಡುವೆ ಮಾತ್ರ ರೈಲುಗಳು ಓಡುತ್ತಿವೆ, ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಪ್ರಯಾಣಿಕರಿಗೆ ಇದರಿಂದಾಗಿರುವ ಅನಾನುಕೂಲತೆಗಾಗಿ ವಿಷಾದಿಸಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.