ಅತ್ಯಾಚಾರ ಆರೋಪ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ಜೈಲಿನಿಂದ ಬಿಡುಗಡೆ
ಜೈಲಿನಿಂದ ಶಾಸಕರ ಬಿಡುಗಡೆ ಹಿನ್ನೆಲೆ ಬೆಂಬಲಿಗರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ವೈಯಾಲಿಕಾವಲ್‌ನಲ್ಲಿರುವ ಮುನಿರತ್ನ ನಿವಾಸದೆದುರು ಬೆಂಬಲಿಗರು ಸಂಭ್ರಮಿಸಿದರು.

ಬೆಂಗಳೂರು: ಮಹಿಳೆಯೊಬ್ಬರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬುಧವಾರ ಬೆಳಿಗ್ಗೆ ಬಿಡುಗಡೆಯಾದರು.
20 ಕ್ಕೂ ಹೆಚ್ಚು ದಿನಗಳಿಂದ ಜೈಲಿನಲ್ಲಿದ್ದ ಶಾಸಕರು ಬುಧವಾರ ಬಿಡುಗಡೆಯಾಗಿ, ಜೈಲಿನಿಂದ ನೇರವಾಗಿ ತಮ್ಮ ನಿವಾಸದ ಕಡೆ ತೆರಳಿದರು. ಜೈಲಿನಿಂದ ಶಾಸಕರ ಬಿಡುಗಡೆ ಹಿನ್ನೆಲೆ ಬೆಂಬಲಿಗರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ವೈಯಾಲಿಕಾವಲ್‌ನಲ್ಲಿರುವ ಮುನಿರತ್ನ ನಿವಾಸದೆದುರು ಬೆಂಬಲಿಗರು ಸಂಭ್ರಮಿಸಿದರು.
ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮುನಿರತ್ನ ಅವರಿಗೆ ಮಂಗಳವಾರ ಶರತ್ತುಬದ್ಧ ಜಾಮೀನು ನೀಡಿತ್ತು. 1 ಲಕ್ಷ ರೂ. ಪರ್ಸನಲ್ ಬಾಂಡ್ ಮತ್ತು ಇಬ್ಬರ ಶೂರಿಟಿ ನೀಡುವಂತೆ ಷರತ್ತು ವಿಧಿಸಿತ್ತು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



