ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿರುವ ದರ್ಶನ್ ಗೆ ಮತ್ತೊಂದು ಸಂಕಷ್ಟ; ಹಳೇಯ ಕೇಸಿಗೆ ಮರುಜೀವ
ಈ ಹಿಂದೆ `ಭಗವಾನ್ ಶ್ರೀ ಕೃಷ್ಣಾ’ ಎಂಬ ಭರತ್ ನಿರ್ಮಾಣದ ಸಿನಿಮಾದಲ್ಲಿ ಧೃವನ್ ನಾಯಕನಾಗಿ ನಟಿಸುತ್ತಿದ್ದ. 2020ರಲ್ಲಿ ನಿರ್ಮಾಪಕ ಭರತ್ ಸಿನಿಮಾದ ಶೂಟಿಂಗ್ ಶುರು ಮಾಡಿದ್ದರು.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ದರ್ಶನ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬೆದರಿಕೆ ವಿಚಾರವಾಗಿ ನಿರ್ಮಾಪಕ ದಾಖಲಿಸಿದ್ದ ಕೇಸ್ ಮರುಜೀವ ಪಡೆದುಕೊಂಡಿದೆ.
ಈ ಹಿಂದೆ `ಭಗವಾನ್ ಶ್ರೀ ಕೃಷ್ಣಾ’ ಎಂಬ ಭರತ್ ನಿರ್ಮಾಣದ ಸಿನಿಮಾದಲ್ಲಿ ಧೃವನ್ ನಾಯಕನಾಗಿ ನಟಿಸುತ್ತಿದ್ದ. 2020ರಲ್ಲಿ ನಿರ್ಮಾಪಕ ಭರತ್ ಸಿನಿಮಾದ ಶೂಟಿಂಗ್ ಶುರು ಮಾಡಿದ್ದರು. ಆದರೆ ಕೋವಿಡ್ ಕಾರಣದಿಂದಾಗಿ ಅರ್ಧಕ್ಕೆ ಸಿನಿಮಾ ನಿಂತುಹೋಗಿತ್ತು. ಈ ವಿಚಾರವಾಗಿ ನಟ ಧೃವನ್, ದರ್ಶನ್ ಬಳಿ ಹೋಗಿದ್ದ. ಈ ವೇಳೆ ದರ್ಶನ್‌ನಿಂದ ಭರತ್‌ಗೆ ಕರೆ ಮಾಡಿಸಿದ್ದ. ಆಗ ದರ್ಶನ್ `ನೀನೆ ಇರೋದಿಲ್ಲ’ ಎಂದು ಭರತ್‌ಗೆ ಬೆದರಿಕೆ ಹಾಕಿದ್ದರು.
ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಸಿನಿಮಾ ವಿಚಾರವಾಗಿ ಧೃವನ್, ನಟ ದರ್ಶನ್ ಬಳಿ ಹೋಗಿ ಬೆದರಿಕೆ ಹಾಕಿಸಿದ್ದಾನೆ ಎಂದು ನಿರ್ಮಾಪಕ ಭರತ್ ದೂರು ದಾಖಲಿಸಿದ್ದರು. 2022ರ ಆ.5 ರಂದು ಧೃವನ್ ಮೇಲೆ ಎನ್‌ಸಿಆರ್ ದಾಖಲಾಗಿತ್ತು. ಆ ವೇಳೆ ಬೆದರಿಕೆ ಹಾಕಿದ್ದ ವಿಚಾರವಾಗಿ ದರ್ಶನ್ ವಿರುದ್ಧ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಆದರೆ ದರ್ಶನ್ ಮತ್ತು ಧೃವನ್ ಮೇಲೆ ಕೆಂಗೇರಿ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಹಾಗೂ ನೋಟಿಸ್ ಕೂಡ ನೀಡಿರಲಿಲ್ಲ. ಇದೀಗ ಬೆದರಿಕೆ ಕೇಸ್ ಅಡಿಯಲ್ಲಿ ಆರೋಪಿ ಧೃವನ್ ಅಲಿಯಾಸ್ ಸೂರಜ್ ಕುಮಾರ್, ನಟ ದರ್ಶನ್, ದರ್ಶನ್ ಮ್ಯಾನೇಜರ್ ನಾಗರಾಜ್ ವಿರುದ್ಧ ಮತ್ತೆ ಎನ್‌ಸಿಆರ್ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



