ರಾಜ್ಯ

ಭವಾನಿ ರೇವಣ್ಣಗೆ ಬಿಗ್ ರಿಲೀಫ್: ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಕಾರ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಆದರೆ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಕೋರಿ ಎಸ್‌ಐಟಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

ಭವಾನಿ ರೇವಣ್ಣಗೆ ಬಿಗ್ ರಿಲೀಫ್: ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಕಾರ
ಭವಾನಿ ರೇವಣ್ಣ
Published On :

ನವದೆಹಲಿ: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಎದುರಿಸುತ್ತಿರುವ ಭವಾನಿ ರೇವಣ್ಣ ಅವರಿಗೆ ನೀಡಿದ್ದ ನಿರೀಕ್ಷಣಾ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಆದರೆ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಕೋರಿ ಎಸ್‌ಐಟಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠ, ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ ಮತ್ತು ಎಸ್‌ಐಟಿ ಸಲ್ಲಿಸಿದ ಮನವಿಯನ್ನು ವಜಾಗೊಳಿಸಿದೆ.

ಪ್ರಕರಣದಲ್ಲಿ ಈಗಾಗಲೇ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ. ರಾಜಕೀಯ ಕುಟುಂಬ ಎಂದು ಜಾಮೀನು ನಿರಾಕರಿಸಲು ಸಾಧ್ಯವಿಲ್ಲ. ಕೆಲ ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದು. ಈ ಪ್ರಕರಣದಲ್ಲಿ ತನಿಖೆ ದಾರಿ ತಪ್ಪಿದೆಯಾ? ತಪ್ಪಿದ್ದರೆ ನಾವು ನಿಮ್ಮ ನೆರವಿಗೆ ಬರಬಹುದು. ಆದರೆ ಇಲ್ಲಿ ಯಾವುದೂ ಆ ರೀತಿ ಕಾಣುತ್ತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸಂತ್ರಸ್ತೆಯನ್ನು ಕುಟುಂಬದ ನಿರ್ದೇಶನದ ಮೇರೆಗೆ ಗೃಹ ಬಂಧನದಲ್ಲಿ ಇರಿಸಲಾಗಿತ್ತು ಮತ್ತು ಇದಕ್ಕೆ ಭವಾನಿ ರೇವಣ್ಣ ನಿರ್ದೇಶನ ನೀಡಿದ್ದರು ಎಂದು ಆರೋಪಿಸಲಾಗಿತ್ತು.

ಮೈಸೂರು ಜಿಲ್ಲೆ ಕೆಆರ್ ನಗರ ಮಹಿಳೆ ಕಿಡ್ನ್ಯಾಪ್​ ಆರೋಪ ಸಂಬಂಧ ಭವಾನಿ ರೇವಣ್ಣಗೆ ಜಾಮೀನು ನೀಡಬಾರದು ಎಂದು ಎಸ್​ಐಟಿ ಪರ ವಕೀಲರು ವಾದ ಮಂಡಿಸಿದ್ದರು. ಆರೋಪಿ ಮಹಿಳೆ ಪ್ರಕರಣದಲ್ಲಿ ನೇರವಾಗಿ ಸಂಬಂಧ ಹೊಂದಿದ್ದಾರೆ. ಅತ್ಯಾಚಾರ ಎಸಗಿದ ಆರೋಪಿಯ ತಾಯಿ ಕೂಡ ಆಗಿದ್ದಾರೆ. ಆರೋಪಿಗಳು ಪ್ರತಿಷ್ಠಿತ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದವರು. ಹೀಗಾಗಿ ಹೈಕೋರ್ಟ್ ನೀಡಿರುವ ನಿರಿಕ್ಷಣಾ ಜಾಮೀನು ರದ್ದು ಮಾಡಬೇಕು ಎಂದು ಸುಪ್ರೀಂ ಕೋರ್ಟ್​ನಲ್ಲಿ ಎಸ್​ಐಟಿ ಅಧಿಕಾರಿಗಳ ಪರ ವಕೀಲರು ವಾದಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.