ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ ವಂಚನೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರನ ಬಂಧನ
ದೂರು ದಾಖಲಾಗುತ್ತಿದ್ದಂತೆ ಗೋಪಾಲ್ ಜೋಶಿ ತಲೆಮರೆಸಿಕೊಂಡಿದ್ದರು. ತನಿಖೆ ಕೈಗೊಂಡಿದ್ದ ಪೊಲೀಸರು ಗೋಪಾಲ್ ಜೋಶಿ ಕೊಲ್ಲಾಪುರದಲ್ಲಿ ತಲೆಮರೆಸಿಕೊಂಡಿರುವುದನ್ನು ಪತ್ತೆ ಹಚ್ಚಿ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರು: ಕಳೆದ ಲೋಕಸಭೆ ಚುನಾವಣೆ ವೇಳೆ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂಪಾಯಿ ಪಡೆದು ವಂಚಿಸಿರುವ ಆರೋಪದ ಅಡಿ ದಾಖಲಾಗಿದ್ದ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಸಹೋದರ ಹಾಗೂ ಅವರ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ.
ಬಿಜೆಪಿ ಮಾಜಿ ಶಾಸಕ ದೇವಾನಂದ್ ಸಿಂಗ್ ಚವ್ಹಾಣ್ ಅವರ ಪತ್ನಿ ಸುನಿತಾ ಚವ್ಹಾಣ್ ಅವರ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಬಸವೇಶ್ವರನಗರ ಠಾಣೆ ಪೊಲೀಸರು ಪ್ರಲ್ಹಾದ್ ಜೋಶಿ ಅವರ ಅಣ್ಣ ಗೋಪಾಲ ಜೋಶಿ ಅವರನ್ನು ಕೊಲ್ಲಾಪುರದಲ್ಲಿ ಹಾಗೂ ಗೋಪಾಲ ಅವರ ಪುತ್ರ ಅಜಯ್ ಜೋಶಿ ಅವರನ್ನು ಪುಣೆಯಲ್ಲಿ ಬಂಧಿಸಲಾಗಿದೆ. ಅಲ್ಲದೆ ಗೋಪಾಲ್ ಜೋಶಿ ಅವರನ್ನು ಹುಬ್ಬಳ್ಳಿಯ ಅವರ ನಿವಾಸಕ್ಕೆ ಕರೆದೊಯ್ದು ಸ್ಥಳಮಹಜರು ನಡೆಸುತ್ತಿದ್ದಾರೆ.
ದೂರು ದಾಖಲಾಗುತ್ತಿದ್ದಂತೆ ಗೋಪಾಲ್ ಜೋಶಿ ತಲೆಮರೆಸಿಕೊಂಡಿದ್ದರು. ತನಿಖೆ ಕೈಗೊಂಡಿದ್ದ ಪೊಲೀಸರು ಗೋಪಾಲ್ ಜೋಶಿ ಕೊಲ್ಲಾಪುರದಲ್ಲಿ ತಲೆಮರೆಸಿಕೊಂಡಿರುವುದನ್ನು ಪತ್ತೆ ಹಚ್ಚಿ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸುನೀತ್ ಚವ್ಹಾಣ್ ಅವರ ದೂರಿನ ಆಧಾರದ ಮೇಲೆ ಬೆಂಗಳೂರು ಪೊಲೀಸರು ಗೋಪಾಲ್ ಜೋಶಿ, ವಿಜಯಲಕ್ಷ್ಮೀ ಹಾಗೂ ಅಜಯ್ ಜೋಶಿ ವಿರುದ್ಧ ಎಫ್ಐಆರ್ ದಾಖಲಿಸಿದ್ದು ಪ್ರಕರಣ ಸಂಬಂಧ ಇಲ್ಲಿಯುವರೆಗೂ ಮೂವರನ್ನು ಬಂಧಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



