ಸಾಲದ ಶೂಲ: ಬಡ್ಡಿ ಕೊಟ್ಟಿಲ್ಲ ಎಂದು 17 ವರ್ಷದ ಪುತ್ರಿ ಮೇಲೆ ಅತ್ಯಾಚಾರ, ನೆಲಮಂಗಲದಲ್ಲಿ POCSO ಕೇಸ್!
ಹಾಡಹಗಲೇ 17 ವರ್ಷದ ಬಾಲಕಿ ಮೇಲೆ ದುರುಳನಿಂದ ಅತ್ಯಾಚಾರ ಮಾಡಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.

ಬೆಂಗಳೂರು: ಸಾಲದ ಬಡ್ಡಿ ಕೊಟ್ಟಿಲ್ಲ ಎಂಬ ಕಾರಣಕ್ಕೆ ದುಷ್ಕರ್ಮಿಗಳು 17 ವರ್ಷದ ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ ಎಸೆಗಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ವರದಿಯಾಗಿದೆ.
ಖಾಸಗಿ ಮಾಧ್ಯಮವೊಂದು ಈ ಬಗ್ಗೆ ವರದಿ ಮಾಡಿದ್ದು, ಹಾಡಹಗಲೇ 17 ವರ್ಷದ ಬಾಲಕಿ ಮೇಲೆ ದುರುಳನಿಂದ ಅತ್ಯಾಚಾರ ಮಾಡಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.
ವರದಿಯಲ್ಲಿರುವಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ (pocso case) ದಾಖಲಾಗಿದ್ದು, ಸಂತ್ರಸ್ತ ಯುವತಿ ನೀಡಿದ ದೂರಿನ ಮೇರೆಗೆ ಆರೋಪಿ ರವಿಕುಮಾರ್(39 ವರ್ಷ) ಎಂಬಾತನನ್ನು ಬಂಧಿಸಲಾಗಿದೆ.
ಮೂಲಗಳ ಪ್ರಕಾರ ಸಂತ್ರಸ್ತ ಯುವತಿಯ ತಂದೆ ಆರೋಪಿ ರವಿ ಕುಮಾರ್ ಬಳಿ 70 ಸಾವಿರ ರೂ. ಹಣ ಪಡೆದಿದ್ದರು. ಆದರೆ ಸಮಯಕ್ಕೆ ಅದನ್ನು ಹಿಂದುರುಗಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ಸಾಕಷ್ಟು ಬಾರಿ ರವಿಕುಮಾರ್ ಸಂತ್ರಸ್ಥೆಯ ತಂದೆಯೊಂದಿಗೆ ಬಡ್ಡಿ ಮತ್ತು ಅಸಲು ಪಾವತಿಗಾಗಿ ಜಗಳ ಮಾಡಿದ್ದ. ಬಳಿಕ ಅವರು 30 ಸಾವಿರ ರೂ. ಸಾಲ ತೀರಿಸಿದ್ದರು. ಇನ್ನುಳಿದ 40 ಸಾವಿರ ರೂ. ಜೊತೆಗೆ ಬಡ್ಡಿ ಹಣ ನೀಡದಿದ್ದಕ್ಕೆ ರವಿಕುಮಾರ್ ಪೀಡಿಸುತ್ತಿದ್ದ.
ಇದೇ ವೇಳೆ ಆಗಾಗ ಮನೆ ಬಳಿ ಬಂದು ಬಡ್ಡಿ ಹಣಕ್ಕಾಗಿ ಸಂತ್ರಸ್ತೆ ಹಾಗೂ ಆಕೆಯ ತಂದೆಯನ್ನು ಪೀಡಿಸುತ್ತಿದ್ದ. ಈ ಹಿಂದೆ ಬಲವಂತವಾಗಿ ಸಂತ್ರಸ್ತೆಗೆ ಆರೋಪಿ ರವಿಕುಮಾರ್ ಕಿಸ್ ಕೂಡ ಕೊಟ್ಟಿದ್ದ. ಮಾತ್ರವಲ್ಲದೇ ಕಿಸ್ ಕೊಟ್ಟಿರುವುದನ್ನು ಫೋಟೋ ತೆಗೆದಿಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಇದೀಗ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಸಂತ್ರಸ್ತೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ.
ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಮಾದನಾಯಕನ ಹಳ್ಳಿ ಪೊಲೀಸರು ರವಿಕುಮಾರ್ನನ್ನು ಬಂಧಿಸಿ ತನಿಖೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



