ಗದಗ: ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವು; ಮತ್ತೋರ್ವನಿಗೆ ಗಾಯ
ಗ್ಯಾಸ್ ಪೈಪ್ ಲೈನ್ ಕಂಪನಿಯ ಜೆಸಿಬಿ ಸಿಬ್ಬಂದಿ ಎಡವಟ್ಟು ಮಾಡಿದ್ದರಿಂದ ಮಣ್ಣು ಕುಸಿದಿದೆ ಎಂದು ಆರೋಪಿಸಲಾಗಿದೆ. ನನ್ನ ಗಂಡನ ಸಾವಿಗೆ ನಗರಸಭೆ ಅಧಿಕಾರಿಗಳು ಮತ್ತು ಗ್ಯಾಸ್ ಪೈಪ್ ಲೈನ್ ಕಂಪನಿ ಕಾರಣವೆಂದು ಮೃತರ ಪತ್ನಿ ದೂರು ನೀಡಿದ್ದಾರೆ.

ಗದಗ: ಗದಗ ನಗರದಲ್ಲಿ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ನಜೀರ್ ಸಾಬ್ ಬೈಲಹುಲಿ(44) ಮೃತಪಟ್ಟ ಕಾರ್ಮಿಕ.
ನಗರಸಭೆ ವಾಟರ್ ಮ್ಯಾನ್ ಮಂಜುನಾಥ್ ಪಲ್ಲೇದ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಮಂಜುನಾಥ್ ಅವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗದಗ ನಗರದ ಟಿಪ್ಪುಸುಲ್ತಾನ್ ಸರ್ಕಲ್ ನಲ್ಲಿ ನಿನ್ನೆ ಸಂಜೆ ಘಟನೆ ನಡೆದಿದೆ. ಗ್ಯಾಸ್ ಪೈಪ್ ಲೈನ್ ಕಂಪನಿಯ ಜೆಸಿಬಿ ಸಿಬ್ಬಂದಿ ಎಡವಟ್ಟು ಮಾಡಿದ್ದರಿಂದ ಮಣ್ಣು ಕುಸಿದಿದೆ ಎಂದು ಆರೋಪಿಸಲಾಗಿದೆ. ನನ್ನ ಗಂಡನ ಸಾವಿಗೆ ನಗರಸಭೆ ಅಧಿಕಾರಿಗಳು ಮತ್ತು ಗ್ಯಾಸ್ ಪೈಪ್ ಲೈನ್ ಕಂಪನಿ ಕಾರಣವೆಂದು ಮೃತರ ಪತ್ನಿ ದೂರು ನೀಡಿದ್ದಾರೆ.
ನಗರದ ಕೋರ್ಟ್ ಸರ್ಕಲ್ ಬಳಿ ಗ್ಯಾಸ್ ಪೈಪ್‌ಲೈನ್ ದುರಸ್ತಿ ವೇಳೆ, ಗದಗ-ಬೆಟಗೇರಿ ಅವಳಿ ನಗರದ 24x7 ಪೈಪ್‌ಲೈನ್ ಹಾನಿ ಆಗಿತ್ತು. ಶನಿವಾರ ರಾತ್ರಿ ಆ ನೀರಿನ ಪೈಪ್ ದುರಸ್ತಿ ಮಾಡಲು ಈ ಇಬ್ಬರು ಕಾರ್ಮಿಕರು ಮುಂದಾಗಿದ್ದರು. ಏಕಾಏಕಿ ಭೂಮಿ ಕುಸಿತದಿಂದಾಗಿ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಈ ಕುರಿತು ಗದಗ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



