ರಾಜ್ಯ

ರಾಜ್ಯದಲ್ಲಿ ಮಳೆಯಿಂದ ಅಪಾರ ಹಾನಿ: ಕೂಡಲೇ 5 ಸಾವಿರ ಕೋಟಿ ರೂ. ಬಿಡುಗಡೆ ಮಾಡಿ, ಸರ್ಕಾರಕ್ಕೆ ಬಿಜೆಪಿ ಆಗ್ರಹ

ರಾಜ್ಯ ಸರ್ಕಾರದಲ್ಲಿ ಹಣದ ಕೊರತೆ ಇದೆ. ಮಲೆನಾಡಿನಲ್ಲಿ ಕಾಫಿ ಉದುರುತ್ತಿದೆ, ಭತ್ತದ ಬೆಳೆ ನೀರಿನಲ್ಲಿ ಮುಳುಗಿದೆ, ಈರುಳ್ಳಿ ಕೊಳೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕುಂಭ ಕರ್ಣನಂತೆ ನಿದ್ದೆ ಮಾಡುವುದನ್ನು ಬಿಟ್ಟು ಎಲ್ಲ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಯಾವ ರೀತಿ ಅನಾಹುತವಾಗಿದೆ ಎಂದು ಪರಿಶೀಲಿಸಬೇಕು.

ರಾಜ್ಯದಲ್ಲಿ ಮಳೆಯಿಂದ ಅಪಾರ ಹಾನಿ: ಕೂಡಲೇ 5 ಸಾವಿರ ಕೋಟಿ ರೂ. ಬಿಡುಗಡೆ ಮಾಡಿ, ಸರ್ಕಾರಕ್ಕೆ ಬಿಜೆಪಿ ಆಗ್ರಹ
ಬೆಂಗಳೂರಿನಲ್ಲಿ ಮಳೆ ಹಾನಿ ಪರಿಶೀಲಿಸಿದ ವಿಪಕ್ಷ ನಾಯಕ ಆರ್.ಅಶೋಕ್
Published On :

ಬೆಂಗಳೂರು: ರಾಜ್ಯದಲ್ಲಿ ಪ್ರವಾಹದಿಂದ ಅಪಾರ ಹಾನಿ ಉಂಟಾಗಿದ್ದು, ರಾಜ್ಯ ಸರ್ಕಾರ ಕೂಡಲೇ ಸಭೆ ಕರೆದು 5,000 ಕೋಟಿ ರೂ. ಬಿಡುಗಡೆ ಮಾಡಲಿ. ಜೊತೆಗೆ ಬೆಂಗಳೂರಿನಲ್ಲಿ ಪರಿಹಾರ ಕಾರ್ಯಾಚರಣೆಗೆ 1,000 ಕೋಟಿ ರೂ. ಬಿಡುಗಡೆ ಮಾಡಲಿ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್ ಆಗ್ರಹಿಸಿದರು.

ಬೆಂಗಳೂರಿನ ಸಿಲ್ಕ್‌ ಬೋರ್ಡ್‌ ವೃತ್ತದ ಬಳಿ ಮಳೆ ಹಾನಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಹಣದ ಕೊರತೆ ಇದೆ. ಮಲೆನಾಡಿನಲ್ಲಿ ಕಾಫಿ ಉದುರುತ್ತಿದೆ, ಭತ್ತದ ಬೆಳೆ ನೀರಿನಲ್ಲಿ ಮುಳುಗಿದೆ, ಈರುಳ್ಳಿ ಕೊಳೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕುಂಭ ಕರ್ಣನಂತೆ ನಿದ್ದೆ ಮಾಡುವುದನ್ನು ಬಿಟ್ಟು ಎಲ್ಲ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಯಾವ ರೀತಿ ಅನಾಹುತವಾಗಿದೆ ಎಂದು ಪರಿಶೀಲಿಸಬೇಕು. ಕಳೆದೊಂದು ತಿಂಗಳಿಂದ ಪ್ರವಾಹ ಸಂಬಂಧದ ಸಭೆಯೇ ನಡೆದಿಲ್ಲ. ಸರ್ಕಾರ ಕೂಡಲೇ ಸಭೆ ಕರೆದು ಕನಿಷ್ಠ 5,000 ಕೋಟಿ ರೂ. ಬಿಡುಗಡೆ ಮಾಡಬೇಕು. ಬೆಂಗಳೂರಿಗೆ ವಿಶೇಷವಾಗಿ 1,000 ಕೋಟಿ ರೂ. ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದರು.

16 ತಿಂಗಳ ಕಾಂಗ್ರೆಸ್‌ ಸರ್ಕಾರದ ಪಾಪದ ಫಲವನ್ನು ಬೆಂಗಳೂರಿನ ಜನರು ಅನುಭವಿಸಬೇಕಾಗಿದೆ. ರಾಜ ಕಾಲುವೆಯ ಹೂಳು ತೆಗೆದು ಸ್ವಚ್ಛ ಮಾಡುವ ಕೆಲಸವನ್ನು ಸರ್ಕಾರ ಮಾಡಿಲ್ಲ. ಇದರಿಂದಾಗಿ ತೇಲುತ್ತಿರುವ ಬೆಂಗಳೂರು ಎಂಬ ಅಪಖ್ಯಾತಿ ನಗರಕ್ಕೆ ಬಂದಿದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರು ಒಂದೂವರೆ ವರ್ಷದಲ್ಲಿ ಎಷ್ಟು ಒತ್ತುವರಿ ತೆರವು ಮಾಡಿದ್ದಾರೆ, ಎಷ್ಟು ಹೂಳು ತೆಗೆಸಿದ್ದಾರೆ ಎಂದು ತಿಳಿಸಲಿ. ಬಿಜೆಪಿ ಸರ್ಕಾರವಿದ್ದಾಗ ಮಳೆಗಾಲಕ್ಕೆ ಮುನ್ನ ಎಲ್ಲ ಸಿದ್ಧತೆ ಮಾಡಲಾಗುತ್ತಿತ್ತು ಎಂದರು.

ಬೆಂಗಳೂರಿನಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿದೆ. ಖಜಾನೆ ಖಾಲಿಯಾಗಿದೆ ಎಂದು ನಮಗೂ ಗೊತ್ತಿದೆ. ಆದ್ದರಿಂದ ಕನಿಷ್ಠ 500 ಕೋಟಿ ರೂ. ಹಣವಾದರೂ ಬಿಡುಗಡೆ ಮಾಡಲಿ, ಇಲ್ಲವೆಂದರೆ ಗುತ್ತಿಗೆದಾರರು ಮುಂದೆ ಬರುವುದಿಲ್ಲ. ಇದರ ಜೊತೆಗೆ ಕಸದ ಸಮಸ್ಯೆಯೂ ಸೃಷ್ಟಿಯಾಗಿದೆ. ಮಾನ್ಯತಾ ಟೆಕ್ ಪಾರ್ಕ್ ಈಗ ಮುಳುಗಡೆ ಪಾರ್ಕ್ ಆಗಿಬಿಟ್ಟಿದೆ. ಸಿಲ್ಕ್ ಬೋರ್ಡ್ ನಲ್ಲಿ ಪ್ರತಿ ದಿನವೂ ಪ್ರವಾಹ ಉಂಟಾಗುತ್ತಿದೆ. ಪ್ರತಿ 15 ದಿನಕ್ಕೊಮ್ಮೆ ಪರಿಶೀಲನೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದ್ದರು. ಆದರೆ 6 ತಿಂಗಳಾದರೂ ಏನು ಮಾಡಿಲ್ಲ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಾತ್ರಿ ವೇಳೆಯಲ್ಲಿ ಪರಿಶೀಲನೆ ನಡೆಸಿದ್ದು, ಅವರಿಗೆ ಯಾವುದೇ ಸಮಸ್ಯೆ ಕಂಡಿಲ್ಲ ಎಂದು ದೂರಿದರು.

ಚನ್ನಪಟ್ಟಣ ಉಪ ಚುನಾವಣೆಗೆ ಇನ್ನೆರಡು ದಿನದಲ್ಲಿ ಎನ್ ಡಿಎ ಅಭ್ಯರ್ಥಿ ಘೋಷಣೆಯಾಗಲಿದೆ. ಇದು ಜೆಡಿಎಸ್ ಕ್ಷೇತ್ರ ಆಗಿರುವುದರಿಂದ ಅವರ ಸಲಹೆ ಪ್ರಮುಖ ಎಂದು ಆರ್.ಅಶೋಕ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.