ಬೆಂಗಳೂರು: ವರ್ತೂರು ಕೆರೆಯಲ್ಲಿ 19 ವರ್ಷದ ಯುವಕ ಕೊಚ್ಚಿ ಹೋಗಿ ದುರಂತ
ವರ್ತೂರು ಬಳಿಯ ಶೆಡ್‌ಗಳಲ್ಲಿ ವಾಸಿಸುವ ಇಝರುಲ್ ತಮ್ಮ ಇಬ್ಬರು ಚಿಕ್ಕಪ್ಪಂದಿರ ಜೊತೆ ಬೆಳಿಗ್ಗೆ 9 ಗಂಟೆ ಸುಮಾರಿಗೆ ಹೊಳೆ ಬಳಿ ಪ್ಲಾಸ್ಟಿಕ್ ತ್ಯಾಜ್ಯದ ಬಾಟಲಿಗಳು ಮತ್ತು ಚೀಲಗಳನ್ನು ಎಸೆಯಲು ಹೋಗಿದ್ದರು.

ಬೆಂಗಳೂರು: ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ 19 ವರ್ಷದ ಯುವಕ ಗುರುವಾರ ಬೆಳಗ್ಗೆ ವರ್ತೂರು ಹೊಳೆಯಲ್ಲಿ ಕೊಚ್ಚಿಕೊಂಡು ಹೋಗಿದ್ದು, ಆತನ ಪತ್ತೆಗೆ ಪ್ರಯತ್ನ ನಡೆಯುತ್ತಿದೆ.
ಇಝಾರುಲ್ ಎಸ್.ಕೆ ಎಂಬಾತ ಪ್ಲಾಸ್ಟಿಕ್ ಬಾಟಲಿಗಳನ್ನು ಸಂಗ್ರಹಿಸುತ್ತಿದ್ದ ವೇಳೆ ವರ್ತೂರು ಕೆರೆಯಲ್ಲಿ ಕೊಚ್ಚಿ ಹೋಗಿದ್ದಾನೆ. ವರ್ತೂರು ಬಳಿಯ ಶೆಡ್‌ಗಳಲ್ಲಿ ವಾಸಿಸುವ ಇಝರುಲ್ ಮತ್ತು ಅವರ ಇಬ್ಬರು ಚಿಕ್ಕಪ್ಪಂದಿರ ಜೊತೆ ಬೆಳಿಗ್ಗೆ 9 ಗಂಟೆ ಸುಮಾರಿಗೆ ಹೊಳೆ ಬಳಿ ಪ್ಲಾಸ್ಟಿಕ್ ತ್ಯಾಜ್ಯದ ಬಾಟಲಿಗಳು ಮತ್ತು ಚೀಲಗಳನ್ನು ಎಸೆಯಲು ಹೋಗಿದ್ದರು ಎಂದು ಸ್ವರಾಜ್ ಅಭಿಯಾನ್ ಎನ್‌ಜಿಒ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಆರ್ ಕಲೀಮುಲ್ಲಾ ತಿಳಿಸಿದ್ದಾರೆ.
ಬುಧವಾರ ರಾತ್ರಿ ಸುರಿದ ಭಾರಿ ಮಳೆಗೆ ಹೊಳೆ ಉಕ್ಕಿ ಹರಿಯುತ್ತಿತ್ತು. ಇಝರುಲ್ ಅವರ ಚಿಕ್ಕಪ್ಪರು ಅವನನ್ನುತುಂಬಿ ಹರಿಯುತ್ತಿದ್ದ ಹೊಳೆಯಿಂದ ರಿಸಲು ಪ್ರಯತ್ನಿಸಿದರು, ಆದರೆ ಸಾಧ್ಯವಾಗಲಿಲ್ಲ. ಶೋಧ ಕಾರ್ಯಾಚರಣೆ ಆರಂಭಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಮತ್ತು ಬಿಬಿಎಂಪಿ ಸಿಬ್ಬಂದಿ ಕತ್ತಲೆಯಾದ ಕಾರಣ ಶೋಧ ಕಾರ್ಯಾಚರಣೆ ಸ್ಥಗಿತಗೊಳಿಸಿದರು. ಶುಕ್ರವಾರ ಶೋಧವನ್ನು ಪುನರಾರಂಭಿಸಲಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಂಗಳೂರು: ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಸೋದರ ಮುಮ್ತಾಜ್ ಅಲಿ ನಾಪತ್ತೆ; ಕೂಳೂರು ಸೇತುವೆ ಬಳಿ ಕಾರು ಪತ್ತೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


