BMTC ಬಸ್-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಸಾವು
ಬುಧವಾರ ರಾತ್ರಿ 8.30ರ ಸುಮಾರಿಗೆ ಡಿಪೋ ನಂ.37 ಗೆ ಸೇರಿದ ಬಿಎಂಟಿಸಿ ಬಸ್ (ಕೆಎ-57-ಎಫ್-3615) ಮಾರ್ಗ ನಂ. 375 H/5 ಶಿರ್ಕೆ ಅಪಾರ್ಟ್‌ಮೆಂಟ್‌ನಿಂದ ಜಯನಗರಕ್ಕೆ ತೆರಳುತ್ತಿತ್ತು.

ಬೆಂಗಳೂರು: ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಎದುರಿಗೆ ಬಂದ ಬಿಎಂಟಿಸಿ ಬಸ್'ಗೆ ಸಿಲುಕಿ ಬೈಕ್ ಸವಾರನೊಬ್ಬ ಸಾವನ್ನಪ್ಪಿರುವ ಘಟನೆ ವಿಷ್ಣುವರ್ಧನ್ ರಸ್ತೆಯ ಬಿಜಿಎಸ್ ಬಸ್ ನಿಲ್ದಾಣದ ಬಳಿ ಬುಧವಾರ ರಾತ್ರಿ ನಡೆದಿದೆ.
ಮೃತರನ್ನು ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಡಿವಾಳ ನಿವಾಸಿ ಆನಂದ್ (36) ಎಂದು ಗುರುತಿಸಲಾಗಿದೆ.
ಬುಧವಾರ ರಾತ್ರಿ 8.30ರ ಸುಮಾರಿಗೆ ಡಿಪೋ ನಂ.37 ಗೆ ಸೇರಿದ ಬಿಎಂಟಿಸಿ ಬಸ್ (ಕೆಎ-57-ಎಫ್-3615) ಮಾರ್ಗ ನಂ. 375 H/5 ಶಿರ್ಕೆ ಅಪಾರ್ಟ್‌ಮೆಂಟ್‌ನಿಂದ ಜಯನಗರಕ್ಕೆ ತೆರಳುತ್ತಿತ್ತು.
ಆನಂದ್ ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡುವಾಗ ಎದುರಿಗೆ ಬಂದ ಬಿಎಂಟಿಸಿ ಬಸ್‌ಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಈ ನಡುವೆ ಮೃತರ ಕುಟುಂಬಕ್ಕೆ ಮಧ್ಯಂತರ ಪರಿಹಾರ ನೀಡಿರುವುದಾಗಿ ಬಿಎಂಟಿಸಿ ಪ್ರಕಟಣೆ ತಿಳಿಸಿದೆ. ಈ ಸಂಬಂಧ ಕೆಂಗೇರಿ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



