ರಾಜ್ಯ

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ನೋಟಿಸ್!

ಪ್ರಕರಣದ ಎರಡನೇ ಆರೋಪಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಹೇಳಿಕೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದು, ನಂತರ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಲಿದ್ದಾರೆ ಎನ್ನಲಾಗಿದೆ.

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ನೋಟಿಸ್!
ಸಿಎಂ ಸಿದ್ದರಾಮಯ್ಯ
Published On :

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತರು ಮೊದಲ ಆರೋಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮನ್ಸ್ ನೀಡಲು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ಶನಿವಾರ ತಿಳಿಸಿವೆ.

ಪ್ರಕರಣದ ಎರಡನೇ ಆರೋಪಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಹೇಳಿಕೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದು, ನಂತರ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಲಿದ್ದಾರೆ ಎನ್ನಲಾಗಿದೆ.

ಮೂರನೇ ಆರೋಪಿ ಸಿದ್ದರಾಮಯ್ಯನವರ ಬಾಮೈದುನ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನು ಮಾಲೀಕ ಜೆ.ದೇವರಾಜು ಅವರನ್ನು ಲೋಕಾಯುಕ್ತ ವಿಚಾರಣೆಗೊಳಪಡಿಸಿದೆ. ದೀಪಾವಳಿ ನಂತರ ಸಿಎಂ ಸಿದ್ದರಾಮಯ್ಯ ಅವರನ್ನು ವಿಚಾರಣೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಡಿಸೆಂಬರ್ 25ರೊಳಗೆ ವರದಿ ಸಲ್ಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚಿಸಿದೆ. ಜಾರಿ ನಿರ್ದೇಶನಾಲಯ (ಇಡಿ) ಕೂಡ ಪ್ರಕರಣದ ತನಿಖೆ ನಡೆಸುತ್ತಿದೆ. ಮೈಸೂರಿನ ಮುಡಾ ಕಚೇರಿ ಮತ್ತು ಬೆಂಗಳೂರಿನ ಕೆಂಗೇರಿಯಲ್ಲಿರುವ ದೇವರಾಜು ನಿವಾಸದ ಮೇಲೆ ಇಡಿ ಇತ್ತೀಚೆಗೆ ದಾಳಿ ನಡೆಸಿತ್ತು. ಇಡಿ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಅವರ ನಿವಾಸಗಳ ಮೇಲೆ ದಾಳಿ ನಡೆಸಿ ಅವರನ್ನು ಕೂಡಾ ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಮುಡಾ ಪ್ರಕರಣವನ್ನು ಕೇಂದ್ರೀಯ ತನಿಖಾ ದಳದಿಂದ (ಸಿಬಿಐ) ತನಿಖೆಗೆ ಒಳಪಡಿಸಬೇಕೆಂದು ಅರ್ಜಿದಾರರಾದ ಸ್ನೇಹಮಯಿ ಕೃಷ್ಣ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರ ಲೋಕಾಯುಕ್ತ ಅಧಿಕಾರಿಗಳನ್ನು ನೇಮಿಸಿದ್ದು, ಸಿಎಂ ವಿರುದ್ಧ ಪ್ರಾಮಾಣಿಕವಾಗಿ ತನಿಖೆ ನಡೆಸಲ್ಲ ಎಂದು ಅವರು ಅರ್ಜಿಯಲ್ಲಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.