Deepavali ಪಟಾಕಿ ಸಿಡಿಸಲು 2 ಗಂಟೆ ಮಾತ್ರ ಅವಕಾಶ, ಹಸಿರು ಪಟಾಕಿ ಮಾತ್ರ ಮಾರಾಟ ಮಾಡಿ: ಸಿಎಂ ಸಿದ್ದರಾಮಯ್ಯ
ಸುಪ್ರೀಂ ಕೋರ್ಟ್ ಆದೇಶದಂತೆ ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಅವಕಾಶ ನೀಡಬಾರದು. ಪಟಾಕಿ ದಾಸ್ತಾನು, ಮಾರಾಟ ಪ್ರಕ್ರಿಯೆಯಲ್ಲಿ ಲೋಪ ಆಗಬಾರದು. ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಿ, ನಿಯಮ ಮೀರಿದರೆ ಕ್ರಿಮಿನಲ್ ಪ್ರಕರಣ ದಾಖಲಿಸಿ.

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಸಿಎಂ ಸಿದ್ದರಾಮಯ್ಯ ಹಲವು ಷರತ್ತುಗಳನ್ನು ಹಾಕಿದ್ದಾರೆ. ದೀಪಾವಳಿ ದಿನ ಹಸಿರು ಪಟಾಕಿ ಸಿಡಿಸಲು ಮಾತ್ರ ಅವಕಾಶವಿದ್ದು ರಾತ್ರಿ 8 ಗಂಟೆಯಿಂದ 10 ಗಂಟೆ ಒಳಗೆ ಮಾತ್ರ ಪಟಾಕಿ ಹೊಡೆಯಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಒಗಳ ಜತೆ ಗೃಹಕಚೇರಿ ಕೃಷ್ಣಾದಲ್ಲಿ ಇಂದು ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರತಿವರ್ಷ ಪಟಾಕಿ ಸಿಡಿಸುವ ವೇಳೆ ಅವಘಡಗಳು ಸಂಭವಿಸುತ್ತದೆ. ಈ ಬಾರಿ ಪಟಾಕಿ ಅವಘಡ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದಂತೆ ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಅವಕಾಶ ನೀಡಬಾರದು. ಪಟಾಕಿ ದಾಸ್ತಾನು, ಮಾರಾಟ ಪ್ರಕ್ರಿಯೆಯಲ್ಲಿ ಲೋಪ ಆಗಬಾರದು. ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಿ, ನಿಯಮ ಮೀರಿದರೆ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



