MUDA Case: ಸಿಎಂ ಸಿದ್ದರಾಮಯ್ಯ ಪತ್ನಿಗೆ ಮತ್ತೊಂದು ಸಂಕಷ್ಟ; '1.84 ಕೋಟಿ ರೂ ಹೇಗೆ ಬಂತು?'
ಮೈಸೂರಿನ ಕೈಗಾರಿಕಾ ಪ್ರದೇಶದಲ್ಲಿ 2023ರ ನವೆಂಬರ್‌ನಲ್ಲಿ 1.84 ಕೋಟಿ ರೂ. ಹಣ ನೀಡಿ ಖರೀದಿಸಿರುವ 20 ಗುಂಟೆ ಜಮೀನಿಗೆ ಸಂಬಂಧಿಸಿದಂತೆ ಹಣದ ಮೂಲ ಪತ್ತೆ ಹಚ್ಚಿ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಎಂಬುವವರು ಜಾರಿ ನಿರ್ದೇಶನಾಲಯಕ್ಕೆ ಮನವಿ ಮಾಡಿದ್ದಾರೆ.

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಜಾರಿ ನಿರ್ದೇಶನಾಲಯಕ್ಕೆ ದೂರು ಸಲ್ಲಿಕೆಯಾಗಲಿದೆ ಎನ್ನಲಾಗಿದೆ.
ಮೈಸೂರಿನ ಕೈಗಾರಿಕಾ ಪ್ರದೇಶದಲ್ಲಿ 2023ರ ನವೆಂಬರ್‌ನಲ್ಲಿ 1.84 ಕೋಟಿ ರೂ. ಹಣ ನೀಡಿ ಖರೀದಿಸಿರುವ 20 ಗುಂಟೆ ಜಮೀನಿಗೆ ಸಂಬಂಧಿಸಿದಂತೆ ಹಣದ ಮೂಲ ಪತ್ತೆ ಹಚ್ಚಿ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಎಂಬುವವರು ಜಾರಿ ನಿರ್ದೇಶನಾಲಯಕ್ಕೆ ಮನವಿ ಮಾಡಿದ್ದು, ಈ ಸಂಬಂಧ ದೂರು ಕೂಡ ನೀಡಲಿದ್ದಾರೆ.
ಈ ಕುರಿತು ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿರುವ ಆರ್ ಟಿಐ ಕಾರ್ಯಕರ್ತ ಗಂಗರಾಜು, 'ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಓರ್ವ ಗೃಹಿಣಿಯಾಗಿದ್ದು, ಅವರಿಗೆ ಯಾವುದೇ ಬಾಹ್ಯ ಆದಾಯಗಳಿಲ್ಲ. ಆದಾಗ್ಯೂ ಅವರಿಗೆ ಇಷ್ಟು ಹಣ ಎಲ್ಲಿಂದ ಬಂತು.
ಹೀಗಾಗಿ, ಈ ಪ್ರಕರಣದ ಕುರಿತು ನಾನು ಇ.ಡಿ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇನೆ. ಅಧಿಕಾರಿಗಳು ನನ್ನ ಜೊತೆ ಚರ್ಚೆಗೆ ಒಪ್ಪಿದರೆ ಮತ್ತು ಈಗ ತನಿಖೆ ನಡೆಸುತ್ತಿರುವ ಪ್ರಕರಣದ ಜೊತೆಗೆ ಇದನ್ನೂ ತೆಗೆದುಕೊಳ್ಳುತ್ತೇವೆ ಎನ್ನುವುದಾದರೆ ನಾನು ಸಂಪೂರ್ಣ ದಾಖಲಾತಿಯನ್ನು ಅವರಿಗೆ ನೀಡುತ್ತೇನೆ ಎಂದಿದ್ದಾರೆ.
ಅಂತೆಯೇ ಅಧಿಕಾರಿಗಳು ಒಂದು ವೇಳೆ ಇದು ನಮಗೆ ಸಂಬಂಧಪಟ್ಟಿದ್ದಲ್ಲ. ಬೇಕಾದರೆ ನೀವು ಪ್ರತ್ಯೇಕವಾಗಿ ದೂರು ನೀಡಿ ಎಂದರೆ ಇ.ಡಿಗೆ ದೂರು ಕೊಡುತ್ತೇನೆ ಎಂದು ಹೇಳಿದರು.
ವಿಚಾರಣೆಗೆ ಕರೆದ ಇಡಿ
ಇನ್ನು ಮೈಸೂರಿನ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ತನಿಖೆ ಶುರು ಮಾಡಿದ್ದು, ಇದರ ಭಾಗವಾಗಿ ಮೈಸೂರಿನ ಆರ್‌ಟಿಐ ಕಾರ್ಯಕರ್ತ ಗಂಗರಾಜ್ ಅವರನ್ನು ಸೋಮವಾರ ವಿಚಾರಣೆಗೆ ಕರೆದಿದೆ ಎನ್ನಲಾಗಿದೆ. ವಿಚಾರಣೆ ವೇಳೆ ಗಂಗರಾಜ್ ಒಟ್ಟು 1,400 ಸೈಟ್‌ಗಳ ದಾಖಲೆಗಳನ್ನು ಇ.ಡಿಗೆ ನೀಡುತ್ತಿದ್ದಾರೆ. ಸಿದ್ದರಾಮಯ್ಯರ ಪತ್ನಿಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಹುಮುಖ್ಯ ದಾಖಲೆಯನ್ನು ಇ.ಡಿಗೆ ನೀಡಲಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



