ವಕ್ಫ್ ಸಚಿವ ಜಮೀರ್ ಅಹ್ಮದ್ ಸೂಚನೆ ಮೇರೆಗೆ ಒತ್ತುವರಿ ತೆರವು ಮಾಡಿದ್ದೇವೆ: ಜಿಲ್ಲಾಧಿಕಾರಿ ಸ್ಫೋಟಕ ಹೇಳಿಕೆ
ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಒತ್ತುವರಿ ಜಾಗ ತೆರವುಗೊಳಿಸುವಂತೆ ಹೇಳಿದ್ದರು. ಸಚಿವರ ಸೂಚನೆ ಮೇರೆಗೆ ಒತ್ತುವರಿ ತೆರವು ಮಾಡಿದ್ದೇವೆ. ಇಂದೀಕರಣ ಅಂದರೆ ಗಣಕೀಕರಣ ಸತತವಾಗಿ ನಡೆಯುತ್ತೆ. ಪ್ರತಿ ವರ್ಷವೂ ಗಣಕೀಕರಣ ಆಗಿವೆ.

ವಿಜಯಪುರ: ವಿಜಯಪುರ ವಕ್ಫ್ ಆಸ್ತಿ ನೋಂದಣಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು ಬಿಜೆಪಿ ನಿಯೋಗ ಇಂದು ವಿಜಯಪುರಕ್ಕೆ ಭೇಟಿ ನೀಡಿ ರೈತರ ಚರ್ಚಿಸಿದರು. ನಂತರ ಜಿಲ್ಲಾಧಿಕಾರಿ ಭೂಬಾಲನ್ ಅವರನ್ನು ಭೇಟಿ ಮಾಡಿ ಮಾಹಿತಿ ಪಡೆದುಕೊಂಡರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯಪುರ ಜಿಲ್ಲಾಧಿಕಾರಿ ಭೂಬಾಲನ್ ಅವರು, ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಒತ್ತುವರಿ ಜಾಗ ತೆರವುಗೊಳಿಸುವಂತೆ ಹೇಳಿದ್ದರು. ಸಚಿವರ ಸೂಚನೆ ಮೇರೆಗೆ ಒತ್ತುವರಿ ತೆರವು ಮಾಡಿದ್ದೇವೆ. ಇಂದೀಕರಣ ಅಂದರೆ ಗಣಕೀಕರಣ ಸತತವಾಗಿ ನಡೆಯುತ್ತೆ. ಪ್ರತಿ ವರ್ಷವೂ ಗಣಕೀಕರಣ ಆಗಿವೆ. ನೋಟಿಸ್ ಕೊಡದೆಯೂ ಇಂದೀಕರಣ ಆದ ಉದಾಹರಣೆ ಇವೆ ಎಂದು ಸ್ಪಷ್ಟಪಡಿಸಿದರು.
ಭೂ ಮಾಲೀಕರು ಹಾಗೂ ವಕ್ಫ್ಗೆ ನಾವು ನೊಟೀಸ್ ಕೊಟ್ಟಿದ್ದೇವೆ. ನೋಟಿಸ್ ಕೊಟ್ಟ ತಕ್ಷಣ ಖಾತಾ ಬದಲಾವಣೆ ಆಗುವುದಿಲ್ಲ. ಇಬ್ಬರನ್ನೂ ಕರೆದು ವಿಚಾರಣೆ ನಡೆಸುತ್ತೇವೆ. ಕಾಲಂ ನಂ.9ರಲ್ಲಿ ಹಾಗೂ ಮಾಲೀಕತ್ವ ಜಾಗದಲ್ಲಿ ವಕ್ಫ್ ಹೆಸರು ಹಾಕಿಲ್ಲ. 44 ಆಸ್ತಿಗಳಿಗೆ ನೋಟಿಸ್ ಕೊಡದೆ ಇಂದೀಕರಣ ಮಾಡಿದ್ದೇವೆ. ಆದರೆ ಅವರ ಮಾಲೀಕತ್ವ ಬದಲಾಗಲ್ಲ. ಇಂಡಿ ತಹಶೀಲ್ದಾರ್ 41 ಖಾತೆಗಳಿಗೆ ನೋಟಿಸ್ ಕೊಡದೆ ಗಣಕೀಕರಣ ಮಾಡಿದ್ದಾರೆ. ಅದೆಲ್ಲವನ್ನು ಕ್ಯಾನ್ಸಲ್ ಮಾಡಿದ್ದೇವೆ. ನಾಳೆ ಪಹಣಿಯಿಂದ ವಕ್ಫ್ ಹೆಸರು ಹೋಗಲಿದೆ ಎಂದರು.
ವಕ್ಫ್ ಸಚಿವರು ಭವಿಷ್ಯದಲ್ಲಿ ಇಂತಹ ಸಮಸ್ಯೆ ಆಗಬಾರದೆಂದು ಟಾಸ್ಕ್ಫೋರ್ಸ್ ರಚನೆ ಮಾಡಿದ್ದಾರೆ. 250 ಎಕರೆ ಭೂಮಿಗೆ ನೋಟಿಸ್ ಕೊಡಲಾಗಿದೆ. ಈಗಾಗಲೇ ಕೊಟ್ಟಿರುವ ನೋಟಿಸ್ಗಳನ್ನು ವಾಪಸ್ ಪಡೆಯುತ್ತೇವೆ. ಎರಡು ಮೂರು ವರ್ಷಗಳ ಹಾಗೂ ಅದಕ್ಕೂ ಮುಂಚೆ ಆದ ಇಂದೀಕರಣ ಪ್ರಕರಣಗಳ ಕುರಿತು ಸರ್ಕಾರ ನೀಡುವ ಸೂಚನೆ ಪಾಲನೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಭೂಬಾಲನ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



