ರೇಣುಕಾಸ್ವಾಮಿ ಕೊಲೆ ಪ್ರಕರಣ: ಬಳ್ಳಾರಿ ಜೈಲಿನಿಂದ ನಟ ದರ್ಶನ್ ಬಿಡುಗಡೆ, ಬೆಂಗಳೂರಿನತ್ತ ಪ್ರಯಾಣ
ಬಳ್ಳಾರಿ ಜೈಲಿನಲ್ಲಿ ಜಾಮೀನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ನಟ ದರ್ಶನ್ ಅವರು 131 ದಿನಗಳ ನಂತರ ಜೈಲಿನಿಂದ ಹೊರಗೆ ಬಂದಿದ್ದಾರೆ.

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ತೂಗುದೀಪ ಅವರಿಗೆ ಹೈಕೋರ್ಟ್ ಬುಧವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಇಂದು ಸಂಜೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಕಳೆದ 63 ದಿನಗಳಿಂದ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿದ್ದ ದರ್ಶನ್ಗೆ ಬೆನ್ನು ನೋವು ಕಾಣಿಸಿಕೊಂಡಿದೆ. ಹೀಗಾಗಿ ಚಿಕಿತ್ಸೆಗಾಗಿ ದರ್ಶನ್ ಪರ ವಕೀಲರು ಕೋರ್ಟ್ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ವೈದ್ಯರ ವರದಿ ಆಧರಿಸಿ 6 ವಾರಗಳ ಮಧ್ಯಂತರ ಜಾಮೀನಿ ನೀಡಿದೆ.
ಬಳ್ಳಾರಿ ಜೈಲಿನಲ್ಲಿ ಜಾಮೀನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ನಟ ದರ್ಶನ್ ಅವರು ಒಟ್ಟು 131 ದಿನಗಳ ನಂತರ ಜೈಲಿನಿಂದ ಹೊರಗೆ ಬಂದಿದ್ದಾರೆ. ಜೈಲಿನಿಂದ ಹೊರಗೆ ಬರುವಾಗ ಕುಂಟುತ್ತಾ ಬಂದಿದ್ದು, ಇದರಿಂದ ಅವರಿಗೆ ಬೆನ್ನು ನೋವು ತೀವ್ರವಾಗಿ ಉಲ್ಬಣಗೊಂಡಿದೆ ಎಂಬ ಲಕ್ಷಣಗಳು ಕಂಡುಬಂದವು.
ದರ್ಶನ್, ಜೈಲಿನ ಹೊರಗೆ ಕಾಯುತ್ತಿದ್ದ ಪತ್ನಿ ವಿಜಯಲಕ್ಷ್ಮೀ ಅವರ ಕಾರಿನಲ್ಲಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದು, ಇಂದು ರಾತ್ರಿ ಬೆಂಗಳೂರು ತಲುಪಲಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಕಳೆದ ಜೂನ್ 11 ರಂದು ದರ್ಶನ್ ಬಂಧನವಾಗಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ನಂತರ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಪ್ರಕರಣದಲ್ಲಿ ಆತನ ಸ್ನೇಹಿತೆ ಪವಿತ್ರಾ ಗೌಡ ಸೇರಿ 15 ಮಂದಿ ಸಹ ಆರೋಪಿಗಳಾಗಿದ್ದಾರೆ. ಪವಿತ್ರಾ ಬೆಂಗಳೂರಿನ ಜೈಲಿನಲ್ಲಿ ಮತ್ತು ಇತರರು ರಾಜ್ಯದ ವಿವಿಧ ಜೈಲುಗಳಲ್ಲಿದ್ದಾರೆ. ಅವರಲ್ಲಿ ಕೆಲವರು ಇತ್ತೀಚೆಗೆ ಜಾಮೀನು ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



