ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರು: ಹೈ ಕೋರ್ಟ್ ತೀರ್ಪು ಸ್ವಾಗತಾರ್ಹ- ಡಿಕೆ ಶಿವಕುಮಾರ್
ನ್ಯಾಯಾಲಯದ ತೀರ್ಪನ್ನು ನಾನು ಪ್ರಶ್ನಿಸುವುದಿಲ್ಲ, ನ್ಯಾಯಾಲಯದ ತೀರ್ಪನ್ನು ಸರಕಾರ ಗೌರವಯುತವಾಗಿ ಸ್ವಾಗತಿಸುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ ಅವರಿಗೆ ಮಧ್ಯಂತರ ಜಾಮೀನು ನೀಡಿರುವ ಹೈಕೋರ್ಟ್ ತೀರ್ಪನ್ನು ಸರ್ಕಾರ ಗೌರವಯುತವಾಗಿ ಸ್ವಾಗತಿಸುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ನ್ಯಾಯಾಲಯದ ತೀರ್ಪನ್ನು ನಾನು ಪ್ರಶ್ನಿಸುವುದಿಲ್ಲ, ನ್ಯಾಯಾಲಯದ ತೀರ್ಪನ್ನು ಸರಕಾರ ಗೌರವಯುತವಾಗಿ ಸ್ವಾಗತಿಸುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ದರ್ಶನ್‌ಗೆ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಲು ಹೈಕೋರ್ಟ್ ಆರು ವಾರಗಳ ಅವಧಿಗೆ ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
47 ವರ್ಷದ ದರ್ಶನ್ ಅವರನ್ನು ಜೂನ್ 11 ರಂದು ಬಂಧಿಸಲಾಗಿದ್ದು, ಬಳ್ಳಾರಿ ಜೈಲಿನಲ್ಲಿ ಇರಿಸಲಾಗಿದೆ. ಪ್ರಕರಣದಲ್ಲಿ ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ಸೇರಿ 15 ಮಂದಿ ಸಹ ಆರೋಪಿಗಳಾಗಿದ್ದಾರೆ. ಪವಿತ್ರಾ ಗೌಡ ಬೆಂಗಳೂರಿನ ಜೈಲಿನಲ್ಲಿ ಮತ್ತು ಇತರರು ರಾಜ್ಯದ ವಿವಿಧ ಜೈಲುಗಳಲ್ಲಿದ್ದಾರೆ, ಅವರಲ್ಲಿ ಕೆಲವರು ಇತ್ತೀಚೆಗೆ ಜಾಮೀನು ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



