ಹಾಸನಾಂಬೆ ದರ್ಶನ: ಕಂದಾಯ ಇಲಾಖೆ ಸಿಬ್ಬಂದಿ ಮಧ್ಯೆ ಮಾರಾಮಾರಿ
ಹಾಸನಾಂಬೆ ದೇವಾಲಯದ ಎಕ್ಸಿಟ್ ಗೇಟ್ ಬಳಿ ಘಟನೆ ನಡೆದಿದ್ದು, ಸಿಬ್ಬಂದಿ ಕೈಕೈ ಮಿಲಾಯಿಸಿಕೊಂಡಿದ್ದಾರೆ. ಸಿಬ್ಬಂದಿಯ ಜಗಳ ಬಿಡಿಸಲು ಪೊಲೀಸರ ಹರಸಾಹಸ ಪಟ್ಟರು.

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಶಕ್ತಿ ದೇವತೆ ಹಾಸನಾಂಬೆ ದರ್ಶನ ವಿಚಾರದಲ್ಲಿ ಇಂದು ಗುರುವಾರ ಸಹ ಗಲಾಟೆ ಮುಂದುವರಿದಿದೆ. ದೇವಾಲಯದಲ್ಲಿ ಕುಟುಂಬಸ್ಥರನ್ನು ದೇಗುಲಕ್ಕೆ ಕರೆದೊಯ್ಯುವ ವಿಚಾರವಾಗಿ ಕಂದಾಯ ಇಲಾಖೆ ಸಿಬ್ಬಂದಿಯ ನಡುವೆ ಮಾರಾಮಾರಿ ನಡೆದಿದೆ.
ಹಾಸನಾಂಬೆ ದೇವಾಲಯದ ಎಕ್ಸಿಟ್ ಗೇಟ್ ಬಳಿ ಘಟನೆ ನಡೆದಿದ್ದು, ಸಿಬ್ಬಂದಿ ಕೈಕೈ ಮಿಲಾಯಿಸಿಕೊಂಡಿದ್ದಾರೆ. ಸಿಬ್ಬಂದಿಯ ಜಗಳ ಬಿಡಿಸಲು ಪೊಲೀಸರ ಹರಸಾಹಸ ಪಟ್ಟರು.
ನಿನ್ನೆ ಹಾಸನಾಂಬ ದರ್ಶನ ವಿಚಾರವಾಗಿ ಹಾಸನ ನಗರಸಭೆ ಎದುರಿನ ಮುಖ್ಯದ್ವಾರದ ಬಳಿ ಪೊಲೀಸ್ ಇಲಾಖೆ ಸಿಬ್ಬಂದಿ ಹಾಗೂ ಡಿಸಿ ಕಚೇರಿ ಸಿಬ್ಬಂದಿ ಕೈ ಕೈ ಮಿಲಾಯಿಸಿದ್ದರು. ಜಗಳ ಬಿಡಿಸಲು ಸಿಬ್ಬಂದಿ ಹರಸಾಹಸಪಟ್ಟಿದ್ದರು.
ಹಾಸನಾಂಬ ದೇವಿಯ ದರ್ಶನಕ್ಕೆ ಇನ್ನು ಕೆಲವೇ ದಿನಗಳು ಅವಕಾಶವಿದ್ದು, ಭಕ್ತರು ಸಹಸ್ರ ಸಹಸ್ರ ಸಂಖ್ಯೆಯಲ್ಲಿ ದೇಗುಲಕ್ಕೆ ಬರುತ್ತಿದ್ದಾರೆ. ನಿಯಂತ್ರಣ ಮಾಡಲಾಗದೆ ಸಿಬ್ಬಂದಿ ಪರದಾಡುವಂತಾಯಿತು. ಹೀಗಾಗಿ 1000 ರೂಪಾಯಿ ಮೊತ್ತ ನೇರ ದರ್ಶನದ ಟಿಕೆಟ್ ವಿತರಣೆ, ವಿಐಪಿ ಪಾಸ್ ರದ್ದುಗೊಳಿಸಲಾಗಿದೆ. ಜತೆಗೆ, ಹಾಸನಾಂಬೆ ದರ್ಶನಕ್ಕೆ ಬಿಟ್ಟಿದ್ದ ವಿಶೇಷ ಬಸ್ಗಳ ಸಂಚಾರವನ್ನೂ ರದ್ದುಗೊಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



