Sexual assault case: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ FIR
ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿರುವ ದಕ್ಷಿಣ ಕನ್ನಡ ಮಹಿಳಾ ಠಾಣೆಯಲ್ಲಿ ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ (Arun Kumar Puthila) ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಎಫ್ ಐಆರ್ ದಾಖಲಾಗಿದೆ.
ಹೌದು.. ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿರುವ ದಕ್ಷಿಣ ಕನ್ನಡ ಮಹಿಳಾ ಠಾಣೆಯಲ್ಲಿ ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ 47 ವರ್ಷದ ಮಹಿಳೆ ತಮ್ಮ ಮೇಲೆ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದು, ದೂರಿನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ನಲ್ಲಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ.
2023 ಜೂನ್ನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ನಲ್ಲಿ ಲೈಂಗಿಕ ದೌರ್ಜನ್ಯವೆಸಗಿ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲ್ಯಾಕ್ಮೇಲ್ ಮಾಡಿದ್ದಾರೆಂದು ಮಹಿಳೆ ಆರೋಪಿಸಿದ್ದಾರೆ.
ಅರುಣ್ ಕುಮಾರ್ ಪುತ್ತಿಲ ಪುತ್ತೂರು ವಿಧಾನಸಭಾ ಚುನಾವಣೆಗೆ ಹಿಂದುತ್ವದ ಹೆಸರಿನಲ್ಲಿ ಬಿಜೆಪಿ ವಿರುದ್ಧ ಬಂಡಾಯ ಸ್ಪರ್ಧೆ ಮಾಡಿದ್ದರು. ಪುತ್ತಿಲಗೆ ಅಭಿಮಾನಿ ಆಗಿ ಸಾಮಾಜಿಕ ಜಾಲತಾಣದಲ್ಲಿ ಫಾಲೋ ಮಾಡಿದ್ದಾಗಿ ಮಹಿಳೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



