ರಾಜ್ಯ

370ನೇ ವಿಧಿ ರದ್ದಾದ ಬಳಿಕ ಜಮ್ಮು-ಕಾಶ್ಮೀರದಲ್ಲಿ ಶಾಂತಿ ನೆಲೆಸಿದೆ: ಹೆಚ್‌ಡಿ ದೇವೇಗೌಡ

370ನೇ ವಿಧಿ ರದ್ದಾದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಜನರು ಶಾಂತಿಯುತ ಜೀವನವನ್ನು ನಡೆಸುತ್ತಿದ್ದಾರೆ ಮತ್ತು ಯಾವುದೇ ಭಯವಿಲ್ಲದೆ ಬೀದಿಗಳಲ್ಲಿ ಮುಕ್ತವಾಗಿ ಓಡಾಡುತ್ತಿದ್ದಾರೆಂದು.

370ನೇ ವಿಧಿ ರದ್ದಾದ ಬಳಿಕ ಜಮ್ಮು-ಕಾಶ್ಮೀರದಲ್ಲಿ ಶಾಂತಿ ನೆಲೆಸಿದೆ: ಹೆಚ್‌ಡಿ ದೇವೇಗೌಡ
ಮಾಜಿ ಪ್ರಧಾನಿ ದೇವೇಗೌಡ
Published On :

ಹಾಸನ: 370ನೇ ವಿಧಿ ರದ್ದುಪಡಿಸಿದ ಬಳಿಕ ಜಮ್ಮು ಕಾಶ್ಮೀರದಲ್ಲಿ ಶಾಂತಿ ನೆಲೆಸಿದೆ ಎಂದು ಮಾಜಿ ಪ್ರಧಾನಮಂತ್ರಿ ಹೆಚ್‌ಡಿ ದೇವೇಗೌಡ ಅವರು ಶನಿವಾರ ಹೇಳಿದರು.

ಶ್ರಾವಣ ಶನಿವಾರದ ನಿಮಿತ್ತ ದೇವೇಗೌಡ ಅವರು ಮಾವಿನಕೆರೆ ಬೆಟ್ಟದಲ್ಲಿ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 370ನೇ ವಿಧಿ ರದ್ದಾದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಜನರು ಶಾಂತಿಯುತ ಜೀವನವನ್ನು ನಡೆಸುತ್ತಿದ್ದಾರೆ ಮತ್ತು ಯಾವುದೇ ಭಯವಿಲ್ಲದೆ ಬೀದಿಗಳಲ್ಲಿ ಮುಕ್ತವಾಗಿ ಓಡಾಡುತ್ತಿದ್ದಾರೆಂದು ಹೇಳಿದರು.

ಇದೇ ವೇಳೆ ಈ ನಿರ್ಧಾರ ಕೈಗೊಂಡ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಕೊಂಡಾಡಿದರು. ಪ್ರಧಾನಿ ಮೋದಿಯವರು 370 ಆರ್ಟಿಕಲ್ ರದ್ದು ಮಾಡಿದ್ದಾರೆ. ಮೋದಿಯವರು ಪ್ರಧಾನಿಯಾದ ಮೇಲೆ ಉಗ್ರರನ್ನು ನಿಯಂತ್ರಿಸಿದ್ದಾರೆ. ಕಾಶ್ಮೀರದಲ್ಲಿ ಮೊದಲಿದ್ದಂತೆ ಆತಂಕದ ವಾತಾವರಣ ಇಲ್ಲ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ನೋಡಬಹುದಾಗಿದೆ. ಕಾಶ್ಮೀರ ವಿಚಾರದಲ್ಲಿ ಪ್ರಧಾನಿ ಮೋದಿ ಕಠಿಣ ನಿರ್ಧಾರ ತೆಗೆದುಕೊಂಡಿದ್ದಾರೆ. ಹಿಂದೆ ನಡೆಯುತ್ತಿದ್ದ ಅಕ್ರಮವನ್ನು ಸ್ವಲ್ಪಮಟ್ಟಿಗೆ ಸುಧಾರಣೆ ಮಾಡಿದ್ದಾರೆ. ಅದರ ಪರಿಣಾಮ ಇಂದು ಸಾಮಾನ್ಯ ಜನ ಬೀದಿಯಲ್ಲಿ ನೆಮ್ಮದಿಯಿಂದ ಓಡಾಡುತ್ತಿದ್ದಾರೆ. ಇದೀಗ ಅಲ್ಲಿ ಚುನಾವಣೆ ನಡೆಯುತ್ತಿದೆ. ಓಟು ಯಾರಿಗೆ ಹಾಕ್ತಾರೋ ಬಿಡ್ತರೋ ಕೇಳಬಾರದು. ಆದರೆ, ಮೋದಿಯವರು ಒಳ್ಳೆಯ ಕೆಲಸ ಮಾಡಿದ್ದಾರೆ. ಅಲ್ಲಿನ ಜನರು ಮೋದಿ ಪ್ರಧಾನಿಯಾದ ಬಳಿಕ ನೆಮ್ಮದಿಯಿಂದ ಇದ್ದಾರೆ. ಹೀಗಾಗಿ ಮೋದಿಯವರನ್ನ ಬೆಂಬಲಿಸುತ್ತಾರೆ ಎಂದು ತಿಳಿಸಿದರು.

ಬಳಿಕ ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ವಿಚಾರವಾಗಿ ಮಾತನಾಡಿದ ಅವರು, ನಾನು ಕರ್ನಾಟಕದ ಯಾವುದೇ ವಿಷಯದ ಬಗ್ಗೆ ಮಾತನಾಡಲ್ಲ. ಟೈಂ ಬಂದಾಗ ಮಾತನಾಡುತ್ತೇನೆ. ಹಾಸನಕ್ಕೆ ಬರುತ್ತೇನೆ, ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಮಂಡಿ ನೋವು ಬಿಟ್ಟರೆ ಆರೋಗ್ಯ ಸರಿಯಿದೆ, ತೊಂದರೆಯಿಲ್ಲ. ರಂಗನಾಥನ ಆಶೀರ್ವಾದದಿಂದ ಇನ್ನೂ ನಾಲ್ಕಾರು ವರ್ಷ ರಾಜಕೀಯ ಮಾಡುತ್ತೇನೆ. ಹಾಸನ ನನ್ನ ಜಿಲ್ಲೆ, ನನ್ನ ಹುಟ್ಟೂರು, ಸ್ವಂತ ಕ್ಷೇತ್ರ ಇದನ್ನು ಹೇಗೆ ಮರೆಯಲಿ. ಸದ್ಯಕ್ಕೆ ತಾತ್ಕಾಲಿಕವಾಗಿ ನಾನು ಜಿಲ್ಲಾ ಪ್ರವಾಸ ಮಾಡಲ್ಲ. ಕೆಲವು ದಿನಗಳ ನಂತರ ನಿಮಗೆ ತಿಳಿಸಿ ಪ್ರವಾಸ ಮಾಡುತ್ತೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.