ಅಕ್ಟೋಬರ್ 2 ರಂದು 1,000 ಶಾಲೆಗಳಲ್ಲಿ 'ಸ್ವಚ್ಛ ಬೆಂಗಳೂರು' ಪ್ರತಿಜ್ಞಾ ವಿಧಿ: ಡಿಸಿಎಂ ಶಿವಕುಮಾರ್
ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು 100 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಕ್ಟೋಬರ್ 2 ರಂದು ನಗರದಾದ್ಯಂತ ಸ್ವಚ್ಚತಾ ಅಭಿಯಾನ ಆಯೋಜಿಸಲಾಗುತ್ತಿದೆ.

ಬೆಂಗಳೂರು: ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು 100 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಕ್ಟೋಬರ್ 2 ರಂದು ನಗರದಾದ್ಯಂತ ಸ್ವಚ್ಚತಾ ಅಭಿಯಾನ ಆಯೋಜಿಸಲಾಗುತ್ತಿದ್ದು, ಒಂದು ಸಾವಿರ ಶಾಲಾ ಮಕ್ಕಳು ಆನ್ ಲೈನ್ ಮೂಲಕ ಪ್ರತಿಜ್ಞಾವಿಧಿ ತೆಗೆದುಕೊಳ್ಳಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸ್ವಚ್ಛತೆಯ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ. ಅಕ್ಟೋಬರ್ 2 ರಂದು 1 ಸಾವಿರ ಶಾಲಾ-ಕಾಲೇಜುಗಳಲ್ಲಿ ಸ್ವಚ್ಛತೆಯ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಲು ಸ್ವಚ್ಛ ಬೆಂಗಳೂರು ಪ್ರತಿಜ್ಞಾ ವಿಧಿ ಬೋಧಿಸಲಾಗುವುದು ಎಂದರು.
ನಗರದ ಗುಂಡಿಗಳ ಪರಿಸ್ಥಿತಿ ಕುರಿತು ಮಾತನಾಡಿದ ಡಿಕೆ ಶಿವಕುಮಾರ್, ಗುರುತಿಸಲಾದ 2,795 ಗುಂಡಿಗಳನ್ನು ಮುಚ್ಚುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮುಖ್ಯವಾಗಿ ಪ್ರಮುಖ ರಸ್ತೆಗಳಲ್ಲಿ ಕಡಿಮೆ ಗಮನ ಹರಿಸಲಾಗಿದೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಬೆಂಗಳೂರಿನಲ್ಲಿ ಮಳೆಯಿಂದಾಗಿ ನಾವು ಕಡಿಮೆ ತೊಂದರೆ ಎದುರಿಸಿದ್ದೇವೆ ಎಂದು ತಿಳಿಸಿದರು.
ಇನ್ನು ಎತ್ತಿನಹೊಳೆ ಯೋಜನೆ ಕುರಿತು ಮಾತನಾಡಿದ ಡಿ.ಕೆ.ಶಿವಕುಮಾರ್ ಸೆ. 6ರಂದು ಸಿಎಂ ಸಿದ್ದರಾಮಯ್ಯ ಅವರಿಂದ ಉದ್ಘಾಟನೆಯಾಗಲಿದ್ದು, ಪಕ್ಷದ ಎಲ್ಲ ಮುಖಂಡರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



