ರಾಜ್ಯ

ವಕ್ಫ್ ಆಸ್ತಿಗಳ 'ಖಾತ' ಮಾಡಲು ಒಂದು ತಿಂಗಳ ಗಡುವು ನೀಡಿದ ಸಚಿವ ಜಮೀರ್ ಅಹ್ಮದ್ ಖಾನ್

ಹುಬ್ಬಳ್ಳಿ-ಧಾರವಾಡ ವಲಯದಲ್ಲಿ ಬಾಕಿ ಉಳಿದಿರುವ 190 ಆಸ್ತಿಗಳ ಪೈಕಿ 100 ಆಸ್ತಿಗಳಿಗೆ ಖಾತ ಹಸ್ತಾಂತರಿಸಲಾಯಿತು.

ವಕ್ಫ್ ಆಸ್ತಿಗಳ 'ಖಾತ' ಮಾಡಲು ಒಂದು ತಿಂಗಳ ಗಡುವು ನೀಡಿದ ಸಚಿವ ಜಮೀರ್ ಅಹ್ಮದ್ ಖಾನ್
ಜಮೀರ್ ಅಹ್ಮದ್ ಖಾನ್
Published On :

ಧಾರವಾಡ: ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಹುಬ್ಬಳ್ಳಿ-ಧಾರವಾಡದಲ್ಲಿ ವಕ್ಫ್ ಆಸ್ತಿಗಳಿಗೆ 'ಖಾತ' ಮಾಡಲು ಒಂದು ತಿಂಗಳ ಗಡುವು ನೀಡಿದ್ದಾರೆ.

ಸೋಮವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ವಕ್ಫ್ ಆಸ್ತಿ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದ ಸಚಿವರು, ಅಧಿಕಾರಿಗಳು ಒತ್ತುವರಿ ತಡೆಗೆ ಕ್ರಮಕೈಗೊಂಡು ಈ ಆಸ್ತಿಗಳ ರಕ್ಷಣೆಗೆ ಮುಂದಾಗಬೇಕು ಎಂದರು.

ಹುಬ್ಬಳ್ಳಿ-ಧಾರವಾಡ ವಲಯದಲ್ಲಿ ಬಾಕಿ ಉಳಿದಿರುವ 190 ಆಸ್ತಿಗಳ ಪೈಕಿ 100 ಆಸ್ತಿಗಳಿಗೆ ಖಾತ ಹಸ್ತಾಂತರಿಸಲಾಯಿತು.

ಉತ್ತರ ಕನ್ನಡ ಜಿಲ್ಲೆಯ ವಕ್ಫ್ ಆಸ್ತಿಗಳಿಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ತಗಾದೆ ಇರುವ ಬಗ್ಗೆ ಅಧಿಕಾರಿಗಳು ಸಚಿವರ ಗಮನಕ್ಕೆ ತಂದಾಗ, ಹದಿನೈದು ದಿನಗಳಲ್ಲಿ ಅರಣ್ಯ ಸಚಿವರ ಜತೆ ಈ ಕುರಿತು ಪ್ರತ್ಯೇಕ ಸಭೆ ನಡೆಸುವುದಾಗಿ ತಿಳಿಸಿದರು.

ಈ ಆಸ್ತಿಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ನಗರಸಭೆ, ಕಂದಾಯ, ಜಿಲ್ಲಾ ಪಂಚಾಯಿತಿ, ನಗರಾಭಿವೃದ್ಧಿ ಮುಂತಾದ ಸಂಬಂಧಿತ ಇಲಾಖೆಗಳೊಂದಿಗೆ ನಿರಂತರ ಸಂವಹನ ನಡೆಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಎರಡೂ ಜಿಲ್ಲೆಗಳಲ್ಲಿ ವಕ್ಫ್ ಅದಾಲತ್‌ಗೆ ಸಲ್ಲಿಕೆಯಾಗಿರುವ ಮನವಿಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಎಂಎಲ್ಸಿ ಅಬ್ದುಲ್ ಜಬ್ಬಾರ್, ವಕ್ಫ್ ಮಂಡಳಿ ಅಧ್ಯಕ್ಷ ಅನ್ವರ್ ಬಾಷಾ, ಶಾಸಕರಾದ ಕೋನರೆಡ್ಡಿ, ಅರವಿಂದ್ ಬೆಲ್ಲದ್, ಜಿಲ್ಲಾಧಿಕಾರಿಗಳಾದ ದಿವ್ಯಪ್ರಭಾ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ನಿರ್ದೇಶಕಿ ಜಿಲಾನಿ ಮೊಕಾಶಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.