TNIE ಫಲಶ್ರುತಿ: ಕದಿರೇನಹಳ್ಳಿ ಅಂಡರ್‌ಪಾಸ್ ಬಳಿಯ ಕಸದ ರಾಶಿ ಒಂದೇ ದಿನದಲ್ಲಿ ತೆರವು..!
ಸೆಪ್ಟೆಂಬರ್.1 ರಂದು 'BBMP apathy: Garbage littered on road next to Kadirenahalli underpass' ಶೀರ್ಷಿಕೆ ಅಡಿಯಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ವರದಿ ಪ್ರಕಟಿಸಿತ್ತು.

ಬೆಂಗಳೂರು: ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ (The New Indian express newspaper) ಬೆಂಗಳೂರು ಆವೃತ್ತಿಯಲ್ಲಿ ವರದಿ ಬಂದ ಒಂದೇ ದಿನದಲ್ಲೇ ಬಿಬಿಎಂಪಿ (BBMP) ಸಿಬ್ಬಂದಿ ಕದಿರೇನಹಳ್ಳಿ ಅಂಡರ್‌ಪಾಸ್ ಬಳಿ ಬಿದ್ದಿದ್ದ ಕಸವನ್ನು ತೆರವುಗೊಳಿಸಿದೆ.
ಸೆಪ್ಟೆಂಬರ್.1 ರಂದು 'BBMP apathy: Garbage littered on road next to Kadirenahalli underpass' ಶೀರ್ಷಿಕೆ ಅಡಿಯಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ವರದಿ ಪ್ರಕಟಿಸಿತ್ತು. ವರದಿ ಬೆನ್ನಲ್ಲೇ ಲೋಕಾಯುಕ್ತರು ಬಿಬಿಎಂಪಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು, ಇದೀಗ ಬಿಬಿಎಂಪಿ ಅಧಿಕಾರಿಗಳು ಕಸವನ್ನು ತೆರವುಗೊಳಿಸಿದ್ದಾರೆ.
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಬಳಿಕ ಲೋಕಾಯುಕ್ತ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಕಸದ ರಾಶಿ ಹಾಗೂ ಕಸ ತುಂಬಿದ್ದ ಮಿನಿ ಆಟೋಗಳು ಕಣ್ಣಿಗೆ ಬಿದ್ದಿದ್ದು, ಬಳಿಕ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ ವೀರಪ್ಪ ಮತ್ತು ನ್ಯಾಯಮೂರ್ತಿ ಕೆ ಎನ್ ಫಣೀಂದ್ರ ಅವರು ಸೋಮವಾರ ಮಧ್ಯಾಹ್ನ 2.45 ರ ಸುಮಾರಿಗೆ ಬನಶಂಕರಿ ಸುತ್ತಮುತ್ತಲಿನ ಇತರ ಸ್ಥಳಗಳು ಸೇರಿದಂತೆ ಕದಿರೇನಹಳ್ಳಿ ಅಂಡರ್‌ಪಾಸ್ ಅನ್ನು ಪರಿಶೀಲಿಸಿದ್ದರು. ಲೋಕಾಯುಕ್ತರ ಸೂಚನೆಗೆ ಕ್ಷಿಪ್ರವಾಗಿ ಸ್ಪಂದಿಸಿದ ಬಿಬಿಎಂಪಿ ಮಂಗಳವಾರದ ವೇಳೆಗೆ ಕದಿರೇನಹಳ್ಳಿ ಕೆಳಸೇತುವೆ ಹಾಗೂ ಇತರೆ ಪ್ರದೇಶಗಳ ಬಳಿ ಬಿದ್ದಿದ್ದ ಕಸವನ್ನು ತೆರವುಗೊಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



