ಚಿಕ್ಕಮಗಳೂರು: ಅನಿವಾಸಿ ಭಾರತೀಯ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಯೋಗ ಗುರು ಬಂಧನ
ಅನಿವಾಸಿ ಭಾರತಿ ಮಹಿಳೆ ವೈದ್ಯೆ ಮೇಲೆ ಅತ್ಯಾಚಾರ ಆರೋಪ ಕೇಳಿ ಬಂದಿದೆ. ತಾನು ಹಿಂದಿನ ಜನ್ಮದಲ್ಲಿ ಆಕೆಯ ಜೊತೆ ಸಂಬಂಧ ಹೊಂದಿದ್ದಾಗಿ ಆರೋಪಿ ತಿಳಿಸಿದ್ದಾನೆ.

ಚಿಕ್ಕಮಗಳೂರು: ವಿದೇಶಿ ವೈದ್ಯ ಮಹಿಳೆ ಮೇಲೆ ಯೋಗಗುರು ಅತ್ಯಚಾರ ಎಸಗಿರುವ ಘಟನೆ, ಚಿಕ್ಕಮಗಳೂರು ತಾಲೂಕು ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಯೋಗಗುರು ಹಾಗೂ ಆರೋಪಿ ಪ್ರದೀಪ್ ಉಲ್ಲಾಳ ಎಂಬಾತನನ್ನು ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತಾಲೂಕಿನ ಮಲ್ಲೇನಹಳ್ಳಿ ಗ್ರಾಮದಲ್ಲಿರುವ ‘ಕೇವಲ’ ಎಂಬ ಆಶ್ರಮದಲ್ಲಿ ಈ ಘಟನೆ ನಡೆದಿದೆ. ಅನಿವಾಸಿ ಭಾರತಿ ಮಹಿಳೆ ವೈದ್ಯೆ ಮೇಲೆ ಅತ್ಯಾಚಾರ ಆರೋಪ ಕೇಳಿ ಬಂದಿದೆ. ತಾನು ಹಿಂದಿನ ಜನ್ಮದಲ್ಲಿ ಆಕೆಯ ಜೊತೆ ಸಂಬಂಧ ಹೊಂದಿದ್ದಾಗಿ ಆರೋಪಿ ತಿಳಿಸಿದ್ದಾನೆ.
ಕೆಲವು ತಿಂಗಳ ಹಿಂದೆ ಯೋಗ, ಧ್ಯಾನ ಕಲಿಯಲು ಆಶ್ರಮಕ್ಕೆ ಬಂದಿದ್ದರು. ಯೋಗ, ಧ್ಯಾನ ಕಲಿಸುತ್ತಿದ್ದ ಆರೋಪಿ ಪ್ರದೀಪ್ ವೈದ್ಯೆ ಮೇಲೆ ಅತ್ಯಾಚಾರ ಎಸಗಿದ್ದು ಬೆಳಕಿಗೆ ಬಂದಿದೆ. ದೂರು ದಾಖಲಿಸಿರುವ ಮಹಿಳೆ ಪಂಜಾಬ್ ಮೂಲದವರು ಆದರೆ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನೆಲೆಸಿದ್ದಾರೆ. 2021 ಮತ್ತು 2022 ರ ನಡುವೆ ಯೋಗ ಗುರುವನ್ನು ಮೂರು ಬಾರಿ ಭೇಟಿ ಮಾಡಿದ್ದೆ ಆ ವೇಳೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



