ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ: ರಾಷ್ಟ್ರಪತಿ ಅಂಗಳಕ್ಕೆ ಮುಡಾ ಪ್ರಕರಣ
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಡಾ ಹಗರಣದ ವಿಚಾರವಾಗಿ ರಾಜ್ಯದಲ್ಲಿ ಪ್ರತಿಭಟನೆಗಳನ್ನು ನಡೆಸುವ ಮೂಲಕ ರಾಜ್ಯ ಸರ್ಕಾರ, ರಾಜಭವನದ ಮೇಲೆ ನಿರಂತರ ಒತ್ತಡ ಹಾಕುತ್ತಿದೆ. ಹೀಗೆ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ರಾಷ್ಟ್ರಪತಿಗೆ ಮಾಹಿತಿ ರವಾನಸಿದ್ದಾರೆ.

ಬೆಂಗಳೂರು: ಮುಡಾ ಹಗರಣ ಕಾಂಗ್ರೆಸ್ ಹಾಗೂ ಸಿಎಂ ಸಿದ್ದರಾಮಯ್ಯಗೆ ಸಾಕಷ್ಟು ಸಂಕಷ್ಟ ತಂದಿಟ್ಟಿದೆ. ಇನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್ ನೀಡಿರುವ ನಿರ್ಧಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಾನೂನು ಹೋರಾಟ ನಡೆಸಿದ್ದಾರೆ. ಇದರ ಮಧ್ಯ ಇದೀಗ ಮುಡಾ ಹಗರಣ ರಾಷ್ಟ್ರಪತಿ ಅಂಗಳ ತಲುಪಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಡಾ ಹಗರಣದ ವಿಚಾರವಾಗಿ ರಾಜ್ಯದಲ್ಲಿ ಪ್ರತಿಭಟನೆಗಳನ್ನು ನಡೆಸುವ ಮೂಲಕ ರಾಜ್ಯ ಸರ್ಕಾರ, ರಾಜಭವನದ ಮೇಲೆ ನಿರಂತರ ಒತ್ತಡ ಹಾಕುತ್ತಿದೆ. ಹೀಗೆ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ರಾಷ್ಟ್ರಪತಿಗೆ ಮಾಹಿತಿ ರವಾನಸಿದ್ದಾರೆ. ಅಲ್ಲದೇ ಕೇಂದ್ರ ಗೃಹ ಸಚಿವಾಲಯಕ್ಕೂ ಮಾಹಿತಿ ನೀಡಿದ್ದಾರೆ.
ಕಾಂಗ್ರೆಸಿಗರು ನಡೆಸುತ್ತಿರುವ ಪ್ರತಿಭಟನೆಗಳಿಂದಾಗಿ ಸಾರ್ವಜನಿಕ ಸಮಾರಂಭಗಳಿಗೆ ಹೋಗದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಗುಪ್ತಚರ ಇಲಾಖೆ ಸಲಹೆಯಂತೆ ಬುಲೆಟ್‌ಪ್ರೂಫ್ ಕಾರು ಬಳಕೆ ಮಾಡುತ್ತಿದ್ದೇನೆ. ಕೆಲ ಸಚಿವರು ಉದ್ದೇಶಪೂರ್ವಕವಾಗಿ ಕರ್ನಾಟಕ ವಿರೋಧಿ ರಾಜ್ಯಪಾಲರು, ಗೋಬ್ಯಾಕ್ ಗವರ್ನರ್ ಚಳವಳಿ ನಡೆಸಿದ್ದಾರೆ ಎಂಬ ಅಂಶಗಳ ಸಂಕ್ಷೀಪ್ತ ವರದಿಯನ್ನು ಗೆಹ್ಲೋಟ್ ಅವರು ರಾಷ್ಟ್ರಪತಿ ಹಾಗೂ ಕೇಂದ್ರ ಗೃಹಸಚಿವಾಲಯಕ್ಕೆ ರವಾನಿಸಿದ್ದಾರೆ.
ಮುಡಾ ವಿಚಾರವಾಗಿ ಸಿದ್ದರಾಮಯ್ಯ ವಿರುದ್ಧ ನೀಡಿರುವ ಪ್ರಾಸಿಕ್ಯೂಷನ್ ಅನುಮತಿಯನ್ನು ಹಿಂಪಡೆಯುವಂತೆ ಪ್ರತಿಭಟನೆಗಳ ಮೂಲಕ ರಾಜ್ಯ ಸರ್ಕಾರ, ರಾಜಭವನದ ಮೇಲೆ ನಿರಂತರ ಒತ್ತಡ ಹೇರುತ್ತಿದೆ. ಮಾಜಿ ಬಾಂಗ್ಲಾ ಪ್ರಧಾನಿಗೆ ಬಂದಂತಹ ಪರಿಸ್ಥಿತಿ ರಾಜ್ಯಪಾಲರಿಗೂ ಬರುತ್ತದೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ರಾಜ್ಯಾದ್ಯಂತ ವ್ಯಾಪಕ ಪ್ರತಿಭಟನೆ, ತಮ್ಮ ಪ್ರತಿಕೃತಿ ದಹನ ಮಾಡಲಾಗಿದೆ ಎಂದು ವರದಿಯಲ್ಲಿ ರಾಜ್ಯಪಾಲರು ಉಲ್ಲೇಖಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



