ರಾಜ್ಯದಲ್ಲಿ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ: 5,000 ಕೋಟಿ ರೂ. ಸಾಲ ಪಡೆಯಲು ಸರ್ಕಾರ ಮುಂದು
ಕೈಗಾರಿಕಾ ಪ್ರದೇಶಗಳಿಗೆ ನದಿ ನೀರು ಪೂರೈಸಲು ಅಂದಾಜು 2,000 ಕೋಟಿ ರೂಪಾಯಿ, ಹಳೆಯ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮತ್ತು ಹೊಸ ಕೈಗಾರಿಕಾ ಪ್ರದೇಶಗಳಿಗೆ ಭೂ ಸ್ವಾಧೀನಕ್ಕೆ 3,000 ಕೋಟಿ ರೂಪಾಯಿಗಳ ಅಂದಾಜು ಮಾಡಲಾಗಿದೆ.

ಬೆಂಗಳೂರು: ಹೊಸ ಕೈಗಾರಿಕಾ ಪ್ರದೇಶಗಳನ್ನು ಸ್ಥಾಪಿಸಲು ಮತ್ತು ಈಗಿರುವ ಪ್ರದೇಶಗಳಿಗೆ ನದಿ ನೀರು ಸರಬರಾಜು ಮತ್ತು ಇತರ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರವು 5 ಸಾವಿರ ಕೋಟಿ ರೂಪಾಯಿಗಳ ಸಾಲವನ್ನು ಪಡೆಯಲು ಮುಂದಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಮೂಲಭೂತ ಸೌಕರ್ಯಗಳ ಖಾತೆ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ನಿನ್ನೆ ಬೆಂಗಳೂರಿನಲ್ಲಿ ನಡೆದ ಕಾನ್ಫೆಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರೀಸ್ (CII) ಇಂಡಿಯಾ ಇನ್ನೋವೇಶನ್ ಶೃಂಗಸಭೆ - ಇನ್ನೋವರ್ಜ್ 2024ರ 20 ನೇ ಆವೃತ್ತಿಯನ್ನು ಅವರು ಉದ್ದೇಶಿಸಿ ಮಾತನಾಡಿದರು.
ಕರ್ನಾಟಕದ ಬಹುತೇಕ ಕೈಗಾರಿಕಾ ಪ್ರದೇಶಗಳಲ್ಲಿ ಮೂಲಸೌಕರ್ಯಗಳ ಕೊರತೆಯಿದೆ ಎಂದು ಹೇಳಿದ ಪಾಟೀಲ್, ಕೈಗಾರಿಕಾ ಪ್ರದೇಶಗಳಿಗೆ ಪ್ರತ್ಯೇಕ ನದಿ ನೀರು ಸರಬರಾಜು ಇಲ್ಲ. ಈ ನಿಟ್ಟಿನಲ್ಲಿ ಪ್ರಯತ್ನಗಳನ್ನು ಮಾಡಲಾಗಿದೆ ಎಂದು ಹೇಳಿದರು. ಈ ಕುರಿತು ರಾಜ್ಯ ಹಣಕಾಸು ಇಲಾಖೆ ಜತೆ ಚರ್ಚಿಸಲಾಗುತ್ತಿದೆ ಎಂದರು.
ಕೈಗಾರಿಕಾ ಪ್ರದೇಶಗಳಿಗೆ ನದಿ ನೀರು ಪೂರೈಸಲು ಅಂದಾಜು 2,000 ಕೋಟಿ ರೂಪಾಯಿ, ಹಳೆಯ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮತ್ತು ಹೊಸ ಕೈಗಾರಿಕಾ ಪ್ರದೇಶಗಳಿಗೆ ಭೂ ಸ್ವಾಧೀನಕ್ಕೆ 3,000 ಕೋಟಿ ರೂಪಾಯಿಗಳ ಅಂದಾಜು ಮಾಡಲಾಗಿದೆ ಎಂದರು.
ಸ್ಟಾರ್ಟಪ್ ಪಾರ್ಕ್ಸ್
ಕರ್ನಾಟಕವು ಕೈಗಾರಿಕೆ, ಸಂಶೋಧನೆ, ಅಭಿವೃದ್ಧಿ ಮತ್ತು ತಂತ್ರಜ್ಞಾನಗಳಿಗೆ ಒಲವು ತೋರುತ್ತಿದೆ ಎಂದ ಸಚಿವರು, ಬೆಂಗಳೂರು ಮತ್ತು ಬೆಳಗಾವಿಯಲ್ಲಿ ಎರಡು ಪ್ರತ್ಯೇಕ ಸ್ಟಾರ್ಟ್‌ಅಪ್ ಪಾರ್ಕ್‌ಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು. ಸ್ಟಾರ್ಟಪ್ ಪಾರ್ಕ್‌ಗೆ ಅಗತ್ಯವಿರುವ ಭೂಮಿಯನ್ನು ಈಗಾಗಲೇ ಬೆಂಗಳೂರಿನಲ್ಲಿ ಗುರುತಿಸಲಾಗಿದ್ದು, ಬೆಳಗಾವಿಯಲ್ಲಿ ಒಂದನ್ನು ಹುಡುಕುವ ಪ್ರಕ್ರಿಯೆ ನಡೆಯುತ್ತಿದೆ ಎಂದರು.
ಕರ್ನಾಟಕ ರಾಜ್ಯವು ವಿಜ್ಞಾನ ಮತ್ತು ತಂತ್ರಜ್ಞಾನ, ಸಂಶೋಧನೆ ಮತ್ತು ಅಭಿವೃದ್ಧಿಯ ಕೇಂದ್ರವಾಗಿದೆ. ಇದರೊಂದಿಗೆ ನಾವು ಕೌಶಲ್ಯಪೂರ್ಣ ಮಾನವ ಸಂಪನ್ಮೂಲವನ್ನು ಸಹ ರಚಿಸಬೇಕಾಗಿದೆ, ನಾಲ್ಕನೇ ಕೈಗಾರಿಕಾ ಕ್ರಾಂತಿಯನ್ನು ಪರಿಣಾಮಕಾರಿಯಾಗಿ ಸಾಧಿಸುವುದು ರಾಜ್ಯದ ಗುರಿಯಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


