ಎತ್ತಿನಹೊಳೆ ಯೋಜನೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಪತ್ರಕರ್ತರ ವಾಹನ ಬ್ರೇಕ್ ಫೇಲ್: 7 ಮಂದಿಗೆ ಗಾಯ
ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಪತ್ರಕರ್ತರು ತೆರಳುತ್ತಿದ್ದ ವಾಹನ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ಚಲಿಸುತ್ತಿದ್ದಾಗ ಬ್ರೇಕ್ ಫೇಲ್ ಆಗಿ ಲಾರಿಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಏಳು ಮಂದಿ ಪತ್ರಕರ್ತರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಾಸನ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರ ಗ್ರಾಮದಲ್ಲಿ ಆಯೋಜಿಸಲಾಗಿರುವ ಎತ್ತಿನಹೊಳೆ ಯೋಜನೆಯ ಮೊದಲ ಹಂತ ಲೋಕಾರ್ಪಣೆ ಕಾರ್ಯಕ್ರಮಕ್ಕೆ ವಾರ್ತಾ ಇಲಾಖೆಯ ವಾಹನದದಲ್ಲಿ ಪತ್ರಕರ್ತರು ತೆರಳುತ್ತಿದ್ದಾಗ ಬ್ರೇಕ್ ಫೇಲ್ ಆಗಿ ಏಳು ಮಂದಿ ಪತ್ರಕರ್ತರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಇಂದು ಶುಕ್ರವಾರ ನಡೆದಿದೆ.
ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಪತ್ರಕರ್ತರು ತೆರಳುತ್ತಿದ್ದ ವಾಹನ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ಚಲಿಸುತ್ತಿದ್ದಾಗ ಬ್ರೇಕ್ ಫೇಲ್ ಆಗಿ ಲಾರಿಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಏಳು ಮಂದಿ ಪತ್ರಕರ್ತರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು ಎತ್ತಿನಹೊಳೆ ಯೋಜನೆಯ ಮೊದಲ ಹಂತ ಲೋಕಾರ್ಪಣೆಗೊಂಡಿದ್ದು, ಸಿಎಂ, ಡಿಸಿಎಂ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ದೊಡ್ಡನಗರದ ವಿತರಣಾ ತೊಟ್ಟಿ 3ರಲ್ಲಿ ಎತ್ತಿನಹೊಳೆ ಯೋಜನೆಯ ಮೊದಲ ಹಂತವನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


