ರಾಜ್ಯ

ಮಂಗಳೂರು: ನವ ವಿವಾಹಿತ ದಂಪತಿ ಸಾಗುತ್ತಿದ್ದ ಕಾರು ಭೀಕರ ಅಪಘಾತ; ಪತ್ನಿ ಸಾವು, ಪತಿ ಗಂಭೀರ

ಕಳೆದ 5ರಂದು ಇವರಿಬ್ಬರ ವಿವಾಹ ದೇಂತಡ್ಕ ದೇವಸ್ಥಾನದಲ್ಲಿ ನೆರವೇರಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದಿದ್ದರು. ವಾಪಾಸ್​ ಮನೆಗೆ ಹೋಗುವ ವೇಳೆ ದುರ್ಘಟನೆ ನಡೆದಿದೆ.

ಮಂಗಳೂರು: ನವ ವಿವಾಹಿತ ದಂಪತಿ ಸಾಗುತ್ತಿದ್ದ ಕಾರು ಭೀಕರ ಅಪಘಾತ; ಪತ್ನಿ ಸಾವು, ಪತಿ ಗಂಭೀರ
Published On :

ಮಂಗಳೂರು: ಸುಂದರ ಕನಸು ಕಟ್ಟಿಕೊಂಡು ಎರಡು ದಿನಗಳ ಹಿಂದಷ್ಟೇ ವಿವಾಹವಾಗಿದ್ದ ನವ ದಂಪತಿ ಭೀಕರ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಬಳಿ ನಡೆದಿದೆ.

ಪೆರ್ನೆ ಸಮೀಪದ ಒಡ್ಯ ನಿವಾಸಿ ತರುಣ ಅನಿಶ್ ಕೃಷ್ಣ ತಮ್ಮ ಪತ್ನಿ ಮಾನಸ ಜೊತೆ ಬಿ.ಸಿ.ರೋಡ್ ನಿಂದ ‌ಮಂಗಳೂರು ಕಡೆಗೆ ಆಲ್ಟೋ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ನಿಯಂತ್ರಣ ಕಳೆದುಕೊಂಡು ಡಿವೈಡರ್​ಗೆ ಗುದ್ದಿ ಹಾರಿ ಕೆಎಸ್ಆರ್‌ಟಿಸಿ ಬಸ್ ಗೆ ಡಿಕ್ಕಿ ಹೊಡೆದ ರಭಸಕ್ಕೆ ಮಾನಸ ಸ್ಥಳದಲ್ಲಿಯೇ ಅಸುನೀಗಿದ್ದು, ಗಂಭೀರ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೊನ್ನೆ 5ರಂದು ಇವರಿಬ್ಬರ ವಿವಾಹ ದೇಂತಡ್ಕ ದೇವಸ್ಥಾನದಲ್ಲಿ ನೆರವೇರಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದಿದ್ದರು. ವಾಪಾಸ್​ ಮನೆಗೆ ಹೋಗುವ ವೇಳೆ ದುರ್ಘಟನೆ ನಡೆದಿದೆ. ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಆಯಿಲ್ ಲೀಕ್​ನಿಂದ ಸರಣಿ ಅಪಘಾತ ಸಂಭವಿಸಿದ್ದು, ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತೆಕ್ಕಟ್ಟೆಯಿಂದ ಮರವಂತೆವರೆಗೆ ರಾಷ್ಟ್ರೀಯ ಹೆದ್ದಾರಿ ಏಕಮುಖ ಸಂಚಾರವನ್ನು ಬಂದ್ ಮಾಡಿ, ಪೂರ್ವ ಭಾಗದ ರಸ್ತೆಯಲ್ಲಿ ಸಂಚಾರ ವ್ಯವಸ್ಥೆ ಮಾಡಲಾಗಿದೆ.

ಟ್ಯಾಂಕರ್ ನಿಂದ ಆಯಿಲ್ ಲೀಕಾದ ಹಿನ್ನೆಲೆಯಲ್ಲಿ ರಸ್ತೆ ಜಾರುತ್ತಿದ್ದು, ಬೈಕ್ ಸವಾರರ ಬೈಕ್ ಟೈಯರ್​ಗೆ ಆಯಿಲ್ ತಗುಲಿ ಜಾರಿ ಬೀಳುತ್ತಿದ್ದಾರೆ. ಇಂದು ಮುಂಜಾನೆ 7:30 ಸುಮಾರಿಗೆ ಟ್ಯಾಂಕರ್ ಒಂದರಿಂದ ಆಯಿಲ್ ಲೀಕ್ ಆಗಿರುವ ಶಂಕೆ ವ್ಯಕ್ತವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.