ರಾಜ್ಯ

ಇಂದಿನಿಂದ ರಾಜ್ಯದಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಸಾಧ್ಯತೆ: ಕರಾವಳಿ, ಮಲೆನಾಡಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಸೆಪ್ಟೆಂಬರ್ 8 ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡಕ್ಕೆ ಭಾರೀ ಮಳೆಯಾಗಲಿದೆ.

ಇಂದಿನಿಂದ ರಾಜ್ಯದಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಸಾಧ್ಯತೆ: ಕರಾವಳಿ, ಮಲೆನಾಡಿಗೆ ಯೆಲ್ಲೋ ಅಲರ್ಟ್‌ ಘೋಷಣೆ
ಪ್ರಾತಿನಿಧಿಕ ಚಿತ್ರ
Published On :

ಬೆಂಗಳೂರು: ರಾಜ್ಯದ ವಿವಿಧೆಡೆ ಶನಿವಾರ ಭಾರಿ ಮಳೆಯಾಗಿದ್ದು, ಇಂದೂ ಕೂಡಾ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸೆಪ್ಟೆಂಬರ್ 8 ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡಕ್ಕೆ ಭಾರೀ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ ಹಾಸನ ಹಾಗೂ ಚಿಕ್ಕಮಗಳೂರಿಗೆ ಭಾರೀ ಮಳೆಯಾಗಲಿದ್ದು, ಇಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿಯ ವೇಗ (40-50 ಕಿಮೀ) ಬರುವ ಸಾಧ್ಯತೆಯಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿಯ ವೇಗ (30-40 ಕಿಮೀ) ಬರುವ ಸಾಧ್ಯತೆಯಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಉಳಿದ ಜಿಲ್ಲೆಗಳ ಮೇಲೆ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.