ರಾಜ್ಯ

ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಆರೋಪ: Youtuber DV ಪೊಲೀಸ್ ವಶಕ್ಕೆ

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಹ ಯೂಟ್ಯೂಬರ್ ಗೆ ದೀಪಕ್ ಬೆದರಿಕೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎನ್ನಲಾಗಿದೆ. ಈ ಕುರಿತಂತೆ ದೀಪಕ್ ಸ್ವತಃ ತಮ್ಮ ಯೂಟ್ಯೂಬ್ ಚಾನೆಲ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿಕೊಂಡಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಆರೋಪ: Youtuber DV ಪೊಲೀಸ್ ವಶಕ್ಕೆ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಸಹ ಯೂಟ್ಯೂಬರ್ ಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಯೂಟ್ಯೂಬರ್ ದೀಪಕ್ (@DVINKANNADA)ರನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಹ ಯೂಟ್ಯೂಬರ್ ಗೆ ದೀಪಕ್ ಬೆದರಿಕೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎನ್ನಲಾಗಿದೆ.

ಈ ಕುರಿತಂತೆ ದೀಪಕ್ ಸ್ವತಃ ತಮ್ಮ ಯೂಟ್ಯೂಬ್ ಚಾನೆಲ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿಕೊಂಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿತ್ತು.

ಇದೀಗ ಇದೇ ವಿಚಾರವಾಗಿ ಬೆಂಗಳೂರಿನ ಕಾಡುಗೋಡಿ ಪೊಲೀಸರು ಯೂಟ್ಯೂಬರ್ ದೀಪಕ್ ರನ್ನು ವಶಕ್ಕೆ ಪಡೆದಿದ್ದಾರೆ.

ಅಲ್ಲದೆ ಈ ಕುರಿತು ಎಕ್ಸ್ ನಲ್ಲಿ ಸ್ಪಷ್ಟನೆ ಕೂಡ ನೀಡಿರುವ ಪೊಲೀಸರು (@dcpwhitefield) 'ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ಹಾಕಿ ಸಾರ್ವಜನಿಕರಲ್ಲಿ ಸುರಕ್ಷತಾ ಭಯವನ್ನು ಉಂಟುಮಾಡಿರುವ ದೀಪಕ್‌ ಎಂಬ ವ್ಯಕ್ತಿಯನ್ನು ಪತ್ತೆ ಮಾಡಿ, ವಶಕ್ಕೆ ಪಡೆದು, ಕಾಡುಗೋಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣವನ್ನು ದಾಖಲು ಮಾಡಲಾಗಿರುತ್ತದೆ ಎಂದು ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.