ರಾಜ್ಯ

ವಿಜಯಪುರ: ಕುಡಿದು ಆಸ್ಪತ್ರೆಗೆ ಬಂದು ಗಲಾಟೆ ಮಾಡಿದ ಸರ್ಕಾರಿ ವೈದ್ಯ

ಆಸ್ಪತ್ರೆ ಆವರಣದಲ್ಲೇ ಡಾ.ರಾಠೋಡ ಕುಸಿದು ಬಿದ್ದು ಪ್ರಜ್ಞೆ ತಪ್ಪಿದ್ದರು. ಇಂತಹ ಘಟನೆಗಳು ನಡೆದಿರುವುದು ಇದೇ ಮೊದಲಲ್ಲ ಎಂದು ಮೂಲಗಳು ತಿಳಿಸಿವೆ.

ವಿಜಯಪುರ: ಕುಡಿದು ಆಸ್ಪತ್ರೆಗೆ ಬಂದು ಗಲಾಟೆ ಮಾಡಿದ ಸರ್ಕಾರಿ ವೈದ್ಯ
ಡಾ. ನಾರಾಯಣ ರಾಥೋಡ್ — TNIE
Published On :

ವಿಜಯಪುರ: ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಶಿರನಾಳ್ ಆರೋಗ್ಯ ಕೇಂದ್ರದಲ್ಲಿ ವೈದ್ಯನೊಬ್ಬ ಮದ್ಯ ಸೇವಿಸಿ ಆಸ್ಪತ್ರೆಗೆ ಆಗಮಿಸಿ ಅವಾಂತರ ಸೃಷ್ಟಿಸಿದ ಆಘಾತಕಾರಿ ಘಟನೆ ನಡೆದಿದೆ ಆರೋಗ್ಯ ನಿರೀಕ್ಷಣಾಧಿಕಾರಿ ಹುದ್ದೆಯಲ್ಲಿರುವ ಡಾ. ನಾರಾಯಣ ರಾಠೋಡ ಕುಡಿದ ಮತ್ತಿನಲ್ಲಿ ದಾಂಧಲೆ ನಡೆಸಿದ್ದು, ಆಸ್ಪತ್ರೆಯ ಕಿಟಕಿಗಳನ್ನು ಒಡೆದು, ಪೀಠೋಪಕರಣಗಳನ್ನು ಧ್ವಂಸಗೊಳಿಸಿ, ಅಪಾರ ಆಸ್ತಿಪಾಸ್ತಿ ಹಾನಿ ಮಾಡಿದ್ದಾರೆ.

ಆಸ್ಪತ್ರೆ ಆವರಣದಲ್ಲೇ ಡಾ.ರಾಠೋಡ ಕುಸಿದು ಬಿದ್ದು ಪ್ರಜ್ಞೆ ತಪ್ಪಿದ್ದರು. ಇಂತಹ ಘಟನೆಗಳು ನಡೆದಿರುವುದು ಇದೇ ಮೊದಲಲ್ಲ ಎಂದು ಮೂಲಗಳು ತಿಳಿಸಿವೆ. ಈ ಹಿಂದೆಯೂ ಕರ್ತವ್ಯದ ವೇಳೆ ಮದ್ಯ ಸೇವಿಸಿ ನಾರಾಯಣ ಅಮಾನತುಗೊಂಡಿದ್ದರು. ಆತನ ಮೇಲೆ ಮಹಿಳಾ ರೋಗಿಗಳಿಗೆ ಮೌಖಿಕವಾಗಿ ನಿಂದಿಸಿದ ಮಾಡಿದ ಆರೋಪಗಳಿವೆ. ಇತ್ತೀಚಿನ ಘಟನೆಯ ನಂತರ, ಡಾ. ರಾಥೋಡ್ ರನ್ನು ಅಮಾನತುಗೊಳಿಸುವಂತೆ ಸಾರ್ವಜನಿಕರಿಂದ ಮತ್ತು ಆಸ್ಪತ್ರೆಯ ಸಿಬ್ಬಂದಿಯಿಂದ ಒತ್ತಾಯ ಹೆಚ್ಚುತ್ತಿದೆ.

ಇದೇ ವೇಳೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಾತನಾಡಿ, ಡಾ.ರಾಥೋಡ್ ಅವರ ನಡೆ ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಈ ವಿಷಯವು ನನ್ನ ಗಮನಕ್ಕೆ ಬಂದಿರುವುದರಿಂದ, ತಪ್ಪಿತಸ್ಥ ವೈದ್ಯರ ವಿರುದ್ಧ ಗಂಭೀರ ಶಿಸ್ತು ಕ್ರಮ ಕೈಗೊಳ್ಳುವಂತೆ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳನ್ನು ಕೇಳುತ್ತೇನೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.