ರಾಜ್ಯ

ಬೆಂಗಳೂರಲ್ಲಿ 'ಹಿಟ್ ಅ್ಯಂಡ್ ರನ್' ಕೇಸ್: ಲಾಂಗ್ ಡ್ರೈವ್'ಗೆ ಹೋಗಿದ್ದ ಮೂವರು ವಿದ್ಯಾರ್ಥಿಗಳು ಬಲಿ

ಮೂವರು ಯುವಕರು ಬೈಕ್​ನಲ್ಲಿ ಲಾಂಗ್​ ಡ್ರೈವ್​ ಹೋಗಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರಲ್ಲಿ 'ಹಿಟ್ ಅ್ಯಂಡ್ ರನ್' ಕೇಸ್: ಲಾಂಗ್ ಡ್ರೈವ್'ಗೆ ಹೋಗಿದ್ದ ಮೂವರು ವಿದ್ಯಾರ್ಥಿಗಳು ಬಲಿ
ಅಪಘಾತ
Published On :

ಬೆಂಗಳೂರು: ನಗರದಲ್ಲಿ ಹಿಟ್​ & ರನ್​ಗೆ ಮೂವರು ವಿದ್ಯಾರ್ಥಿಗಳು ಬಲಿಯಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಉತ್ತರ ತಾಲೂಕಿನ ಚಿಕ್ಕಜಾಲ ಬಳಿಯ ಕೆಂಪೇಗೌಡ ಏರ್​​ಪೋರ್ಟ್​ ರಸ್ತೆಯಲ್ಲಿ ತಡರಾತ್ರಿ 1 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.

ಮೂವರು ಯುವಕರು ಬೈಕ್​ನಲ್ಲಿ ಲಾಂಗ್​ ಡ್ರೈವ್​ ಹೋಗಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ರೋಹಿತ್​​ (22), ಸುಚಿತ್ (22), ಹರ್ಷ (22) ಎಂದು ಗುರ್ತಿಸಲಾಗಿದೆ. ಮೃತ ಮೂವರು GKVKನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರು ಎಂದು ವರದಿಗಳು ತಿಳಿಸಿವೆ.

ಅಪಘಾತದ ಭೀಕರತೆಗೆ ಹೆದ್ದಾರಿಯಲ್ಲಿ ನಜ್ಜು ಗುಜ್ಜಾದ ಸ್ಥಿತಿಯಲ್ಲಿ ಮೃತ ದೇಹಗಳು ಪತ್ತೆಯಾಗಿವೆ. ಅಪಘಾತದ ನಂತರ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಮೃತದೇಹಗಳು ಅಂಬೇಡ್ಕರ್​​​ ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.