ರಾಜ್ಯ

ನಾಯಿಕೊಡೆಗಳಂತೆ ತಲೆ ಎತ್ತುತ್ತಿರುವ ನಕಲಿ ಕ್ಲಿನಿಕ್ ಗಳ ವಿರುದ್ಧ ಕಠಿಣ ಕ್ರಮ: ದಿನೇಶ್ ಗುಂಡೂರಾವ್

ಅಯುಷ್ ವೈದ್ಯರು ಕ್ಲಿನಿಕ್ ಮುಂದೆ ಗ್ರೀನ್ ಬೋರ್ಡ್ ಮತ್ತು ಆಲೋಪಥಿ ವೈದ್ಯರು ನೀಲಿ ಬೋರ್ಡ್ ಹಾಕೋದು ಕಡ್ಡಾಯ ಮಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ನಾಯಿಕೊಡೆಗಳಂತೆ ತಲೆ ಎತ್ತುತ್ತಿರುವ ನಕಲಿ ಕ್ಲಿನಿಕ್ ಗಳ ವಿರುದ್ಧ ಕಠಿಣ ಕ್ರಮ: ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್
Published On :

ಬೆಂಗಳೂರು: ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಜಾಸ್ತಿ ಇದೆ. ನಕಲಿ ವೈದ್ಯರನ್ನು ಹುಡುಕಿ ಅವರ ಕ್ಲಿನಿಕ್ ಬಂದ್ ಮಾಡಿಸುವ ಕೆಲಸ ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳುವ ಕೆಲಸ ಈಗಾಗಲೇ ಇಲಾಖೆ ಮಾಡಿದ್ದೇವೆ. ಅದಲ್ಲದೆ ಅಯುಷ್ ವೈದ್ಯರು ಕ್ಲಿನಿಕ್ ಮುಂದೆ ಗ್ರೀನ್ ಬೋರ್ಡ್ ಮತ್ತು ಆಲೋಪಥಿ ವೈದ್ಯರು ನೀಲಿ ಬೋರ್ಡ್ ಹಾಕೋದು ಕಡ್ಡಾಯ ಮಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಳಗಾವಿ ಸಮೀಪದ ಗೋಕಾಕ್‌ನಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಗುಂಡೂರಾವ್, ಹಲವಾರು ಜನರು ಸಾಂಪ್ರದಾಯಿಕ ವೈದ್ಯ ಪದ್ಧತಿ ಮತ್ತು ಹಲವಾರು ಹಳೆಯ ವೈದ್ಯಕೀಯ ಪದ್ಧತಿಗಳನ್ನು ಅಭ್ಯಾಸ ಮಾಡುತ್ತಿದ್ದಾರೆ. .

ಇದಲ್ಲದೆ, ಈ ಸಮಸ್ಯೆ ಕೇವಲ ಬೆಳಗಾವಿಗೆ ಮಾತ್ರ ಸೀಮಿತವಾಗಿಲ್ಲ, ಆದರೆ ರಾಜ್ಯಾದ್ಯಂತ ಆತಂಕ ಸೃಷ್ಟಿಯಾಗಿದೆ ಎಂದು ಅವರು ತಿಳಿಸಿದರು. ರಾಜ್ಯದಲ್ಲಿನ ಸಿಬ್ಬಂದಿ ಬಿಕ್ಕಟ್ಟನ್ನು ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ, ಕಳೆದ ಐದು ವರ್ಷಗಳಲ್ಲಿ ಖಾಲಿ ಹುದ್ದೆಗಳು ಭರ್ತಿಯಾಗದೆ ಉಳಿದಿದ್ದವು. ತಾಲೂಕು ಸರಕಾರಿ ಆಸ್ಪತ್ರೆಗಳಲ್ಲಿ ಶುಶ್ರೂಷಕರು ಹಾಗೂ ಇತರೆ ಅಗತ್ಯ ಸಿಬ್ಬಂದಿಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ನಿಟ್ಟಿನಲ್ಲಿ ಶೀಘ್ರದಲ್ಲಿ ಇಲಾಖೆ ಕಾರ್ಯ ನಿರ್ವಹಿಸಲಿದೆ ಎಂದು ಭರವಸೆ ನೀಡಿದರು.

ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ದೇಶದ ವಿವಿಧ ರಾಜ್ಯಗಳಲ್ಲಿ ಮಾಡಿದಂತೆ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ರಾಜಕೀಯ ಪಕ್ಷಗಳನ್ನು ಒಡೆದು ಆಪರೇಷನ್ ಕಮಲ ನಡೆಸುವುದು ಬಿಜೆಪಿಗೆ ಅಭ್ಯಾಸವಾಗಿ ಹೋಗಿದೆ. ನನೆಗುದಿಗೆ ಬಿದ್ದಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರದಿಂದ ಹಣ ಪಡೆಯಲು ರಾಜ್ಯದ ಬಿಜೆಪಿ ನಾಯಕರಿಗೆ ಆಸಕ್ತಿ ಇಲ್ಲ. ಎಲ್ಲೆಂದರಲ್ಲಿ ಅವ್ಯವಸ್ಥೆ ಸೃಷ್ಟಿಸುವ ಕಾರ್ಯದಲ್ಲಿ ಅವರೆಲ್ಲ ತೊಡಗಿದ್ದಾರೆ ಎಂದರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ, ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಕಾಂಗ್ರೆಸ್ ಪಕ್ಷದ ಯಾವೊಬ್ಬ ನಾಯಕರೂ ಉನ್ನತ ಹುದ್ದೆಗೆ ಪೈಪೋಟಿ ನಡೆಸಿಲ್ಲ ಎಂದರು.

ಬಿಜೆಪಿಯವರು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಗುಂಡೂರಾವ್ ಆರೋಪಿಸಿದರು. ಮಾಜಿ ಸಚಿವರಾದ ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ಸೇರಿದಂತೆ ಹಲವು ಬಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲು ವಿಳಂಬ ಮಾಡುತ್ತಿರುವ ರಾಜ್ಯಪಾಲರು ಕೇಂದ್ರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.