ಬಿಜೆಪಿ ಆಡಳಿತಾವಧಿಯಲ್ಲಿ ನಡೆದ ಹಗರಣಗಳ ತನಿಖೆ ತ್ವರಿತಗತಿಯಲ್ಲಿ ವಿಲೇವಾರಿ: ಡಾ. ಜಿ.ಪರಮೇಶ್ವರ್
ತ್ವರಿತಗತಿಯಲ್ಲಿ ತನಿಖೆ ನಡೆಯಬೇಕು ಎಂಬ ಉದ್ದೇಶದಿಂದ ಮುಖ್ಯಮಂತ್ರಿಯವರು ಸಮಿತಿ ರಚಿಸಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಬಾಕಿ ಇರುವ ಪ್ರಕರಣಗಳ ಪ್ರಗತಿ ಪರಿಶೀಲನೆ ವೇಳೆ ಗಮನಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.

ಬೆಂಗಳೂರು: ಬಿಜೆಪಿ ಆಡಳಿತಾವಧಿಯಲ್ಲಿ ನಡೆದ ಹಗರಣಗಳ ತನಿಖೆಯನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಲು ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದ್ದು, ಒಂದು ವಾರದ ಒಳಗೆ ಸಮಿತಿ ಸಭೆ ನಡೆಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಬುಧವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಹಗರಣ ಪ್ರಕರಣಗಳನ್ನು ಗುರುತಿಸಿದ್ದೇವೆ. ಅವುಗಳ ತನಿಖೆ ಯಾವ ಹಂತದಲ್ಲಿವೆ ಎಂಬುದನ್ನು ಪರಿಶೀಲಿಸಿ, ಸಚಿವ ಸಂಪುಟಕ್ಕೆ ವರದಿ ಸಲ್ಲಿಸುತ್ತೇವೆ ಎಂದು ಹೇಳಿದರು.
ತ್ವರಿತಗತಿಯಲ್ಲಿ ತನಿಖೆ ನಡೆಯಬೇಕು ಎಂಬ ಉದ್ದೇಶದಿಂದ ಮುಖ್ಯಮಂತ್ರಿಯವರು ಸಮಿತಿ ರಚಿಸಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಬಾಕಿ ಇರುವ ಪ್ರಕರಣಗಳ ಪ್ರಗತಿ ಪರಿಶೀಲನೆ ವೇಳೆ ಗಮನಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈ ವಿಚಾರ ಸಚಿವ ಸಂಪುಟ ಸಭೆಯ ಗಮನಕ್ಕೆ ಬಂದ ಬಳಿಕ ತ್ವರಿತಗತಿಯಲ್ಲಿ ಮಾಡಲು ಮುಖ್ಯಮಂತ್ರಿ ಸಮಿತಿ ರಚಿಸಿದ್ದಾರೆಂದು ತಿಳಿಸಿದರು.
ಬಿಜೆಪಿಯವರು ಏನಾದರು ಹೇಳಿಕೊಳ್ಳಲಿ. ನಮ್ಮನ್ನು ಟೀಕೆ ಮಾಡುವುದಕ್ಕೆ, ಸಲಹೆ ನೀಡಲು, ತಪ್ಪು ಮಾಡಿದಾಗ ಹೇಳುವುದಕ್ಕೆ ಅವರಿಗೆ ಜವಾಬ್ಧಾರಿಗಳಿರುತ್ತವೆ. ಆಡಳಿತ ನಡೆಸುವರಿಗೂ ಅವರಿಗೆ ಆದಂತಹ ಜವಾಬ್ದಾರಿಗಳಿರುತ್ತವೆ' ಎಂದರು.
ಸಿಎಂ ಸ್ಥಾನ ಚರ್ಚೆ ವಿಚಾರ ಕುರಿತು ಮಾತನಾಡಿ, ಮುಖ್ಯಮಂತ್ರಿ ಸ್ಥಾನದ ಚರ್ಚೆಯ ಬಗ್ಗೆ ಶಿಸ್ತಿನ ಕ್ರಮದ ಕುರಿತು ಪಕ್ಷದ ಅಧ್ಯಕ್ಷರು ಕಡಿವಾಣ ಹಾಕುತ್ತಾರೆ. ಅಧ್ಯಕ್ಷರು ಅಮೇರಿಕ ಪ್ರವಾಸದಲ್ಲಿದ್ದು, ಬಂದನಂತರ ಈ ಬಗ್ಗೆ ಗಮನ ಹರಿಸುತ್ತಾರೆ ಎಂದು ಸ್ಪಷ್ಟಪಡಿಸಿದರು.
ವಾಲ್ಮೀಕಿ ನಿಗಮ ಹಗರಣದ ಇ.ಡಿ. ಚಾರ್ಜ್‌ಶೀಟ್ ಕುರಿತು ಪ್ರತಿಕ್ರಿಯಿಸಿ, ಇಡಿ ಆರೋಪಪಟ್ಟಿಯಲ್ಲಿ, ಸಾಕ್ಷಿಗಳು ಮತ್ತು ಪುರಾವೆಗಳ ಆಧಾರದ ಮೇಲೆ ತನಿಖಾ ಸಂಸ್ಥೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



