ಬೆಂಗಳೂರು: ಅನೈತಿಕ ಸಂಬಂಧ ವಿಚಾರವಾಗಿ ಜಗಳ, ತಾಯಿಯ ಕತ್ತು ಹಿಸುಕಿ ಕೊಂದ ಮಗಳ ಬಂಧನ
ಜಯಲಕ್ಷ್ಮಿ( 46) ಮೃತಪಟ್ಟ ಮಹಿಳೆ. ಆರಂಭದಲ್ಲಿ ಆರೋಪಿ ಪವಿತ್ರಾ (29) ಮತ್ತು ಆಕೆಯ ಆಪ್ತ ಲವಣೇಶ್ ಕೊಲೆಯನ್ನು ಅಪಘಾತ ಎಂದು ಬಿಂಬಿಸಲು ಪ್ರಯತ್ನಿಸಿದ್ದಾರೆ.

ಬೆಂಗಳೂರು: ಬಾಡಿಗೆದಾರನೊಂದಿಗಿನ ಅಕ್ರಮ ಸಂಬಂಧ ಹೊಂದಿದ್ದ ವಿಚಾರ ತಿಳಿದು ಜಗಳ ಮಾಡಿದ ಹೆತ್ತ ತಾಯಿಯನ್ನೇ ಮಗಳು ಕೊಂದಿರುವ ಘಟನೆ ಹೊಂಗಸಂದ್ರದಲ್ಲಿ ನಡೆದಿದೆ.
ಜಯಲಕ್ಷ್ಮಿ( 46) ಮೃತಪಟ್ಟ ಮಹಿಳೆ. ಆರಂಭದಲ್ಲಿ ಆರೋಪಿ ಪವಿತ್ರಾ (29) ಮತ್ತು ಆಕೆಯ ಆಪ್ತ ಲವಣೇಶ್ ಕೊಲೆಯನ್ನು ಅಪಘಾತ ಎಂದು ಬಿಂಬಿಸಲು ಪ್ರಯತ್ನಿಸಿದ್ದಾರೆ. ಆದರೆ, ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಜಯಲಕ್ಷ್ಮಿಯನ್ನು ಕತ್ತು ಹಿಸುಕಿ ಹತ್ಯೆ ಮಾಡಲಾಗಿದೆ ಎಂಬುದು ಎಂದು ದೃಢಪಟ್ಟಿದೆ.
ಜಯಲಕ್ಷ್ಮಿ ಅವರ ಕಟ್ಟಡದಲ್ಲಿ ಪ್ರಾವಿಷನ್ ಸ್ಟೋರ್ ನಡೆಸುತ್ತಿದ್ದ ಆರೋಪಿ ಹಾಗೂ ಅದೇ ಕಟ್ಟಡದಲ್ಲಿ ಬಾಡಿಗೆದಾರನಾಗಿದ್ದ ಲವಣೇಶ್ ಎಂಬುವರನ್ನು ಬೊಮ್ಮನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಪವಿತ್ರಾ 11 ವರ್ಷಗಳ ಹಿಂದೆ ಸುರೇಶ್ ಎಂಬಾತನನ್ನು ಮದುವೆಯಾಗಿದ್ದು, 10 ವರ್ಷದ ಮಗಳು ಮತ್ತು ಆರು ವರ್ಷದ ಮಗ ಇದ್ದಾನೆ. ಆದರೆ, ಇತ್ತೀಚೆಗಷ್ಟೇ ಲವಣೇಶ್ ಎಂಬಾತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಇದಕ್ಕೆ ತಾಯಿ ಒಪ್ಪಿರಲಿಲ್ಲ ಎನ್ನಲಾಗಿದೆ.
ಬುಧವಾರ ಮಧ್ಯಾಹ್ನ 3 ಗಂಟೆಗೆ ತನ್ನ ತಾಯಿ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಪವಿತ್ರಾ ಪೊಲೀಸರಿಗೆ ದೂರು ನೀಡಿದ್ದಾಳೆ. ಆರೋಪಿ ಮತ್ತು ಆಕೆಯ ಕುಟುಂಬ ಸದಸ್ಯರ ಹೇಳಿಕೆಗಳನ್ನು ದಾಖಲಿಸಿಕೊಂಡ ಪೊಲೀಸರು ಆರಂಭದಲ್ಲಿ ಅದನ್ನು ಅಸಹಜ ಸಾವು ಎಂದು ವರ್ಗೀಕರಿಸಿದ್ದರು. ಆದರೆ, ಶುಕ್ರವಾರ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಜಯಲಕ್ಷ್ಮಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವುದು ದೃಢಪಟ್ಟಿದ್ದರಿಂದ ಪ್ರಕರಣ ನಾಟಕೀಯ ತಿರುವು ಪಡೆದುಕೊಂಡಿದೆ.
ಈ ವರದಿಯ ನಂತರ ಪೊಲೀಸರಿಗೆ ಪವಿತ್ರಾಳ ಮೇಲೆ ಅನುಮಾನ ಮೂಡಿದ್ದು, ವಿಚಾರಣೆ ನಡೆಸಿದಾಗ ಅಕ್ರಮ ಸಂಬಂಧದ ಬಗ್ಗೆ ತಾಯಿ ಪ್ರಶ್ನಿಸಿದಾಗ ಟವೆಲ್‌ನಿಂದ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಆಕೆ ಒಪ್ಪಿಕೊಂಡಿದ್ದಾಳೆ. ಪವಿತ್ರಾ ಮತ್ತು ಲವಣೇಶ್ ಇಬ್ಬರನ್ನೂ ಬಂಧಿಸಲಾಗಿದ್ದು, ಪೊಲೀಸ್ ವಶದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



