ಸುಳ್ಳು ದಾಖಲೆ ಸೃಷ್ಟಿಸಿ ದಲಿತರ ನಿವೇಶನ ಕಬಳಿಕೆ: ಸಿಎಂ ಸಿದ್ದರಾಮಯ್ಯ ವಿರುದ್ಧ HDK ಆರೋಪ
ಮುಡಾದಿಂದ ದಲಿತ ವ್ಯಕ್ತಿಯೊಬ್ಬರಿಗೆ ಹಂಚಿಕೆಯಾಗಿದ್ದ ನಿವೇಶನವನ್ನು ಕಬಳಿಸಿ, ಸಿದ್ದರಾಮಯ್ಯ ಮನೆ ಕಟ್ಟಿಸಿದ್ದರು. ಸಿದ್ದರಾಮಯ್ಯ ಮತ್ತವರ ಕುಟುಂಬದ ಹಗರಣಗಳು ಒಂದೆರಡಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಪ್ರಕರಣ ಜನಮಾನಸದಲ್ಲಿ ಮಾಸುವ ಮುನ್ನವೇ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ.
ಮುಡಾದಿಂದ ದಲಿತ ವ್ಯಕ್ತಿಯೊಬ್ಬರಿಗೆ ಹಂಚಿಕೆಯಾಗಿದ್ದ ನಿವೇಶನವನ್ನು ಕಬಳಿಸಿ, ಸಿದ್ದರಾಮಯ್ಯ ಮನೆ ಕಟ್ಟಿಸಿದ್ದರು. ಸಿದ್ದರಾಮಯ್ಯ ಮತ್ತವರ ಕುಟುಂಬದ ಹಗರಣಗಳು ಒಂದೆರಡಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ.
ಜೆಡಿಎಸ್ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ದಲಿತ ಅಂಗವಿಕಲ ವ್ಯಕ್ತಿಯೊಬ್ಬರಿಗೆ 10,000 ಚದರ ಅಡಿ ನಿವೇಶನ ಮಂಜೂರು ಮಾಡಿದ್ದ ಮುಡಾ, ಅವರಿಂದ ರೂ.24,000 ಕಟ್ಟಿಸಿಕೊಂಡಿತ್ತು. ಆ ನಿವೇಶನಕ್ಕೆ ಸಂಬಂಧಿಸಿದಂತೆ ಸಾಕಮ್ಮ ಎಂಬುವವರ ಹೆಸರಿನಲ್ಲಿ ಸುಳ್ಳು ದಾಖಲೆ ಸೃಷ್ಟಿಸಿದ್ದ ಸಿದ್ದರಾಮಯ್ಯ ಅವರು ಮನೆ ನಿರ್ಮಿಸಿದ್ದರು. ಆ ಮೇಲೆ ನಿವೇಶನದ ನಿಜ ಮಾಲೀಕರು ಬಂದು ನೋಡಿದರೆ ಅಲ್ಲಿ ಮನೆ ಕಟ್ಟಲಾಗಿತ್ತು. ಈ ಬಗ್ಗೆ ಜನ ಮರೆತಿರಬಹುದು, ಈ ಕುಮಾರಸ್ವಾಮಿ ಬಳಿ ಈಗಲೂ ದಾಖಲೆ ಇದೆ ಎಂದು ಹೇಳಿದರು.
ನನ್ನ ಜೀವನ ತೆರದ ಪುಸ್ತಕ ಎಂದು ಯಾವಾಗಲೂ ಹೇಳುತ್ತಾರೆ ಅವರು. ಆ ತೆರೆದ ಪುಸ್ತಕವನ್ನು ಜನ ಒಮ್ಮೆ ತೆರೆದು ನೋಡಬೇಕು. ನಿವೇಶನ ಹೊಡೆದುಕೊಂಡರು, ಆಮೇಲೆ ಅಕ್ರಮವಾಗಿ ಮನೆ ಕಟ್ಟಿಕೊಂಡರು, ನಂತರ ಅದನ್ನು ಯಾರಿಗೆ ಮಾರಾಟ ಮಾಡಿದರು? ಇಷ್ಟಕ್ಕೂ ಯಾರಿಗೆ ಮಾಡಿದರು? ಈಗ ಯಾರ ಬಳಿ ಇದೆ ಅದು? ಸುಮ್ಮನೆ ಜನರ ಕಣ್ಣಿಗೆ ಮಂಕುಬೂದಿ ಎರಚಲು ಮಾರಾಟ ಎಂದು ತೋರಿಸಿಕೊಂಡಿದ್ದಾರೆ. ಎಲ್ಲವನ್ನೂ ತೆಗೆದು ನೋಡಿದರೆ ಅಸಲಿ ಬಣ್ಣ ಗೊತ್ತಾಗುತ್ತದೆ. ಆಗ ಇನ್ನೊಂದು ಹಗರಣ ಶುರುವಾಗುತ್ತದೆ ಎಂದು ಆರೋಪಿಸಿದರು.
ಇದೇ ವೇಳೆ ರೈತರಿಗೆ ಕುಮಾರಸ್ವಾಮಿ ಏನು ಮಾಡಿದರು? ಎಂದು ಕೇಳಿದ್ದ ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟ ಅವರು. ರೈತರ ಸಾಲಮನ್ನಾ ಮಾಡಿದ್ರಾ? ಈ ಕುಮಾರಸ್ವಾಮಿ ಮಾಡಿದ್ದು ಎಂದು ಎಂದು ಕಿಡಿಕಾರಿದರು.
ಪ್ರೋತ್ಸಾಹಧನ ನಾನೇ ಕೊಟ್ಟಿದ್ದು ಎಂದು ಹೇಳುತ್ತಿರುವ ಮುಖ್ಯಮಂತ್ರಿಗಳೇ, ಈ ಪ್ರೋತ್ಸಾಹ ಧನ ಚಿಂತನೆ ಮಾಡಿದ್ದು ಯಡಿಯೂರಪ್ಪ ಅವರು. ಎರಡು ರೂಪಾಯಿ ಕೊಡುವ ವ್ಯವಸ್ಥೆ ತಂದಿದ್ದರು ಅವರು. ನಾನು ಎರಡನೇ ಬಾರಿ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಪ್ರೋತ್ಸಾಹ ಧನ ರೂ.6 ಮಾಡಬೇಕು ಎಂದು ತೀರ್ಮಾನ ತಗೊಂಡೆ. ಆಗ ನೀವೆಲ್ಲ ಸೇರಿ ಸರ್ಕಾರ ತೆಗೆದಿರಿ ಎಂದು ಕಿಡಿಕಾರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



