ಬೆಳಗಾವಿವರೆಗೆ ವಂದೇ ಭಾರತ್ ರೈಲು ಸೇವೆ ವಿಸ್ತರಿಸಿ: ಕೇಂದ್ರಕ್ಕೆ ಸಂಸದ ಜಗದೀಶ್ ಶೆಟ್ಟರ್ ಮನವಿ
ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಬೇಕೆಂಬ ಜನರ ಬೇಡಿಕೆ ಬಹಳ ದಿನಗಳಿಂದ ಇದೆ. ಈ ಹಿಂದೆ ಬೆಳಗಾವಿಯವರೆಗೆ ಕೈಗೊಂಡಿದ್ದ ರೈಲಿನ ಪ್ರಾಯೋಗಿಕ ಸಂಚಾರವೂ ಯಶಸ್ವಿಯಾಗಿತ್ತು.

ಬೆಳಗಾವಿ: ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ಸಂಸದ ಜಗದೀಶ್ ಶೆಟ್ಟರ್ ಅವರು ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದಿರುವ ಶೆಟ್ಟರ್ ಅವರು, ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಬೇಕೆಂಬ ಜನರ ಬೇಡಿಕೆ ಬಹಳ ದಿನಗಳಿಂದ ಇದೆ. ಈ ಹಿಂದೆ ಬೆಳಗಾವಿಯವರೆಗೆ ಕೈಗೊಂಡಿದ್ದ ರೈಲಿನ ಪ್ರಾಯೋಗಿಕ ಸಂಚಾರವೂ ಯಶಸ್ವಿಯಾಗಿತ್ತು. ಆದರೆ, ತಾಂತ್ರಿಕ ಕಾರಣ ನೀಡಿದ ರೈಲ್ವೆ ಅಧಿಕಾರಿಗಳು ಸಂಚಾರ ಆರಂಭಿಸಿಲ್ಲ. ಈ ಬಗ್ಗೆ ಪರಿಶೀಲಿಸಿ ಕ್ರಮ ವಹಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಪುಣೆ-ಬೆಳಗಾವಿ-ಹುಬ್ಬಳ್ಳಿ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಪ್ರಾರಂಭಿಸಬೇಕು ಎಂಬ ನಮ್ಮ ಮನವಿಗೆ ಸ್ಪಂದಿಸಿ, ನಮ್ಮ ಬೆಳಗಾವಿ ಜನರ ಬಹುದಿನಗಳ ಬೇಡಿಕೆಯನ್ನು ಈಡೇರಿಸಲು ನಾಳೆ ಸೆಪ್ಟೆಂಬರ್ 16 ರಂದು ಪುಣೆ-ಬೆಳಗಾವಿ-ಹುಬ್ಬಳ್ಳಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರಿಂದ ಚಾಲನೆ ದೊರೆಯಲಿರುವುದು ಅತ್ಯಂತ ಸಂತಸದ ಸಂಗತಿ. ಇದಕ್ಕಾಗಿ ನಿಮಗೆ ತುಂಬು ಹೃದಯದ ಧನ್ಯವಾದಗಳು.
ಇದೀಗ ನಮ್ಮ ಕ್ಷೇತ್ರದ ಜನರ ಮತ್ತೊಂದು ಮಹತ್ವದ ಬೇಡಿಕೆಯಾದ ಬೆಂಗಳೂರು -ಹುಬ್ಬಳ್ಳಿ-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಳಗಾವಿಯವರೆಗೆ ವಿಸ್ತರಿಸಲು ತಮ್ಮಲ್ಲಿ ಮನವಿ. ಈ ಹಿಂದೆ ಈ ರೈಲನ್ನು ಬೆಳಗಾವಿಯ ವರೆಗೆ ಟ್ರಯಲ್ ರನ್ ಮಾಡಿದಾಗ ಅದು ಯಶಸ್ವಿಯಾಗಿತ್ತು. ತಾಂತ್ರಿಕ ಕಾರಣಗಳನ್ನು ನೀಡಿದ ರೈಲ್ವೆ ಅಧಿಕಾರಿಗಳು ಹೊಸ ವೇಳಾಪಟ್ಟಿಯನ್ನು ಆರಂಭಿಸುವ ಪ್ರಕ್ರಿಯೆಯನ್ನು ನಿಲ್ಲಿಸಿದ್ದಾರೆ. ಈ ಎಲ್ಲಾ ಮಾಹಿತಿಗಳನ್ನು ನಾನು ಈಗಾಗಲೇ ನಿಮ್ಮೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಸಂದರ್ಭದಲ್ಲಿ ತಿಳಿಸಿದ್ದೇನೆ.
ಕ್ಷೇತ್ರದ ಜನರ ಬೆಡಿಕೆಯನ್ನು ಗಮನದಲ್ಲಿಟ್ಟುಕೊಂಡು, ಬೆಂಗಳೂರು-ಹುಬ್ಬಳ್ಳಿ-ಧಾರವಾಡ ವಂದೇ ಭಾರತ್ ಸೇವೆಗಳನ್ನು ಬೆಳಗಾವಿವರೆಗೆ ವಿಸ್ತರಿಸಲು ತಾವು ಮನವಿಯನ್ನು ಪರಿಶೀಲಿಸುವಂತೆ ನಾನು ಮತ್ತೊಮ್ಮೆ ವಿನಂತಿಸುತ್ತೇನೆ ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



