ಯುವಕನಿಗೆ ಬಟ್ಟೆ ಬಿಚ್ಚಿಸಿ ಹಲ್ಲೆ ಪ್ರಕರಣ: ರೌಡಿ ಶೀಟರ್ ಪವನ್ ಕಾಲಿಗೆ ಗುಂಡೇಟು, ಬಂಧನ!
ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಉಲ್ಲಾಳ ಬಳಿ ಇಂದು ಬೆಳಂಬೆಳಿಗ್ಗೆ ರೌಡಿ ಶೀಟರ್ ಪವನ್ ನನ್ನು ಬಂಧಿಸಲು ಪೊಲೀಸರು ಮುಂದಾದಾಗ ಆತ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದಾನೆ.

ಬೆಂಗಳೂರು: ಇತ್ತೀಚಿಗೆ ನಡುರಸ್ತೆಯನ್ನು ಯುವಕನೊಬ್ಬನನ್ನು ವಿವಸ್ತ್ರಗೊಳಿಸಿ ಹಲ್ಲೆಗೈದಿದ್ದ ರೌಡಿಶೀಟರ್ ಪವನ್ ಅಲಿಯಾಸ್ ಕಡುಬುನನ್ನು ಪೋಲಿಸರು ಬಂಧಿಸಿದ್ದಾರೆ.
ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಉಲ್ಲಾಳ ಬಳಿ ಇಂದು ಬೆಳಂಬೆಳಿಗ್ಗೆ ರೌಡಿ ಶೀಟರ್ ಪವನ್ ನನ್ನು ಬಂಧಿಸಲು ಪೊಲೀಸರು ಮುಂದಾದಾಗ ಆತ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದಾನೆ. ಬಳಿಕ ಪೊಲೀಸರು ಆತನ ಬಲಗಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಪವನ್ ಮೇಲೆ ಬಂಧನದ ವಾರಂಟ್ ಇದ್ದರೂ ತಲೆಮರೆಸಿಕೊಂಡು ಓಡಾಡುತ್ತಿದ್ದ. ಈ ನಡುವೆ ಯುವಕನನ್ನು ನಡು ರಸ್ತೆಯಲ್ಲಿ ನಗ್ನಗೊಳಿಸಿ, ಹಲ್ಲೆ ಮಾಡಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಉಲ್ಲಾಳದ ಹಿಲ್‌ರಾಕ್ ಸ್ಕೂಲ್ ಬಳಿ ಆತನ ಬಂಧನಕ್ಕೆ ತೆರಳಿದ್ದರು. ಬಂಧನಕ್ಕೆ ವೇಳೆ ಕಡುಬು ಹೆಡ್ ಕಾನ್‌ಸ್ಟೇಬಲ್ ವೆಂಕಟೇಶ್ ಮೇಲೆ ಲಾಂಗ್‌ನಿಂದ ಹಲ್ಲೆ ನಡೆಸಿದ್ದಾನೆ.
ಆತ್ಮರಕ್ಷಣೆಗಾಗಿ ರೌಡಿಯ ಬಲಗಾಲಿಗೆ ಗೋವಿಂದರಾಜ ನಗರದ ಇನ್ಸ್ ಪೆಕ್ಟರ್ ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹೊಡೆದಿದ್ದಾರೆ. ಬಳಿಕ ಕಾಮಾಕ್ಷಿಪಾಳ್ಯ ಪೊಲೀಸರು ಕಡುಬುನನ್ನು ಬಂಧಿಸಿದ್ದಾರೆ. ಇನ್ನೂ ಬಂಧಿತ ರೌಡಿ ಶೀಟರ್ ಪವನ್ ಆಲಿಯಾಸ್ ಕಡುಬು ವಿರುದ್ಧ ನಗರದ ಹಲವು ಪೊಲೀಸ್ ಠಾಣೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



