ಬಿಜೆಪಿ ಶಾಸಕ ಮುನಿರತ್ನ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್
ಜಾಮೀನು ಕೋರಿ ಮುನಿರತ್ನ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಸಂತೋಷ್ ಗಜಾನನ ಭಟ್ ಅವರು, ಆದೇಶವನ್ನು ನಾಳೆಗೆ ಕಾಯ್ದಿರಿಸಿದ್ದಾರೆ.

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಬಂಧಿತರಾಗಿರುವ ಬಿಜೆಪಿ ಶಾಸಕ ಎನ್ ಮುನಿರತ್ನ ಅವರ ಜಾಮೀನು ಅರ್ಜಿಯ ಆದೇಶವನ್ನು ಶಾಸಕರು/ಸಂಸದರ ವಿಶೇಷ ನ್ಯಾಯಾಲಯ ಗುರುವಾರದವರೆಗೆ ಕಾಯ್ದಿರಿಸಿದೆ.
ಜಾಮೀನು ಕೋರಿ ಮುನಿರತ್ನ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಸಂತೋಷ್ ಗಜಾನನ ಭಟ್ ಅವರು, ಆದೇಶವನ್ನು ನಾಳೆಗೆ ಕಾಯ್ದಿರಿಸಿದ್ದಾರೆ.
ದೂರುದಾರರ ಪರ ವಾದ ಮಂಡಿಸಿದ ವಕೀಲ ಸೂರ್ಯ ಮುಕುಂದರಾಜ್ ಅವರು, ಶಾಸಕರ ಕಚೇರಿ ಆವರಣದಲ್ಲಿ ಈ ಘಟನೆ ನಡೆದಿರುವುದರಿಂದ ಜಾಮೀನು ನೀಡಿದರೆ ಸಾಕ್ಷ್ಯ ನಾಶವಾಗುವ ಸಾಧ್ಯತೆ ಇದೆ. ಹೀಗಾಗಿ ಜಾಮೀನು ನಿರಾಕರಿಸುವಂತೆ ಮನವಿ ಮಾಡಿದರು.
ಪ್ರಸ್ತುತ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿರುವ ಮುನಿರತ್ನ ಪರ ವಾದ ಮಂಡಿಸಿದ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ಅವರು, 2015 ರಿಂದ 2020 ರವರೆಗೆ ದೂರುದಾರ ಪಾಲಿಕೆ ಸದಸ್ಯರಾಗಿದ್ದರು. ನಂತರ ಭಿನ್ನಾಭಿಪ್ರಾಯ ಬಂದಿತ್ತೆಂದು ದೂರಿನಲ್ಲಿ ಹೇಳಲಾಗಿದೆ. 2015 ರಿಂದ ಯಾವಾಗ ನಿಂದಿಸಿದ್ದರೆಂದು ಹೇಳಿಲ್ಲ ಸಿಆರ್‌ಪಿಸಿಯ ಸೆಕ್ಷನ್ 41ಎ (ಪೊಲೀಸ್ ಅಧಿಕಾರಿಯ ಮುಂದೆ ಹಾಜರಾಗುವ ಸೂಚನೆ) ಅಡಿಯಲ್ಲಿ ನೋಟಿಸ್ ಜಾರಿ ಮಾಡಬೇಕಿತ್ತು. ಅದು ಮಾಡಿಲ್ಲ. ಹೀಗಾಗಿ ಜಾಮೀನು ನೀಡುವಂತೆ ಮನವಿ ಮಾಡಿದರು.
ಎರಡೂ ಕಡೆಯ ವಕೀಲರ ವಾದ - ಪ್ರತಿವಾದ ಆಲಿಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಆದೇಶ ಕಾಯ್ದಿರಿಸಿದ್ದಾರೆ.
ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಅವರಿಗೆ ಕಿರುಕುಳ ನೀಡಿರುವುದು, ಜಾತಿ ನಿಂದನೆ ಮತ್ತು ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಆರೋಪದ ಮೇಲೆ ಬೆಂಗಳೂರಿನಲ್ಲಿ ಎರಡು ಪ್ರಕರಣಗಳು ದಾಖಲಾದ ನಂತರ ಸೆಪ್ಟೆಂಬರ್ 14 ರಂದು ಕೋಲಾರದಲ್ಲಿ ಮುನಿರತ್ನ ಅವರನ್ನು ಬಂಧಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



