ಮೆಡಿಕಲ್ ಸ್ಟೋರ್ ಗಳಲ್ಲಿ ಸಿಂಥೆಟಿಕ್ ಡ್ರಗ್ಸ್ ಮಾರಾಟಕ್ಕೆ ಕಡಿವಾಣ ಹಾಕಲು ಕ್ರಮ: ಡಾ ಜಿ ಪರಮೇಶ್ವರ್
ಮೆಡಿಕಲ್ ಸ್ಟೋರ್ಗಳಲ್ಲಿ ಕೂಡ ಸಿಂಥೆಟಿಕ್ ಡ್ರಗ್ಸ್ ಸಿಗುತ್ತಿದೆ ಎಂಬ ಮಾಹಿತಿ ಬಂದಿದ್ದು, ಇದು ನಮಗೆ ಆತಂಕ ಮೂಡಿಸಿದೆ ಎಂದು ಎಂದಿದ್ದಾರೆ.

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದ್ದು, ಯುವಜನತೆಗೆ ಸುಲಭವಾಗಿ ಮಾರುಕಟ್ಟೆಗಳಲ್ಲಿ ಮಾದಕ ವಸ್ತು, ಡಗ್ಸ್ ದೊರಕುತ್ತಿದೆ ಎಂಬ ಆರೋಪ ಸಾಕಷ್ಟು ಕೇಳಿಬರುತ್ತಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ ಜಿ ಪರಮೇಶ್ವರ್, ಕರ್ನಾಟಕದಲ್ಲಿ ಡ್ರಗ್ಸ್ ದಂಧೆ ಹತ್ತಿಕ್ಕಲು ಕ್ರಮ ಕೈಗೊಳ್ಳುತ್ತೇವೆ. ಡ್ರಗ್ಸ್ ದಂಧೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕಡಿಮೆಯಾಗಿದೆ. ಆದಾಗ್ಯೂ, ಮೆಡಿಕಲ್ ಸ್ಟೋರ್ಗಳಲ್ಲಿ ಕೂಡ ಸಿಂಥೆಟಿಕ್ ಡ್ರಗ್ಸ್ ಸಿಗುತ್ತಿದೆ ಎಂಬ ಮಾಹಿತಿ ಬಂದಿದ್ದು, ಇದು ನಮಗೆ ಆತಂಕ ಮೂಡಿಸಿದೆ ಎಂದರು.
ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮೆಡಿಕಲ್ ಸ್ಟೋರ್ಗಳಲ್ಲಿ ಡ್ರಗ್ಸ್ ದಂಧೆಗೆ ಯಾವ ರೀತಿ ಕಡಿವಾಣ ಹಾಕಬೇಕು ಎಂಬ ಬಗ್ಗೆ ಇಂದು ಸಭೆ ನಡೆಸಿ ಚರ್ಚೆ ಮಾಡುತ್ತೇವೆ. ಮೆಡಿಕಲ್ ಸ್ಟೋರ್ಗಳಲ್ಲಿ ಸಿಂಥೆಟಿಕ್ ಡ್ರಗ್ಸ್, ನೋವು ನಿವಾರಕ ಮಾತ್ರೆಗಳನ್ನು ಹಲವು ಫಾರ್ಮಕ್ಯುಟಿಕಲ್ ಕಂಪೆನಿಯವರು ಪೂರೈಕೆ ಮಾಡಿ ಮಾರಾಟ ಮಾಡುತ್ತಿರುವ ವಿಚಾರ ಆತಂಕ ತಂದಿದೆ ಎಂದರು.
ಮಾದಕ ವಸ್ತುಗಳ ಮಾರಾಟ ದಂಧೆಯನ್ನು ನಿಯಂತ್ರಿಸಿ ಕಡಿವಾಣ ಹಾಕಬೇಕು ಎಂದು ಇಂದಿನ ಸಭೆಯಲ್ಲಿ ಚರ್ಚಿಸಲಾಗುವುದು. ಡ್ರಗ್ಸ್ ಮಾರಾಟಕ್ಕೆ ಕಾನೂನೇ ಬೇರೆ ಆಗುತ್ತದೆ. ಔಷಧ ಎಂದು ಹೇಳುತ್ತಾರೆ. ಅದಕ್ಕೆ ಆ ವಿಚಾರವಾಗಿ ಯಾವ ರೀತಿ ಕಾನೂನು ತರಬೇಕು ಎಂದು ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



