ರಾಜ್ಯ

ಬೆಂಗಳೂರು: ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ!

ಬೆಂಕಿಯನ್ನು ನಂದಿಸಲಾಗಿದೆ. ಎಲ್ಲಾ ರೋಗಿಗಳು ಸುರಕ್ಷಿತವಾಗಿದ್ದಾರೆ, ಅವರೆಲ್ಲರನ್ನೂ ಸ್ಥಳಾಂತರಿಸಲಾಗಿದೆ.

ಬೆಂಗಳೂರು: ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ!
ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ
Published On :

ಬೆಂಗಳೂರು: ಬೆಂಗಳೂರಿನ ಮತ್ತಿಕೆರೆಯಲ್ಲಿರುವ ಎಂಎಸ್ ರಾಮಯ್ಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಗುರುವಾರ ಲಘು ಅಗ್ನಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ಆಸ್ಪತ್ರೆಯ ಮೊದಲ ಮಹಡಿಯಲ್ಲಿರುವ ಕಾರ್ಡಿಯಾಕ್ ಕೇರ್ ಯೂನಿಟ್(CCU)ನಲ್ಲಿ ಸಣ್ಣ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ CCU ನಲ್ಲಿ ದಾಖಲಾಗಿದ್ದ ನಾಲ್ವರು ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.

ಮೂರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲಾಗಿದೆ. ಬೆಂಕಿ ಅವಘಡದಲ್ಲಿ ಯಾವುದೇ ರೋಗಿ ಅಥವಾ ಸಿಬ್ಬಂದಿಗೆ ಗಾಯಗಳಾಗಿಲ್ಲ" ಎಂದು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಕಿಯನ್ನು ನಂದಿಸಲಾಗಿದೆ. ಎಲ್ಲಾ ರೋಗಿಗಳು ಸುರಕ್ಷಿತವಾಗಿದ್ದಾರೆ, ಅವರೆಲ್ಲರನ್ನೂ ಸ್ಥಳಾಂತರಿಸಲಾಗಿದೆ. ಬೆಂಕಿಯಿಂದ ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಇದೇ ಮೊದಲ ಬಾರಿಗೆ ಈ ರೀತಿ ಸಂಭವಿಸಿದೆ ಮತ್ತು ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿರಬಹುದು ಎಂದು ನಾವು ಶಂಕಿಸಿದ್ದೇವೆ" ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.