ರಾಜ್ಯದ ಮಹಿಳಾ ಉದ್ಯೋಗಿಗಳಿಗೆ ವಾರ್ಷಿಕವಾಗಿ ಆರು ದಿನಗಳ ವೇತನ ಸಹಿತ ಮುಟ್ಟಿನ ರಜೆ!
ಡಾ ಸಪ್ನಾ ಮುಖರ್ಜಿ ನೇತೃತ್ವದ ತಂಡವನ್ನು ರಚಿಸಲಾಗಿದೆ, ಅದು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಿದೆ. ಈ ಸಂಬಂಧ ಎಲ್ಲ ಇಲಾಖೆಗಳೊಂದಿಗೆ ಚರ್ಚೆ ನಡೆಸುತ್ತೇವೆ. ಅನುಮೋದನೆಗಾಗಿ ನ್ನು ಶಾಸಕಾಂಗದ ಮುಂದೆ ಇಡಲಾಗುವುದು ಎಂದು ಕಾರ್ಮಿಕ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್ TNIE ಗೆ ತಿಳಿಸಿದರು.

ಬೆಂಗಳೂರು: ಖಾಸಗಿ ಮತ್ತು ಸಾರ್ವಜನಿಕ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ವಾರ್ಷಿಕವಾಗಿ ಆರು ದಿನಗಳ ವೇತನ ಸಹಿತ ಮುಟ್ಟಿನ ರಜೆಯನ್ನು ಪರಿಚಯಿಸಲು ಕರ್ನಾಟಕ ಸರ್ಕಾರ ಸಿದ್ಧವಾಗಿದೆ. ಇದನ್ನು ಪರಿಶೀಲಿಸಲು ರಚಿಸಲಾದ ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಿದ ನಂತರ ಅನುಷ್ಠಾನಗೊಳಿಸುವ ಸಂಬಂಧ ಕ್ರಮ ಕೈಗೊಳ್ಳಲಾಗುವುದು.
ಡಾ ಸಪ್ನಾ ಮುಖರ್ಜಿ ನೇತೃತ್ವದ ತಂಡವನ್ನು ರಚಿಸಲಾಗಿದೆ, ಅದು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಿದೆ. ಈ ಸಂಬಂಧ ಎಲ್ಲ ಇಲಾಖೆಗಳೊಂದಿಗೆ ಚರ್ಚೆ ನಡೆಸುತ್ತೇವೆ. ಅನುಮೋದನೆಗಾಗಿ ನ್ನು ಶಾಸಕಾಂಗದ ಮುಂದೆ ಇಡಲಾಗುವುದು ಎಂದು ಕಾರ್ಮಿಕ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್ TNIE ಗೆ ತಿಳಿಸಿದರು. ಆರಂಭಿಕ ಹಂತವಾಗಿ ಖಾಸಗಿ ವಲಯಕ್ಕೆ ಮುಟ್ಟಿನ ರಜೆ ನೀತಿ ಪರಿಚಯಿಸಲು ಕರ್ನಾಟಕ ಸರ್ಕಾರ ಚಿಂತನೆ ನಡೆಸಿದೆ. ಪೂರ್ಣ ಪ್ರಮಾಣದಲ್ಲಿ ನೀತಿ ರೂಪಿಸಿದ ನಂತರ ಸರ್ಕಾರಿ ಇಲಾಖೆಗಳಲ್ಲಿ ಕಡ್ಡಾಯಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಮೊಹ್ಸಿನ್ ಹೇಳಿದ್ದಾರೆ. ಮುಟ್ಟಿನ ರಜೆ ವಿಚಾರವಾಗಿ ಒಂದು ನೀತಿಯನ್ನು ಹೊಂದುವ ಅಗತ್ಯತೆಯ ಬಗ್ಗೆ ಸುಪ್ರೀಂ ಕೋರ್ಟ್ ಆದೇಶದಲ್ಲಿ ವ್ಯಕ್ತಪಡಿಸಿದ್ದ ಅಭಿಪ್ರಾಯಕ್ಕೆ ಅನುಗುಣವಾಗಿ ಈ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಅವರು ಹೇಳಿದ್ದಾರೆ.
ಮಹಿಳಾ ಸಿಬ್ಬಂದಿಗೆ ಮುಟ್ಟಿನ ರಜೆ ನೀಡುವುದರ ಸಾಧ್ಯಾಸಾಧ್ಯತೆ ಬಗ್ಗೆ ಗಮನಹರಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಈ ವರ್ಷದ ಜುಲೈನಲ್ಲಿ ನಿರ್ದೇಶನ ನೀಡಿತ್ತು. ಉದ್ಯೋಗದಾತರು ಮುಟ್ಟಿನ ರಜೆ ನೀಡುವುದನ್ನು ಕಡ್ಡಾಯಗೊಳಿಸುವುದರಿಂದ ಮಹಿಳೆಯರಿಗೆ ಅನುಕೂಲವಾಗಬೇಕು. ಅದರ ಬದಲಿಗೆ ಮುಟ್ಟಿನ ರಜೆ ನೀಡುವುದರಿಂದ ಉದ್ಯೋಗಗಳಲ್ಲಿ ಅವರ ಭಾಗವಹಿಸುವಿಕೆಗೆ ಪ್ರತಿಕೂಲವಾಗದಂತೆ ಗಮನಹರಿಸಬೇಕು ಎಂದು ಕೋರ್ಟ್ ಹೇಳಿತ್ತು. ಮುಟ್ಟಿನ ರಜೆಯಿಂದ ಮಹಿಳೆಯರಿಗೆ ಉದ್ಯೋಗಾವಕಾಶ ಕಡಿಮೆ ಆಗಿಬಿಟ್ಟರೆ ಎಂಬ ಆತಂಕವನ್ನೂ ಕೋರ್ಟ್ ವ್ಯಕ್ತಪಡಿಸಿತ್ತು.
ಕರ್ನಾಟಕದಲ್ಲಿ ಮುಟ್ಟಿನ ರಜೆ ನೀತಿ ರೂಪಿಸುವ ಬಗ್ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಕೂಡ ಸುಳಿವು ನೀಡಿದ್ದರು ಎನ್ನಲಾಗಿದೆ. ಮುಟ್ಟಿನ ರಜೆ ಪ್ರಸ್ತಾವನೆ ಚರ್ಚೆ ಹಂತದಲ್ಲಿದೆ. ಸಚಿವರು ಆ ಬಗ್ಗೆ ನೀತಿ ರೂಪಿಸಲು ಚಿಂತನೆ ನಡೆಸಿದ್ದರು. ಕಾರ್ಮಿಕ ಇಲಾಖೆಯು ಕೆಲವೇ ದಿನಗಳಲ್ಲಿ ಪ್ರಸ್ತಾವನೆಯನ್ನು ಪರಿಶೀಲಿಸಲಿದೆ. ಆ ನಂತರ ಅದು ಇಲಾಖೆ ಮತ್ತು ಸರ್ಕಾರಿ ಹಂತಗಳಲ್ಲಿ ಮುಂದುವರಿಯಲಿದೆ ಎಂದು ಕಾರ್ಮಿಕ ಆಯುಕ್ತ ಡಾ. ಎಚ್ಎನ್ ಗೋಪಾಲಕೃಷ್ಣ ತಿಳಿಸಿದ್ದಾರೆ.
ಕರ್ನಾಟಕವು ಈ ಕ್ರಮವನ್ನು ಮೊದಲು ಖಾಸಗಿ ವಲಯಕ್ಕೆ ಪರಿಚಯಿಸಲು ಯೋಜಿಸಿದೆ ಮತ್ತು ಅದನ್ನು ನೀತಿ ಮಾಡಿದ ನಂತರ ಸರ್ಕಾರಿ ಇಲಾಖೆಗಳಲ್ಲಿ ಕಡ್ಡಾಯವಾಗಿ ಮಾಡಲು ಯೋಜಿಸಿದೆ ಎಂದು ಅವರು ಹೇಳಿದರು. ಈ ವಿಷಯದ ಬಗ್ಗೆ ಒಂದು ನೀತಿಯನ್ನು ಹೊಂದುವ ಅಗತ್ಯತೆಯ ಸುಪ್ರೀಂ ಕೋರ್ಟ್ ಆದೇಶಕ್ಕೆ ಅನುಗುಣವಾಗಿ ಇದು ಎಂದು ಮೊಹ್ಸಿನ್ ಹೇಳಿದರು. “ಮಹಿಳೆಯರು ನಮ್ಮ ಉದ್ಯೋಗಿಗಳಲ್ಲಿ ಗಮನಾರ್ಹ ಭಾಗವಾಗಿದ್ದಾರೆ ಮತ್ತು ಅವರ ಅಗತ್ಯತೆಗಳು ಪುರುಷರಿಗಿಂತ ಭಿನ್ನವಾಗಿವೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು. ಈ ಅಗತ್ಯಗಳಿಗೆ ಸಂವೇದನಾಶೀಲವಾಗಿರುವ ಸರ್ಕಾರವಾಗಿ, ನಾವು ಈ ಸಮಸ್ಯೆಯನ್ನು ಆದ್ಯತೆಯಾಗಿ ತೆಗೆದುಕೊಳ್ಳುತ್ತಿದ್ದೇವೆ ಮತ್ತು ನಾವು ಮಹಿಳೆಯರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ಕ್ರಮವನ್ನು ತೆಗೆದುಕೊಳ್ಳುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದರು.
ಬಿಹಾರವು 1992 ರಲ್ಲಿ ಮಹಿಳೆಯರಿಗೆ ಮುಟ್ಟಿನ ರಜೆಯನ್ನು ಪರಿಚಯಿಸಿದ ದೇಶದ ಮೊದಲ ರಾಜ್ಯವಾಗಿದ್ದು, ಪ್ರತಿ ತಿಂಗಳು ಎರಡು ದಿನಗಳ ರಜೆಯನ್ನು ಒದಗಿಸಲಾಗಿದೆ. ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಕೇರಳ ಸರ್ಕಾರಗಳು ಮಹಿಳೆಯರಿಗೆ ಕೆಲವು ರೀತಿಯ ಮುಟ್ಟಿನ ರಜೆಯನ್ನು ಸಹ ಹೊಂದಿವೆ. ಜಾಗತಿಕವಾಗಿ, ಸ್ವೀಡನ್, ಇಟಲಿ, ದಕ್ಷಿಣ ಕೊರಿಯಾ, ತೈವಾನ್ ಮತ್ತು ಜಪಾನ್ ಮಹಿಳೆಯರಿಗೆ ಮಟ್ಟಿನ ರಜೆಗಳನ್ನು ನೀಡುತ್ತವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



