'ಗೋರಿಪಾಳ್ಯ ಪಾಕಿಸ್ತಾನದಲ್ಲಿದೆಯಾ?': ನ್ಯಾಯಾಧೀಶರ ಪ್ರಶ್ನೆ
ಪ್ರಕರಣ ಒಂದರ ವಿಚಾರಣೆ ವೇಳೆ ಮಾತನಾಡಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾದ ವೇದವ್ಯಾಸಾಚಾರ್ ಶ್ರೀಶಾನಂದ ಅವರು ಈ ಹೇಳಿಕೆ ನೀಡಿದ್ದು, ವಿರೋಧಗಳು ವ್ಯಕ್ತವಾಗುತ್ತಿವೆ.

ಬೆಂಗಳೂರು: ಮುಸ್ಲಿಂ ಧರ್ಮದ ಜನರು ಹೆಚ್ಚಾಗಿ ವಾಸಿಸುವ ಗೋರಿಪಾಳ್ಯವನ್ನು ಪಾಕಿಸ್ತಾನವೇ ಎಂದು ಪ್ರಶ್ನಿಸುವ ಮೂಲಕ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರು ವಿವಾದವನ್ನು ಹುಟ್ಟುಹಾಕಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಪ್ರಕರಣ ಒಂದರ ವಿಚಾರಣೆ ವೇಳೆ ಮಾತನಾಡಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾದ ವೇದವ್ಯಾಸಾಚಾರ್ ಶ್ರೀಶಾನಂದ ಅವರು ಈ ಹೇಳಿಕೆ ನೀಡಿದ್ದು, ವಿರೋಧಗಳು ವ್ಯಕ್ತವಾಗುತ್ತಿವೆ. ನ್ಯಾಯಾಧೀಶರು ಹೇಳಿಕೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಪರ-ವಿರೋಧದ ಮಾತುಗಳು ಕೇಳಿ ಬರುತ್ತಿವೆ.
ಪ್ರಕರಣವೊಂದರ ವಿಚಾರಣೆ ವೇಳೆ ನ್ಯಾಯಾಧೀಶರು, ಮೈಸೂರು ರಸ್ತೆಯ ಮೇಲ್ಸೇತುವೆಗೆ ಹೋಗಿ, ಪ್ರತಿ ಆಟೋ ರಿಕ್ಷಾದಲ್ಲಿ 10 ಜನರು ಇರುತ್ತಾರೆ. ಇದು ಅನ್ವಯಿಸುವುದಿಲ್ಲ. ಏಕೆಂದರೆ ಗೋರಿಪಾಳ್ಯದಿಂದ ಮಾರುಕಟ್ಟೆಯವರೆಗಿನ ಮೈಸೂರು ರಸ್ತೆಯ ಮೇಲ್ಸೇತುವೆ ಪಾಕಿಸ್ತಾನದಲ್ಲಿದೆ, ಭಾರತದಲ್ಲಿಲ್ಲ. ಇದು ವಾಸ್ತವ. ನೀವು ಎಷ್ಟೇ ಕಟ್ಟುನಿಟ್ಟಿನ ಪೊಲೀಸ್ ಅಧಿಕಾರಿಯನ್ನು ಇರಿಸಿದರೂ ಅಷ್ಟೇ...ಎಂದು ಹೇಳಿದ್ದಾರೆ.
ನ್ಯಾಯಾಧೀಶರ ಈ ಹೇಳಿಕೆಗೆ ವಿರೋಧಗಳು ವ್ಯಕ್ತವಾಗುತ್ತಿವೆ. ಸಾಂವಿಧಾನಿಕ ಹುದ್ದೆಯಲ್ಲಿರುವ, ಅದರಲ್ಲೂ ಜಾತ್ಯತೀತವಾಗಿ ವರ್ತಿಸಬೇಕಾದ ನ್ಯಾಯಾಧೀಶರು ಇಂತಹ ಹೇಳಿಕೆ ನೀಡುವುದು ಅವರ ಹುದ್ದೆ ಮೇಲಿನ ಭರವಸೆಯನ್ನು ಕಳಚುತ್ತದೆ ಎಂಬ ಟೀಕೆಗಳು ವ್ಯಕ್ತವಾಗುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



