ಮೈಸೂರು: ದಸರಾ ಆನೆಗಳ ನಡುವೆ ಗುದ್ದಾಟ, ರಸ್ತೆಯಲ್ಲಿ ಓಡಾಟ; ಜನ ದಿಕ್ಕಾಪಾಲು; ಬೆಚ್ಚಿಬಿದ್ದ ಅಧಿಕಾರಿಗಳು!
ರಾತ್ರಿ 7.45ರ ಸಮಯದಲ್ಲಿ ಧನಂಜಯ್ ಹಾಗೂ ಕಂಜನ್ ಆನೆಗಳ ನಡುವೆ ಗುದ್ದಾಟ ಶುರುವಾಗಿತ್ತು. ರಾತ್ರಿ ಊಟ ಮಾಡುವ ವೇಳೆ ಈ ಗಲಾಟೆ ಆರಂಭವಾಗಿತ್ತು

ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಆಗಮಿಸಿರುವ ಗಜಪಡೆಯ ಆನೆಗಳು ಶುಕ್ರವಾರ ರಾತ್ರಿ ದಿಢೀರ್ ಕಾದಾಟಕ್ಕೆ ಇಳಿದು ಅರಮನೆಯಿಂದ ಹೊರಬಂದ ಪರಿಣಾಮ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ಮಳೆಕಾರಣ ಆನೆಗೆಳಿಗೆ ಅರಮನೆ ಆವರಣದಲ್ಲೇ ತಾಲೀಮು ನಡೆಸಲಾಗಿತ್ತು. ನಂತರ ರಾತ್ರಿ 7.45ರ ಸಮಯದಲ್ಲಿ ಧನಂಜಯ್ ಹಾಗೂ ಕಂಜನ್ ಆನೆಗಳ ನಡುವೆ ಗುದ್ದಾಟ ಶುರುವಾಗಿತ್ತು. ರಾತ್ರಿ ಊಟ ಮಾಡುವ ವೇಳೆ ಈ ಗಲಾಟೆ ಆರಂಭವಾಗಿತ್ತು. ಕಂಜನ್ ಆನೆ ಮಾವುತನನ್ನು ಕೆಳಗೆ ಬೀಳಿಸಿದೆ. ನಂತರ ಅರಮನೆಯ ಜಯ ಮಾರ್ತಾಂಡ ದ್ವಾರದಿಂದ ಕಂಜನ್ ಹಾಗೂ ಧನಂಜಯ ಆನೆಗಳು ಓಡಿಕೊಂಡು ಹೊರಬಂದಿವೆ. ಕಂಜನ್ ಆನೆಯನ್ನು ಅರಮನೆಯಿಂದ ಧನಂಜಯ್ ಆನೆ ಹೊರಗೆ ಓಡಿಸಿಕೊಂಡು ಬಂದಿತ್ತು. ಇದರಿಂದ ಕೆಲಕಾಲ ಜನ, ಮಾವುತರು, ಅಧಿಕಾರಿಗಳಲ್ಲಿ ಆತಂಕ ಸೃಷ್ಟಿಯಾಯಿತು. ಆನೆಗಳು ದೊಡ್ಡಕೆರೆ ಮೈದಾನ ಬಳಿ ಬ್ಯಾರಿಕೇಡ್ ತಳ್ಳಿಕೊಂಡು ರಸ್ತೆಗೆ ಪ್ರವೇಶಿಸುತ್ತಿದ್ದಂತೆ ಜನರು ಭಯದಿಂದ ದಿಕ್ಕಾಪಾಲಾಗಿ ಓಡಿಹೋದರು.
ದೊಡ್ಡಕೆರೆ ಮೈದಾನದ ಬೆಂಗಳೂರು- ನೀಲಗಿರಿ ರಸ್ತೆಯಲ್ಲಿನ ವಾಹನಗಳನ್ನು ನೋಡುತ್ತಿದ್ದಂತೆ ಕಂಜನ್ ಬೆದರಿ ನಿಂತಿತು. ಮಾವುತರು ಕಾವಾಡಿಗರು ಸಮಾಧಾನ ಪಡಿಸಿದರು. ಯಾವುದೇ ಅನಾಹುತ ಸಂಭವಿಸಿಲ್ಲ. ಘಟನೆಯು ರಾತ್ರಿ 8ರ ಸುಮಾರು ನಡೆದಿದೆ ಎಂದು ಮೂಲಗಳು ತಿಳಿಸಿವೆ. ಕಾವಾಡಿಗಳ ಚಾಣಾಕ್ಷತದಿಂದ ಆನೆಗಳ ಆಟೋಟಕ್ಕೆ ಬ್ರೇಕ್ ಬಿದ್ದಿದೆ . ಬಳಿಕ ಆನೆಗಳನ್ನ ಅರಮನೆಗೆ ಆನೆಗಳನ್ನು ಸಿಬ್ಬಂದಿ ಕರೆತಂದಿದ್ದಾರೆ. ಸದ್ಯ ಕೋಡಿಸೋಮೇಶ್ವರ ದೇವಸ್ಥಾನ ಸಮೀಪ ಇರುವ ಆನೆಗಳು ಬಿಡಾರ ಬಿಟ್ಟಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



