ಕೊತ್ತನೂರಿನಲ್ಲಿ 22.08 ಎಕರೆ ಅರಣ್ಯ ಭೂಮಿ ವಶಪಡಿಸಿಕೊಳ್ಳಿ: ಅಧಿಕಾರಿಗಳಿಗೆ ಸರ್ಕಾರ ಸೂಚನೆ
ಬೆಂಗಳೂರು ಪೂರ್ವ ತಾಲೂಕು ಕೆ.ಆರ್.ಪುರ-2 ಹೋಬಳಿಯ ಕೊತ್ತನೂರು ಗ್ರಾಮದ ಸರ್ವೆ ನಂ.48ರಲ್ಲಿ 8 ಗುಂಟೆ ಜಮೀನನ್ನು ಅರಣ್ಯ ಇಲಾಖೆಗೆ 2000 ಇಸವಿಯಲ್ಲಿ ವಹಿಸಲಾಗಿರುತ್ತದೆ.

ಬೆಂಗಳೂರು: ಕೊತ್ತನೂರಿನ ಸರ್ವೆ ನಂ.48ರಲ್ಲಿ ಅರಣ್ಯ ಇಲಾಖೆಗೆ ವಹಿಸಲಾದ 22.08ಎಕರೆ ಜಮೀನಿನ ಮರುವಶಕ್ಕೆ ಪ್ರಕ್ರಿಯೆ ಆರಂಭಿಸಬೇಕು ಎಂದು ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ಅವರು ಶುಕ್ರವಾರ ಸೂಚನೆ ನೀಡಿದ್ದಾರೆ.
ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ಬೆಂಗಳೂರು ಪೂರ್ವ ತಾಲೂಕು ಕೆ.ಆರ್.ಪುರ-2 ಹೋಬಳಿಯ ಕೊತ್ತನೂರು ಗ್ರಾಮದ ಸರ್ವೆ ನಂ.48ರಲ್ಲಿ 8 ಗುಂಟೆ ಜಮೀನನ್ನು ಅರಣ್ಯ ಇಲಾಖೆಗೆ 2000 ಇಸವಿಯಲ್ಲಿ ವಹಿಸಲಾಗಿರುತ್ತದೆ. ಆದರೆ, ಈ ಹಿಂದೆ ಬೆಂಗಳೂರು ನಗರದಲ್ಲಿ ಕಾರ್ಯ ನಿರ್ವಹಿಸಿರುವ ಅರಣ್ಯ ಇಲಾಖೆಯ ಅಧಿಕಾರಿಗಳು ಇಲಾಖೆಗೆ ಮಂಜೂರಾದ ಭೂಮಿಯನ್ನು ವಶಕ್ಕೆ ಪಡೆದು ಅರಣ್ಯ ಬೆಳೆಸುವಲ್ಲಿ ವಿಫಲರಾಗಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಸ್ತುತ ಈ ಸರ್ವೆ ನಂಬರ್'ಗೆ ಸಂಬಂಧಿಸಿದಂತೆ ಪಹಗಣಿ (ಆರ್.ಟಿ.ಸಿ)ಯಲ್ಲಿ ಒಟ್ಟು 13 ಎಕರೆ 10 ಗುಂಟೆ (4 ಎಕರೆ, 1,02 ಎಕರೆ ಮತ್ತು 8,08 ಎಕರೆ) ಬೆಂಗಳೂರುಪ ಜಿಲ್ಲಾಧಿಕಾರಿಗಳ ಆದೇಶದಂತೆ ಎಂ.ಆರ್ ಆಗಿರುತ್ತದೆ. ಸದರಿ 22 ಎಕರೆ 8 ಗುಂಟೆ ಭೂಮಿಯ ಸಂಪೂರ್ಣ ದಾಖಲೆಗಳನ್ನು ಪಡೆದುಕೊಂಡು, ಅರಣ್ಯ ಒತ್ತುವರಿ ತೆರವಿಗೆ 64ಎ ಸೆಕ್ಷನ್ ಅಡಿಯಲ್ಲಿ ಕ್ರಮ ವಹಿಸಲು ಕೂಲೇ ಕ್ರಮ ವಹಿಸುವಂತೆ ಸೂಚಿಸಲು ಮತ್ತು ಈ ಸಂಬಂಧ ಈ ವರೆಗೂ ಕೈಗೊಂಡಿರುವ ಕ್ರಮದ ವಿವರವನ್ನು 2 ದಿನಗಳ ಒಳಗಾಗಿ ಕಚೇರಿಗೆ ಸಲ್ಲಿಸುವಂತೆ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



