ರಾಜ್ಯ

ಮುನಿರತ್ನ ಪ್ರಕರಣ: ತನಿಖೆಗೆ SIT ರಚಿಸುವಂತೆ ಸರ್ಕಾರಕ್ಕೆ ಒಕ್ಕಲಿಗ ನಾಯಕರ ಮನವಿ

ಕಂದಾಯ ಸಚಿವ ಕೃಷ್ಣ ಬೈರೇಗೌಡ, ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್‌ ನೇತೃತ್ವದಲ್ಲಿ ತೆರಳಿದ್ದ ನಿಯೋಗ, ಮುನಿರತ್ನ ವಿರುದ್ಧ ಕಮಿಷನ್‌ ದಂಧೆ, ಅತ್ಯಾಚಾರ, ಹನಿಟ್ರ್ಯಾಪ್‌, ಎಚ್‌ಐವಿ ಹರಡುವಿಕೆ ಸೇರಿದಂತೆ ವಿವಿಧ ಆರೋಪಗಳು ಇವೆ.

ಮುನಿರತ್ನ ಪ್ರಕರಣ: ತನಿಖೆಗೆ SIT ರಚಿಸುವಂತೆ ಸರ್ಕಾರಕ್ಕೆ ಒಕ್ಕಲಿಗ ನಾಯಕರ ಮನವಿ
ಒಕ್ಕಲಿಗ ಸಮುದಾಯದ ಸಚಿವರು, ಶಾಸಕರ ನಿಯೋಗದವರು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸುತ್ತಿರುವುದು.
Published On :

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಒಕ್ಕಲಿಗ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶುಕ್ರವಾರ ಮನವಿ ಮಾಡಿದ್ದಾರೆ.

ಕಂದಾಯ ಸಚಿವ ಕೃಷ್ಣ ಬೈರೇಗೌಡ, ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್‌ ನೇತೃತ್ವದಲ್ಲಿ ತೆರಳಿದ್ದ ನಿಯೋಗ, ಮುನಿರತ್ನ ವಿರುದ್ಧ ಕಮಿಷನ್‌ ದಂಧೆ, ಅತ್ಯಾಚಾರ, ಹನಿಟ್ರ್ಯಾಪ್‌, ಎಚ್‌ಐವಿ ಹರಡುವಿಕೆ ಸೇರಿದಂತೆ ವಿವಿಧ ಆರೋಪಗಳು ಇವೆ. ಹಾಗಾಗಿ, ಎಲ್ಲಾ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಬೇಕು ಎಂದು ಮನವಿ ಮಾಡಿಕೊಂಡರು.

ಈ ಮನವಿಗೆ ಸಿದ್ದರಾಮಯ್ಯ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮುನಿರತ್ನ ಅವರ ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚನೆಗೆ ಮುಂದಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಭೇಟಿಯ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಕೃಷ್ಣ ಬೈರೇಗೌಡ ಅವರು, ಮುನಿರತ್ನ ಒಕ್ಕಲಿಗರನ್ನು ಅವಹೇಳನ ಮಾಡಿದ್ದಾರೆ. ಸಮುದಾಯದ ಮೇಲೆ ದಾಳಿ ನಡೆದಾಗ ಎಲ್ಲರೂ ಎಚ್ಚೆತ್ತುಕೊಂಡು ಖಂಡಿಸಬೇಕು. ರಾಜ್ಯದಲ್ಲಿ ಒಕ್ಕಲಿಗ ಸಮಾಜ ಗೌರವಯುತವಾಗಿ ಬಾಳಿಕೊಂಡು ಬಂದಿದೆ. ವಿನಾಕಾರಣ ಅವಹೇಳನ ಮಾಡುವುದು ಗೌರವಕ್ಕೆ ಚ್ಯುತಿ ತರುತ್ತದೆ ಎಂದು ಹೇಳಿದರು.

ಗುರುವಾ ತಡರಾತ್ರಿವರೆಗೆ ನಗರದ ಖಾಸಗಿ ಹೊಟೇಲ್​​ನಲ್ಲಿ ಕಾಂಗ್ರೆಸ್ ಒಕ್ಕಲಿಗ ಸಚಿವರು, ಶಾಸಕರು, ನಾಯಕರು ಸಭೆ ನಡೆಸಿ ಮುನಿರತ್ನ ಜಾತಿ ನಿಂದನೆ ಆರೋಪ ಸಂಬಂಧ ಚರ್ಚೆ ನಡೆಸಿದ್ದರು. ಎಸ್​ಐಟಿ ತನಿಖೆಗೆ ಒತ್ತಾಯಿಸುವ ನಿಟ್ಟಿನಲ್ಲಿ ಸಿಎಂ ಅವರನ್ನು ಭೇಟಿ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿತ್ತು.

ಜಾತಿ ನಿಂದನೆ ಸೇರಿದಂತೆ ಯಾವೆಲ್ಲ ಪ್ರಕರಣಗಳು ಮುನಿರತ್ನ ವಿರುದ್ಧ ದಾಖಲಾಗಿವೆಯೋ ಆ ಎಲ್ಲ ಪ್ರಕರಣಗಳ ಕುರಿತು ಎಸ್​ಐಟಿ ಮೂಲಕ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಲು ತೀರ್ಮಾನಿಸಿತ್ತು. ಸಿಎಂ ಭೇಟಿ ಬಳಿಕ ರಾಜ್ಯಪಾಲರ ಅಂಗಳಕ್ಕೂ ಪ್ರಕರಣವನ್ನು ತೆಗೆದುಕೊಂಡು ಹೋಗಲು ನಿರ್ಧರಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.