ರಾಜ್ಯ

ಶಿರೂರು ಗುಡ್ಡ ಕುಸಿತ: 72 ದಿನಗಳ ನಂತರ ಕೇರಳದ ಚಾಲಕ ಅರ್ಜುನ್ ಮೃತದೇಹ ಪತ್ತೆ

ಗುಡ್ಡ ಕುಸಿತದಲ್ಲಿ 11 ಮಂದಿ ಮಣ್ಣಿನಲ್ಲಿ ಕೊಚ್ಚಿ ಹೋಗಿದ್ದರು. ಆ ಪೈಕಿ 8 ಮಂದಿ ಮೃತದೇಹ ಪತ್ತೆಯಾಗಿತ್ತು. ಆದರೆ ಕೇರಳ ಮೂಲದ ಲಾರಿ ಚಾಲಕ ಅರ್ಜುನ್, ಶಿರೂರಿನ ಲೋಕೇಶ್ ನಾಯ್ಕ ಹಾಗೂ ಜಗನ್ನಾಥ ನಾಯ್ಕ ಎಂಬುವವರಿಗಾಗಿ ಹುಡುಕಾಟ ನಡೆಸಲಾಗಿತ್ತು.

ಶಿರೂರು ಗುಡ್ಡ ಕುಸಿತ: 72 ದಿನಗಳ ನಂತರ ಕೇರಳದ ಚಾಲಕ ಅರ್ಜುನ್ ಮೃತದೇಹ ಪತ್ತೆ
ಶೋಧ ಕಾರ್ಯಾಚರಣೆ
Published On :

ಕಾರವಾರ: ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತದ ವೇಳೆ ನಾಪತ್ತೆಯಾಗಿದ್ದ ಕೇರಳ ಮೂಲದ ಚಾಲಕ ಅರ್ಜುನ್ ಮೃತದೇಹ ಬರೋಬ್ಬರಿ 72 ದಿನಗಳ ಬಳಿಕ ಪತ್ತೆಯಾಗಿದೆ.

ಜುಲೈ 16ರಂದು ಸಂಭವಿಸಿದ್ದ ಗುಡ್ಡ ಕುಸಿತದಲ್ಲಿ 11 ಮಂದಿ ಮಣ್ಣಿನಲ್ಲಿ ಕೊಚ್ಚಿ ಹೋಗಿದ್ದರು. ಆ ಪೈಕಿ 8 ಮಂದಿ ಮೃತದೇಹ ಪತ್ತೆಯಾಗಿತ್ತು. ಆದರೆ ಕೇರಳ ಮೂಲದ ಲಾರಿ ಚಾಲಕ ಅರ್ಜುನ್, ಶಿರೂರಿನ ಲೋಕೇಶ್ ನಾಯ್ಕ ಹಾಗೂ ಜಗನ್ನಾಥ ನಾಯ್ಕ ಎಂಬುವವರಿಗಾಗಿ ಹುಡುಕಾಟ ನಡೆಸಲಾಗಿತ್ತು. ಇದೀಗ ಲಾರಿಯೊಳಗೆ ಅರ್ಜುನನ ಮೃತದೇಹ ಎರಡು ತುಂಡಾಗಿ ಪತ್ತೆ ಪತ್ತೆಯಾಗಿದೆ.

ಗಂಗಾವಳಿ ನದಿಯಿಂದ ರಕ್ಷಣಾ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು. ಇಂದು ಅರ್ಜುನ್ ಚಲಾಯಿಸುತ್ತಿದ್ದ ಲಾರಿ ಪತ್ತೆಯಾಗಿತ್ತು. ಇದನ್ನು ಮೇಲೆತ್ತುವ ವೇಳೆ ಲಾರಿಯಲ್ಲೇ ಅರ್ಜುನ್ ಮೃತದೇಹ ಪತ್ತೆಯಾಗಿದೆ. ಇನ್ನು ಗುಡ್ಡ ಕುಸಿತದ ರಭಸಕ್ಕೆ ನದಿಗೆ ಬಿದ್ದು ಲಾರಿ ನಜ್ಜುಗುಜ್ಜಾಗಿದೆ. ಇದೇ ವೇಳೆ ಮತ್ತೊಂದು ಮೃತದೇಹ ಪತ್ತೆಯಾಗಿದ್ದು ಅದು ಯಾರು ಎಂಬುದು ಇನ್ನಷ್ಟೇ ಪತ್ತೆಯಾಗಬೇಕಿದೆ.

ಲಾರಿ ಕ್ಯಾಬಿನ್‌ನಲ್ಲಿ ಶವ ಪತ್ತೆಯಾಗಿದೆ ಎಂದು ಕಾರವಾರದ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಎಂ ತಿಳಿಸಿದ್ದಾರೆ. ಅರ್ಜುನ್ ಶವ ಪತ್ತೆಯಾಗುವುದರೊಂದಿಗೆ ಸಾವಿನ ಸಂಖ್ಯೆ ಒಂಬತ್ತಕ್ಕೆ ಏರಿಕೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.